ಬೆಂಗಳೂರು : ರಾಜ್ಯದ ವಕ್ಫ್ ಮಂಡಳಿಯ ಅಭಿವೃದ್ಧಿಗೆ ಪರಿಣಾಮಕಾರಿಯಾದ ಆಡಳಿತ ನೀಡುವಂತೆ ನೂತನ ಅಧ್ಯಕ್ಷ ಮಹಮ್ಮದ್ ಷಫಿ ಸಾ-ಆದಿ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು.
ಕರ್ನಾಟಕ ರಾಜ್ಯ ವಕ್ಫ್ ಮಂಡಳಿಗೆ ಪ್ರಥಮ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಬಿಜೆಪಿ ಅಭ್ಯರ್ಥಿ ಮಹಮ್ಮದ್ ಷಫಿ ಸಾ-ಆದಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದರು. ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಸಾಥ್ ನೀಡಿದರು.
ಈ ವೇಳೆ ಮಹಮ್ಮದ್ ಷಫಿ ಸಾ-ಆದಿ ಮತ್ತು ಶಶಿಕಲಾ ಜೊಲ್ಲೆ ಅವರನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅಭಿನಂದಿಸಿದರು. ನಂತರ ಕೆಲಕಾಲ ಮಾತುಕತೆ ನಡೆಸಿದರು. ವಕ್ಫ್ ಮಂಡಳಿ ಮುನ್ನಡೆಸುವಲ್ಲಿನ ಸವಾಲು ಮತ್ತು ಸರ್ಕಾರದ ಸಹಕಾರದ ಕುರಿತು ಸಮಾಲೋಚನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಮಖ್ಯಮಂತ್ರಿಗಳು, ಕರ್ನಾಟಕ ರಾಜ್ಯದ ವಕ್ಫ್ ಮಂಡಳಿಯ ಇತಿಹಾಸದಲ್ಲಿ ಮೊದಲ ಬಾರಿಗೆ ಬಿಜೆಪಿ ಅಭ್ಯರ್ಥಿ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಸಂತಸದ ವಿಷಯ ಎಂದು ಹೇಳಿದರು.
ಇದನ್ನೂ ಓದಿ: ಮೈಸೂರು: ಶಕ್ತಿಧಾಮಕ್ಕೆ ಭೇಟಿ ನೀಡಿದ ಶಿವರಾಜ್ ಕುಮಾರ್