ETV Bharat / city

ವಿದ್ಯಾರ್ಥಿಗಳೇ ಆತಂಕವಿಲ್ಲದೆ ಶಾಲೆಗೆ ಬನ್ನಿ; ಸಿಎಂ ಬೊಮ್ಮಾಯಿ ಕರೆ - ಸಿಎಂ ಬೊಮ್ಮಾಯಿ

ಶಿಕ್ಷಕರಿಗೆ ವ್ಯಾಕ್ಸಿನೇಷನ್‌ ಆಗಿದೆ, ಶಾಲೆಗಳನ್ನು ಸ್ಯಾನಿಟೈಜ್​ ಮಾಡಲಾಗಿದೆ. ಅಂತರ ಕಾಯ್ದುಕೊಂಡೇ ತರಗತಿಗಳನ್ನು ನಡೆಸಲಾಗುತ್ತದೆ. ಯಾವುದೇ ಆತಂಕ ಇಲ್ಲದೆ ಮಕ್ಕಳು ಶಾಲೆಗೆ ಬರಬಹುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

cm bommai
ಸಿಎಂ ಬೊಮ್ಮಾಯಿ
author img

By

Published : Aug 21, 2021, 9:14 AM IST

Updated : Aug 21, 2021, 9:20 AM IST

ಬೆಂಗಳೂರು: ಸೋಮವಾರದಿಂದ ರಾಜ್ಯದಲ್ಲಿ 9ನೇ ತರಗತಿಯಿಂದ ದ್ವಿತೀಯ ಪಿಯುಸಿ ವರೆಗಿನ ಶಾಲಾ-ಕಾಲೇಜುಗಳು ಆರಂಭವಾಗಲಿದ್ದು, ಸರ್ಕಾರ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಯಾವುದೇ ಆತಂಕ ಇಲ್ಲದೆ ಮಕ್ಕಳು ಶಾಲೆಗೆ ಬರಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದ್ದಾರೆ.

ಆರ್‌ಟಿ ನಗರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆಗಸ್ಟ್ 23ರ ಶಾಲೆ ಆರಂಭದ ದಿನ ಬೆಂಗಳೂರಿನ ಕೆಲ ಶಾಲೆಗಳಿಗೆ ಭೇಟಿ ಕೊಡುತ್ತೇನೆ. ನನ್ನ ಜೊತೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಕೂಡ ಬರುತ್ತಾರೆ. ಶಾಲೆಗಳ ಆರಂಭಕ್ಕೆ ಎಲ್ಲಾ ರೀತಿಯ ಸಿದ್ಧತೆ ಆಗಿದೆ. ಶಿಕ್ಷಕರಿಗೆ ವ್ಯಾಕ್ಸಿನೇಷನ್‌ ಆಗಿದೆ, ಶಾಲೆಗಳನ್ನು ಸ್ಯಾನಿಟೈಜ್ ಮಾಡಲಾಗಿದೆ. ಅಂತರ ಕಾಯ್ದುಕೊಂಡೇ ತರಗತಿಗಳನ್ನು ನಡೆಸಲಾಗುತ್ತದೆ, ದಿನ ಬಿಟ್ಟು ದಿನದಂತೆ ಬ್ಯಾಚ್​ಗಳನ್ನು ಮಾಡಿ ಶಾಲೆ ನಡೆಸಲಾಗುತ್ತದೆ. ಪೋಷಕರ ಸಮ್ಮತಿಯನ್ನ ಪಡೆದೇ ಮಕ್ಕಳು ಶಾಲೆಗೆ ಬರಬೇಕು, ಯಾವುದೇ ಆತಂಕ ಇಲ್ಲದೆ ವಿದ್ಯಾರ್ಥಿಗಳು ಶಾಲೆಗೆ ಬರಬಹುದು ಎಂದರು.

