ಬೆಂಗಳೂರು: ರಾಯಚೂರು ಜಿಲ್ಲೆಯನ್ನು ತೆಲಂಗಾಣಕ್ಕೆ ಸೇರಿಸುವ ತೆಲಂಗಾಣ ಸಿಎಂ ಹೇಳಿಕೆ ಕುರಿತು ಮಾಹಿತಿ ಪಡೆದು ಪ್ರತಿಕ್ರಿಯೆ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಕೊಯಮತ್ತೂರು ಪ್ರವಾಸದಿಂದ ವಾಪಸ್ಸಾದ ನಂತರ ರೇಸ್ಕೋರ್ಸ್ ರಸ್ತೆಯಲ್ಲಿರುವ ಅಧಿಕೃತ ನಿವಾಸ ರೇಸ್ವ್ಯೂ ಕಾಟೇಜ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಚಾರ ಈಗಷ್ಟೇ ಗಮನಕ್ಕೆ ಬಂದಿದೆ. ಹೆಚ್ಚಿನ ಮಾಹಿತಿ ಪಡೆದು ಮಾತನಾಡುತ್ತೇನೆ ಎಂದರು.
ಇದನ್ನೂ ಓದಿ: ರಾಯಚೂರು ಬಗ್ಗೆ ತೆಲಂಗಾಣ ಸಿಎಂ ಹೇಳಿಕೆ: ಬಿಜೆಪಿ ಸರ್ಕಾರದ ಮೌನ ಪ್ರಶ್ನಿಸಿದ ಕಾಂಗ್ರೆಸ್
ಕೊಡಗಿನಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಂಚರಿಸುತ್ತಿದ್ದ ಕಾರಿನ ಮೇಲೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದ ವಿಚಾರಕ್ಕೆ ಪ್ರತಿಕ್ರಿಯಿಸಲು ಸಿಎಂ ಬೊಮ್ಮಾಯಿ ನಿರಾಕರಿಸಿದರು.
ಇದನ್ನೂ ಓದಿ: ಕೊಡಗಿನಲ್ಲಿ ಸಿದ್ದರಾಮಯ್ಯ ಕಾರಿಗೆ ಬಿಜೆಪಿಗರಿಂದ ಮೊಟ್ಟೆ ಎಸೆತ, ಕಪ್ಪು ಬಾವುಟ ಪ್ರದರ್ಶನ