ಬೆಂಗಳೂರು: ಗುಜರಾತ್ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಇಂದು ಪ್ರಮಾಣವಚನ ಸ್ವೀಕಾರ ಮಾಡಲಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಆರ್. ಅಶೋಕ್, ಮುರುಗೇಶ ನಿರಾಣಿ ಹಾಗೂ ಡಾ.ಸುಧಾಕರ್ ಅವರು ಅಹಮದಾಬಾದ್ಗೆ ತೆರಳಿದ್ದಾರೆ.
ಅಹಮದಾಬಾದ್ನ ಗಾಂಧಿನಗರದಲ್ಲಿರುವ ರಾಜಭವನದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ವಿಧಾನಸಭೆ ಅಧಿವೇಶನ ಆರಂಭಗೊಳ್ಳುತ್ತಿದ್ದಂತೆ ಸಂತಾಪ ಸೂಚನೆ ನಡೆದಿದ್ದು, ಬಳಿಕ ಮುಖ್ಯಮಂತ್ರಿಗಳು ಸದನದ ಒಪ್ಪಿಗೆ ಪಡೆದು ಸಮಾರಂಭಕ್ಕೆ ಹಾಜರಾಗಲು ಪ್ರಯಾಣ ಬೆಳೆಸಿದ್ದಾರೆ.
ಹೆಚ್ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಗುಜರಾತಿನ ಅಹಮದಾಬಾದ್ನಲ್ಲಿರುವ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣ ತೆರಳಿದ್ದಾರೆ. ಗಾಂಧಿನಗರದಲ್ಲಿರುವ ರಾಜಭವನಕ್ಕೆ ತಲುಪಿ, ನೂತನ ಮುಖ್ಯಮಂತ್ರಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.
ಮಧ್ಯಾಹ್ನ 3.30ಕ್ಕೆ ಅಹಮದಾಬಾದ್ನಿಂದ ಹೊರಟು ಸಂಜೆ 5.30ಕ್ಕೆ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ವಾಪಸ್ ಆಗಲಿದ್ದು, ಸಂಜೆ 6.30 ಕ್ಕೆ ಕ್ಯಾಪಿಟಲ್ ಹೋಟೆಲ್ನಲ್ಲಿ ನಡೆಯುವ ಬಿಜೆಪಿ ಶಾಸಕರ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಇದನ್ನೂ ಓದಿ:ದೆಹಲಿಯಲ್ಲಿ ನಿಲ್ಲದ ವರುಣಾರ್ಭಟ.. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