ಆರ್‌ಟಿ ನಗರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಸಿಎಂ ಬೊಮ್ಮಾಯಿ

ಎಲ್ಲ ಪೋಷಕರು ಕೂಡ ವ್ಯಾಕ್ಸಿನ್ ಹಾಕಿಸಿಕೊಳ್ಳಬೇಕು

ಮಕ್ಕಳ ಆರೋಗ್ಯದ ಬಗ್ಗೆ ಪೋಷಕರು ಗಮನ ಹರಿಸಬೇಕು, ಶಾಲೆಗೆ ಹೋಗಿ ಬಂದ ತಕ್ಷಣ ಮಕ್ಕಳ ಆರೋಗ್ಯದ ಮೇಲೆ ನಿಗಾ ಇರಿಸಬೇಕು. ನಿಧಾನವಾಗಿ ಮಕ್ಕಳು ಶಾಲೆಗೆ ಬರಬೇಕು ಎನ್ನುವುದೇ ನಮ್ಮ ಉದ್ದೇಶ. ಕಳೆದ ಒಂದೂವರೆ ವರ್ಷದಿಂದ ವಿದ್ಯಾರ್ಥಿಗಳು ಶಾಲೆಗಳಿಗೆ ಹೋಗಿಲ್ಲ. ಹಾಗಾಗಿ ಹಂತಹಂತವಾಗಿ ಹಾಜರಿ ಹೆಚ್ಚಾಗಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ ಎಂದು ಸಿಎಂ ತಿಳಿಸಿದರು.

ಇಂದು ಆಲಮಟ್ಟಿಗೆ ಭೇಟಿ ನೀಡುತ್ತಿದ್ದೇನೆ. ಅಲ್ಲಿ ಬಾಗಿನ ಅರ್ಪಣೆ ಮಾಡುತ್ತೇನೆ. ಬಾಗಲಕೋಟೆ ಜಿಲ್ಲೆಯ ಜನ ಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜೊತೆ ಕೊರೊನಾ ನಿರ್ವಹಣೆ ಮತ್ತು ನೆರೆಹಾನಿ ಕುರಿತು ಸಭೆ ನಡೆಸುತ್ತೇನೆ. ನಂತರ ಬೆಳಗಾವಿಗೆ ತೆರಳಿ ಸುವರ್ಣ ಸೌಧದಲ್ಲಿ ಕೋವಿಡ್ ಮತ್ತು ನೆರೆ ಬಗ್ಗೆ ಚರ್ಚೆ ನಡೆಸಲಿದ್ದೇನೆ ಎಂದು ಹೇಳಿದರು.

ಸಿಎಂ ಜಿಲ್ಲಾ ಪ್ರವಾಸ

ಆರ್‌ಟಿ‌ ನಗರ ನಿವಾಸದಿಂದ ಹೊರಟಿರುವ ಸಿಎಂ ಬೊಮ್ಮಾಯಿ, ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಬಳ್ಳಾರಿ ಮಾರ್ಗವಾಗಿ ಆಲಮಟ್ಟಿಗೆ ಪ್ರಯಾಣ ಬೆಳೆಸಲಿದ್ದಾರೆ. ಸಿಎಂ ಜೊತೆ ಸಚಿವರಾದ ಗೋವಿಂದ ಕಾರಜೋಳ, ಉಮೇಶ್ ಕತ್ತಿ, ಮುರುಗೇಶ್ ನಿರಾಣಿ ಕೂಡ ಪ್ರಯಾಣಿಸಿದ್ದಾರೆ.

ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಳಿಕ ಬೆಳಗಾವಿಗೆ ಭೇಟಿ ನೀಡಿ, ಕೋವಿಡ್ ಸಭೆ ನಡೆಸುವ ಜೊತೆಗೆ ಬೆಳಗಾವಿ ನೆರೆಹಾನಿ ಪರಿಹಾರಗಳು ಕ್ರಮದ ಬಗ್ಗೆ ಜಿಲ್ಲಾ ಉಸ್ತುವಾರಿ, ಜಿಲ್ಲಾಧಿಕಾರಿಗಳು ಸೇರಿದಂತೆ ಹಿರಿಯ ಅಧಿಕಾರಿಗಳ ಸಭೆ ನಡೆಸಲಿದ್ದಾರೆ. ಇಂದು‌ ರಾತ್ರಿ ಹುಬ್ಬಳ್ಳಿಯಲ್ಲೇ ವಾಸ್ತವ್ಯ ಹೂಡಲಿರುವ ಸಿಎಂ ಬೊಮ್ಮಾಯಿ ನಾಳೆ‌ ಮಧ್ಯಾಹ್ನ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ‌.

Last Updated : Aug 21, 2021, 9:20 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.