ಬೆಂಗಳೂರು: ಬಿಜೆಪಿ ಕೋರ್ ಕಮಿಟಿ ಸಭೆಯ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮತ್ತು ಬಿಜೆಪಿ ನಾಯಕರು ಆರ್ಎಸ್ಎಸ್ ಕಚೇರಿಗೆ ತೆರಳಿ ಮುಖಂಡರ ಜೊತೆ ಸುದೀರ್ಘ ಸಭೆ ನಡೆಸಿದ್ದಾರೆ. ಚಾಮರಾಜಪೇಟೆಯಲ್ಲಿರುವ ಕೇಶವ ಶಿಲ್ಪದಲ್ಲಿ 3 ಗಂಟೆಗೂ ಹೆಚ್ಚು ಕಾಲ ಸಭೆ ನಡೆದಿದೆ. ಪರಿಷತ್ ಹಾಗೂ ರಾಜ್ಯಸಭೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಸಂಬಂಧ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.
ಆರ್ಎಸ್ಎಸ್ ನಾಯಕರ ಜೊತೆಗಿನ ಚರ್ಚೆಯ ಬಳಿಕ ಕೇಶವ ಶಿಲ್ಪದಿಂದ ಸಿಎಂ ಬೊಮ್ಮಾಯಿ, ಸಿ.ಟಿ.ರವಿ ಹಾಗೂ ಪ್ರಹ್ಲಾದ್ ಜೋಶಿ ಒಂದೇ ಕಾರಿನಲ್ಲಿ ತೆರಳಿದರು. ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆಯೂ ಚರ್ಚೆ ನಡೆಸಲಾಗಿದೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ಸಭೆಯಲ್ಲಿ ಭಾಗಿಯಾಗಿದ್ದರು.
ಇದನ್ನೂ ಓದಿ: ಸಂಪುಟದ ಕುರಿತು ಸಿಎಂ ಬೊಮ್ಮಾಯಿ ನಿರ್ಧರಿಸಲಿದ್ದಾರೆ: ಅರುಣ್ ಸಿಂಗ್