ಬೆಂಗಳೂರು: ಜಿಎಸ್ಟಿ ಕೌನ್ಸಿಲ್ ಸಭೆ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿ ಸಂಜೆ ವಾಪಸ್ ಆಗಲಿದ್ದು, ಈ ವೇಳೆ ಹೈಕಮಾಂಡ್ನ ಯಾವುದೇ ನಾಯಕರನ್ನು ಭೇಟಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ದೆಹಲಿಗೆ ತೆರಳುವ ಮುನ್ನ ಆರ್.ಟಿ.ನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ಹೋಗುತ್ತಿದ್ದೇನೆ, ಸಭೆ ನಂತರ ಖಾಸಗಿ ವಾಹಿನಿಯ ಸಂದರ್ಶನದಲ್ಲಿ ಭಾಗಿಯಾಗಿ ಸಂಜೆ ಬೆಂಗಳೂರಿಗೆ ವಾಪಸ್ ಆಗಲಿದ್ದೇನೆ ಎಂದರು.
ಈ ಪ್ರವಾಸದ ವೇಳೆ ಹೈಕಮಾಂಡ್ನ ಯಾವುದೇ ನಾಯಕರನ್ನು ಭೇಟಿ ಆಗುತ್ತಿಲ್ಲ, ಅಲ್ಪಾವಧಿಯ ಪ್ರವಾಸ ಇದಾಗಿದೆ. ಅಲ್ಲದೇ ನಾಳೆ ನಮ್ಮ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಇಲ್ಲಿಯೇ ಬರುತ್ತಾರೆ ಹಾಗಾಗಿ ದೆಹಲಿಯಲ್ಲಿ ಯಾರನ್ನೂ ಭೇಟಿಯಾಗುವುದಿಲ್ಲ ಎಂದರು.
ಇದನ್ನೂ ಓದಿ : ಜೂನ್ 20ಕ್ಕೆ ರಾಜ್ಯಕ್ಕೆ ಪ್ರಧಾನಿ: ಸಬ್ ಅರ್ಬನ್ ರೈಲ್ವೆ ಸೇರಿ ಹಲವು ಯೋಜನೆಗಳಿಗೆ ಚಾಲನೆ