ETV Bharat / city

ಮಳೆ ಆರ್ಭಟ: ಸಂತ್ರಸ್ತರಿಗೆ ಕೂಡಲೇ ಪರಿಹಾರ ನೀಡಿ, 15 ದಿನ ಅಧಿಕಾರಿಗಳಿಗೆ ರಜೆ ಕೊಡಬೇಡಿ.. ಸಿಎಂ ಸೂಚನೆ - ಮಳೆ ಹಾನಿ ಪರಿಹಾರ ಸಂಬಂಧ ಸಿಎಂ ಸಭೆ

ರಾಜ್ಯಾದ್ಯಂತ ಮಳೆ ಆರ್ಭಟ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಕಟ್ಟು ನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ.

ಸಿಎಂ
ಸಿಎಂ
author img

By

Published : May 21, 2022, 8:45 PM IST

ಬೆಂಗಳೂರು: ರಾಜ್ಯಾದ್ಯಾಂತ ಮಳೆ ಆರ್ಭಟ ಮುಂದುವರೆದಿರುವ ಹಿನ್ನೆಲೆಯಲ್ಲಿ ಉಸ್ತುವಾರಿ ಕಾರ್ಯದರ್ಶಿಗಳು, ಡಿಸಿಗಳು, ಎಸಿ, ಕೃಷಿ ಇಲಾಖೆ ಅಧಿಕಾರಿಗಳು ಮುಂದಿನ 2-3 ದಿನಗಳಲ್ಲಿ ಕಡ್ಡಾಯವಾಗಿ ಮಳೆ ಹಾನಿಗೊಳಗಾಗಿರುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸುವಂತೆ ಸಿಎಂ ಸೂಚನೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಮಳೆಹಾನಿ ಸಂಬಂಧ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಸಿಎಂ ಹಲವು ಸೂಚನೆಗಳನ್ನು ನೀಡಿದರು. ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು. ಮುಖ್ಯ ಕಾರ್ಯದರ್ಶಿಗಳಿಗೆ ಮೂರು ದಿನಗಳಲ್ಲಿ ವರದಿ ಸಲ್ಲಿಸಬೇಕು. ವಿವಿಧ ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ ಕೆಲಸ ನಿರ್ವಹಿಸಬೇಕು ಎಂದು ಸೂಚಿಸಿದರು.

ಸಿಎಂ ಸೂಚನೆಗಳೇನು?:

  • ಕಂದಾಯ, ಆರ್.ಡಿ.ಪಿ.ಆರ್, ಸಣ್ಣ ನೀರಾವರಿ, ಮಾಹಿತಿ ಪಡೆದು ಪ್ರವಾಹಕ್ಕೆ ಸಂಬಂಧಿಸಿದ ಕಡತಗಳನ್ನು ವಿಳಂಬವಿಲ್ಲದೇ ವಿಲೇವಾರಿ ಮಾಡುವುದು
  • ಪೂರ್ಣ ಹಾನಿಯಾಗಿರುವ ಮನೆಗಳಿಗೆ ಎನ್.ಡಿ.ಆರ್.ಎಫ್ ಮಾರ್ಗಸೂಚಿಯಂತೆ ಕೂಡಲೇ ಪರಿಹಾರ ಬಿಡುಗಡೆ ಮಾಡುವುದು
  • ಮುಂದಿನ 15 ದಿನಗಳ ಕಾಲ ಯಾವುದೇ ಅಧಿಕಾರಿಗೆ ರಜೆ ಮಂಜೂರು ಮಾಡುವಂತಿಲ್ಲ
  • ಪಿ.ಡಿ.ಒ ಗಳು ಸ್ಥಳದಲ್ಲಿದ್ದು ಪರಿಶೀಲನೆ ಮಾಡುವುದು
  • ಜಿಲ್ಲೆಗಳಲ್ಲಿ ಬೆಳೆ ಹಾನಿ, ಜಾನುವಾರು ಹಾಗೂ ಮಾನವ ಜೀವ ಹಾನಿ, ಮೂಲಸೌಕರ್ಯ ಸೌಲಭ್ಯಗಳಿಗೆ ಉಂಟಾಗಿರುವ ಹಾನಿ ಮತ್ತು ಕಾಳಜಿ ಕೇಂದ್ರಗಳನ್ನು ತೆರೆಯುವುದು
  • ಜಿಲ್ಲಾಧಿಕಾರಿಗಳ ಪಿ.ಡಿ ಖಾತೆಯಲ್ಲಿ 728.85 ಕೋಟಿ ರೂ.ಗಳು ಲಭ್ಯವಿದೆ
  • ಬೆಳೆ ಹಾನಿ ಹಾಗೂ ಮನೆ ಹಾನಿಯ ಕುರಿತು ಕೃಷಿ, ತೋಟಗಾರಿಕೆ ಮತ್ತು ಕಂದಾಯ ಇಲಾಖೆಗಳು ಜಂಟಿ ಸಮೀಕ್ಷೆ ನಡೆಸುವುದು. ಕಾಳಜಿ ಕೇಂದ್ರಗಳಲ್ಲಿ ಆರೋಗ್ಯ ತಪಾಸಣೆ ಮಾಡಿಸುವುದು
  • ಪಿ.ಡಿ.ಒ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಕೂಡಲೇ ಛಾಯಾಗ್ರಾಹಕರೊಂದಿಗೆ ತೆರಳಿ ಸ್ಥಳ ಪರಿಶೀಲನೆ ನಡೆಸಿ, ಮನೆ ಹಾನಿಯ ಮಾಹಿತಿ ದಾಖಲಿಸಬೇಕು. ಹಾನಿಗೊಳಗಾಗಿರುವ ಮನೆಗಳ ವಿವರ ಬಿಟ್ಟು ಹೋಗಬಾರದು. ಅನಗತ್ಯ ಮನೆಗಳ ವಿವರ ಸೇರ್ಪಡೆಯಾಗಬಾರದು
  • ಸಮೀಕ್ಷೆ ಕಾರ್ಯಕ್ಕೆ ಲೋಕೋಪಯೋಗಿ ಹಾಗೂ ಪಂಚಾಯತ್ ರಾಜ್ ಇಂಜಿನಿಯರ್​​ಗಳನ್ನು ಹೆಚ್ಚಾಗಿ ಬಳಸುವುದು
  • ಎನ್.ಡಿ.ಆರ್.ಎಫ್ ಮಾರ್ಗಸೂಚಿ ಅನ್ವಯ ಕೂಡಲೇ ಪರಿಹಾರ ವಿತರಿಸಲು ಸೂಚನೆ
  • ಬೆಳೆ ಹಾನಿ ಸಮೀಕ್ಷೆಯನ್ನು ತ್ವರಿತವಾಗಿ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದರು
  • ಜಿಲ್ಲಾಧಿಕಾರಿಗಳು ಮುಂಚೂಣಿಯಲ್ಲಿದ್ದು ಸಮೀಕ್ಷೆ ಕಾರ್ಯಗಳನ್ನು ನಡೆಸುವುದು
  • ಅಣೆಕಟ್ಟುಗಳಿಂದ ಹೆಚ್ಚುವರಿ ನೀರು ಹೊರ ಬಿಡುವಾಗ ವ್ಯವಸ್ಥಿತವಾಗಿ ಮಾಡಬೇಕು. ತಗ್ಗು ಪ್ರದೇಶಗಳಲ್ಲಿರುವ ಗ್ರಾಮಗಳಿಗೆ ಮುಂಚಿತವಾಗಿ ಮಾಹಿತಿ ನೀಡಿ. ಸ್ಥಳಾಂತರಕ್ಕೆ ವ್ಯವಸ್ಥೆ ಮಾಡಬೇಕು
  • ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ದ್ವೀಪಗಳಾಗುವ ಗ್ರಾಮಗಳ ಬಗ್ಗೆ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕು. ಗ್ರಾಮಸ್ಥರನ್ನು ಮುಂಚಿತವಾಗಿಯೇ ಸ್ಥಳಾಂತರ ಮಾಡುವ ವ್ಯವಸ್ಥೆ ಮಾಡಬೇಕು
  • ಕೊಡಗು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭೂ ಕುಸಿತ ಉಂಟಾಗುವ ಸಾಧ್ಯತೆಗಳು ಹೆಚ್ಚಿರುವುದರಿಂದ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸುವುದು. ಭೂ ಕುಸಿತದಿಂದ ಸಾವು ಸಂಭವಿಸದಂತೆ ಜನರನ್ನು ಸ್ಥಳಾಂತರ ಮಾಡಲು ಸೂಚಿಸಿದರು
  • ವಿಪತ್ತು ನಿರ್ವಹಣಾ ತಂಡದವರು ಈ ಬಗ್ಗೆ ಸಂಬಂಧಿಸಿ ಜಿಲ್ಲೆಗಳಿಗೆ ಮಾಹಿತಿ ಒದಗಿಸಬೇಕು
  • ನಿಯಮಿತವಾಗಿ ಪ್ರವಾಹಕ್ಕೊಳಗಾಗುವ ಪ್ರದೇಶಗಳನ್ನು ಈಗಾಗಲೇ ಗುರುತಿಸಲಾಗಿರುವುದರಿಂದ ಮುನ್ನೆಚ್ಚರಿಕಾ ಕ್ರಮಗಳನ್ನು ಕೂಡಲೇ ಕೈಗೊಳ್ಳುವುದು
  • ನದಿಗಳು, ಅಣೆಕಟ್ಟುಗಳ ನೀರಿನ ಪ್ರಮಾಣದ ಬಗ್ಗೆ ಎಚ್ಚರಿಕೆ ವಹಿಸುವುದು
  • ಸ್ಥಳ ಪರಿಶೀಲನೆಯನ್ನು ಕೈಗೊಂಡು ಯಾವ ತಾಲೂಕುಗಳಲ್ಲಿ, ಗ್ರಾಮಗಳಲ್ಲಿ ನಷ್ಟ ಉಂಟಾಗಿದೆ ಎಂಬ ಬಗ್ಗೆ ಸರ್ವೆ ಸಂಖ್ಯೆಯ ಸಮೇತ ಮಾಹಿತಿ ಒದಗಿಸಿ
  • ಎಸ್​​ಡಿಆರ್​ಎಫ್​​​ನ ಎರಡು ಹೆಚ್ಚುವರಿ ಕಂಪನಿಗಳ ಸ್ಥಾಪನೆಗೆ ಸೂಚನೆ

(ಓದಿ: ಗುಡ್​ನ್ಯೂಸ್​: ಕೇಂದ್ರದಿಂದ ಅಬಕಾರಿ ಸುಂಕ ಕಡಿತ; ಪೆಟ್ರೋಲ್ 9.5, ಡಿಸೇಲ್ ದರ 7 ರೂ. ಇಳಿಕೆ)

ETV Bharat Logo

Copyright © 2024 Ushodaya Enterprises Pvt. Ltd., All Rights Reserved.