ವಾರಣಾಸಿ: ಉತ್ತರ ಪ್ರದೇಶದ ವಾರಣಾಸಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಪತ್ನಿ ಚನ್ನಮ್ಮ ಅವರೊಂದಿಗೆ ಇಂದು ಬೆಳಗ್ಗೆ ಕಾಶಿ ವಿಶ್ವನಾಥನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಬಗ್ಗೆ ಸಿಎಂ ಬೊಮ್ಮಾಯಿ ಅವರು ಟ್ವೀಟ್ ಮೂಲಕ ದೇವರ ದರ್ಶನ ಪಡೆದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
-
ಮುಖ್ಯಮಂತ್ರಿ @BSBommai ಅವರು ತಮ್ಮ ಪತ್ನಿ ಚನ್ನಮ್ಮ ಅವರೊಂದಿಗೆ ಇಂದು ಬೆಳಿಗ್ಗೆ ಕಾಶಿ ವಿಶ್ವನಾಥನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.#KashiVishwanathDham#DivyaKashiBhavyaKashi pic.twitter.com/diHZKDrYkr
— CM of Karnataka (@CMofKarnataka) December 14, 2021 " class="align-text-top noRightClick twitterSection" data="
">ಮುಖ್ಯಮಂತ್ರಿ @BSBommai ಅವರು ತಮ್ಮ ಪತ್ನಿ ಚನ್ನಮ್ಮ ಅವರೊಂದಿಗೆ ಇಂದು ಬೆಳಿಗ್ಗೆ ಕಾಶಿ ವಿಶ್ವನಾಥನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.#KashiVishwanathDham#DivyaKashiBhavyaKashi pic.twitter.com/diHZKDrYkr
— CM of Karnataka (@CMofKarnataka) December 14, 2021ಮುಖ್ಯಮಂತ್ರಿ @BSBommai ಅವರು ತಮ್ಮ ಪತ್ನಿ ಚನ್ನಮ್ಮ ಅವರೊಂದಿಗೆ ಇಂದು ಬೆಳಿಗ್ಗೆ ಕಾಶಿ ವಿಶ್ವನಾಥನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.#KashiVishwanathDham#DivyaKashiBhavyaKashi pic.twitter.com/diHZKDrYkr
— CM of Karnataka (@CMofKarnataka) December 14, 2021
ಗಂಗಾ ಹಾಗೂ ವಾರಾಣಸಿಯ ಕಾಶಿ ವಿಶ್ವನಾಥ ದೇವಾಲಯಕ್ಕೆ ಸಂಪರ್ಕ ಕಲ್ಪಿಸುವ ಕಾಶಿ ವಿಶ್ವನಾಥ ಕಾರಿಡಾರ್ ಅನ್ನು ಪ್ರಧಾನಿ ನರೇಂದ್ರ ಮೋದಿ ನಿನ್ನೆ ಉದ್ಘಾಟಿಸಿದ್ದರು. ಈ ಕಾರ್ಯಕ್ರಮಕ್ಕೆ ಸಿಎಂ ಬೊಮ್ಮಾಯಿ ಅವರಿಗೂ ಆಹ್ವಾನ ನೀಡಲಾಗಿದೆ.
ವಾರಣಾಸಿಯಲ್ಲಿ ಬಿಜೆಪಿ ಆಡಳಿತ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಪ್ರಧಾನಿ ಮೋದಿ ಸಭೆ ನಡೆಸಲಿದ್ದಾರೆ. ಅಸ್ಸೋಂ, ಅರುಣಾಚಲ ಪ್ರದೇಶ, ಗೋವಾ, ಗುಜರಾತ್, ಹರಿಯಾಣ, ಹಿಮಾಚಲ ಪ್ರದೇಶ, ಕರ್ನಾಟಕ, ಮಧ್ಯಪ್ರದೇಶ, ಮಣಿಪುರ, ತ್ರಿಪುರ, ಉತ್ತರ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಯಲಿದೆ. ಬಿಹಾರ ಮತ್ತು ನಾಗಾಲ್ಯಾಂಡ್‌ನ ಉಪಮುಖ್ಯಮಂತ್ರಿಗಳೂ ಸಹ ಪಾಲ್ಗೊಳ್ಳಲಿದ್ದಾರೆ.
ಇದನ್ನೂ ಓದಿ: ವಾರಣಾಸಿಯಲ್ಲಿ ಬಿಜೆಪಿ ಆಡಳಿತದ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಸಭೆ: ಮುಖ್ಯಮಂತ್ರಿ ಬೊಮ್ಮಾಯಿ ಭಾಗಿ