ETV Bharat / city

ಸರ್ಕಾರಿ ಆಸ್ಪತ್ರೆಗಳಲ್ಲಿ ಕನಿಷ್ಠ ದರದಲ್ಲಿ ಗುಣಮಟ್ಟದ ಔಷಧ ದೊರಕಬೇಕು : ಸಿಎಂ ಬೊಮ್ಮಾಯಿ ಸೂಚನೆ

ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಕಡ್ಡಾಯವಾಗಿ ಒಂದು ಇಂಟರ್ನ್‍ಶಿಪ್ ಕೈಗೊಳ್ಳುವಂತೆ ರಾಷ್ಟ್ರೀಯ ವೈದ್ಯಕೀಯ ಮಂಡಳಿಗೆ ಪತ್ರ ಬರೆಯುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಜಿಲ್ಲಾ ಆರೋಗ್ಯಾಧಿಕಾರಿಗಳನ್ನು ಆಸ್ಪತ್ರೆಯ ಆಡಳಿತಾತ್ಮಕ ಜವಾಬ್ದಾರಿಯಿಂದ ಮುಕ್ತಗೊಳಿಸಿ ಆಸ್ಪತ್ರೆಗಳ ಆಡಳಿತ ನಿರ್ವಹಣೆಗೆ ಕೆಎಎಸ್ ಅಧಿಕಾರಿಗಳನ್ನು ನೇಮಿಸಬೇಕು..

cm bommai meeting on health and medical education department
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಭೆ
author img

By

Published : Feb 4, 2022, 7:59 PM IST

ಬೆಂಗಳೂರು : ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಕನಿಷ್ಠ ದರದಲ್ಲಿ ಗುಣಮಟ್ಟದ ಔಷಧ ದೊರಕಬೇಕು. ಈ ನಿಟ್ಟಿನಲ್ಲಿ ಔಷಧ ವಿತರಣೆಯ ವಿಕೇಂದ್ರೀಕರಣವಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಸರ್ಕಾರಿ ಔಷಧ ಮಳಿಗೆಗಗಳು ಸ್ಥಳೀಯ ಮಟ್ಟದಲ್ಲಿಯೇ ಇದ್ದು, ಅಗತ್ಯ ಔಷಧಗಳನ್ನು ಹೊಂದಿರಬೇಕು.

ದಾಸ್ತಾನು ಹಾಗೂ ಲೆಕ್ಕಪತ್ರಗಳೆಲ್ಲವೂ ಡಿಜಿಟಲೀಕರಣವಾಗಬೇಕು. ಅನಗತ್ಯ ಔಷಧಗಳನ್ನು ಕೊಳ್ಳವಂತಿಲ್ಲ. ಔಷಧಗಳ ಗುಣಮಟ್ಟವನ್ನು ಖಾತ್ರಿಪಡಿಸಿಕೊಳ್ಳಬೇಕು. ಇತರೆ ರಾಜ್ಯಗಳಲ್ಲಿ ಔಷಧಗಳ ದರ ಪರಿಶೀಲಿಸಿ ನೇರವಾಗಿ ಔಷಧ ಉತ್ಪಾದಕರೊಂದಿಗೆ ಮಾತುಕತೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

cm bommai meeting on health and medical education department
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಭೆ

ತಾಯಿ ಮಕ್ಕಳ ಪೌಷ್ಟಿಕತೆಯ ಮಟ್ಟ ಸುಧಾರಣೆಗೆ ಕ್ರಮ : ತಾಯಂದಿರ ಹಾಗೂ ಮಕ್ಕಳ ಆರೋಗ್ಯ ಕಾಪಾಡಲು ಸಮಗ್ರ ಪೌಷ್ಟಿಕ ಯೋಜನೆಯನ್ನು ರೂಪಿಸಿಬೇಕು. ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಈ ಬಗ್ಗೆ ಹೆಚ್ಚಿನ ಗಮನಹರಿಸಿ, ತಾಯಂದಿರ ಮತ್ತು ಮಕ್ಕಳ ಪೌಷ್ಟಿಕ ಮಟ್ಟವನ್ನು ಸುಧಾರಿಸಲು ಅಗತ್ಯವಿರುವ ಅನುದಾನ ಪಡೆದು ಮುಂದಿನ ಒಂದು ವರ್ಷದಲ್ಲಿ ಈ ನಿಟ್ಟಿನಲ್ಲಿ ಮಹತ್ತರ ಬದಲಾವಣೆ ತರಬೇಕೆಂದು ಮುಖ್ಯಮಂತ್ರಿಗಳು ಸೂಚಿಸಿದರು.

ಅಗತ್ಯವಿರುವ ಜಿಲ್ಲೆಗಳಲ್ಲಿ ಮಾತ್ರ ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸುವಂತೆ ಸೂಚಿಸಿದ ಮುಖ್ಯಮಂತ್ರಿಗಳು, ಜಿಲ್ಲಾಮಟ್ಟದಲ್ಲಿ ಡಯಾಲಿಸಿಸ್ ಕೇಂದ್ರಗಳನ್ನು ಪಿಪಿಪಿ ಮಾದರಿಯಲ್ಲಿ ಸ್ಥಾಪಿಸಲು ಕ್ರಮವಹಿಸಲು ತಿಳಿಸಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಕಡ್ಡಾಯವಾಗಿ ಒಂದು ಇಂಟರ್ನ್‍ಶಿಪ್ ಕೈಗೊಳ್ಳುವಂತೆ ರಾಷ್ಟ್ರೀಯ ವೈದ್ಯಕೀಯ ಮಂಡಳಿಗೆ ಪತ್ರ ಬರೆಯುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಜಿಲ್ಲಾ ಆರೋಗ್ಯಾಧಿಕಾರಿಗಳನ್ನು ಆಸ್ಪತ್ರೆಯ ಆಡಳಿತಾತ್ಮಕ ಜವಾಬ್ದಾರಿಯಿಂದ ಮುಕ್ತಗೊಳಿಸಿ ಆಸ್ಪತ್ರೆಗಳ ಆಡಳಿತ ನಿರ್ವಹಣೆಗೆ ಕೆಎಎಸ್ ಅಧಿಕಾರಿಗಳನ್ನು ನೇಮಿಸಬೇಕು.

ಚಿತ್ರದುರ್ಗದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಪ್ರಾರಂಭಿಸಲು ಸರ್ಕಾರಿ ಆದೇಶ ಹೊರಡಿಸಿ ಮೊದಲನೇ ಮತ್ತು 2ನೇ ವರ್ಷಕ್ಕೆ ಅಗತ್ಯ ಮೂಲಸೌಲಭ್ಯಗಳನ್ನು ನಿರ್ಮಿಸಿ, ಹಂತ ಹಂತವಾಗಿ ಸೌಲಭ್ಯಗಳನ್ನು ವಿಸ್ತರಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಇದನ್ನೂ ಓದಿ: ಕೋವಿಡ್ ಮಾರ್ಗಸೂಚಿ ಸಡಿಲಿಸಿದ ಹೈಕೋರ್ಟ್ : ಫೆಬ್ರವರಿ 7ರಿಂದ ಹೊಸ ನಿಯಮ ಜಾರಿ

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.