ETV Bharat / city

ಧರ್ಮಸ್ಥಳದ ಧರ್ಮಾಧಿಕಾರಿ ಭೇಟಿ ಮಾಡಿದ ಸಿಎಂ ಬೊಮ್ಮಾಯಿ.. ವೀರೇಂದ್ರ ಹೆಗ್ಗಡೆಗೆ ಅಭಿನಂದನೆ - ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರಿಗೆ ಆಗಮಿಸಿದ ಧರ್ಮಸ್ಥಳದ ಧರ್ಮಾಧಿಕಾರಿ-ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾದ ಸಿಎಂ ಬೊಮ್ಮಾಯಿ-ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವುದಕ್ಕೆ ಅಭಿನಂದನೆ.

CM Bommayi met Dharmasthala Dharmadhikari Veerendra Heggade
ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಭೇಟಿ ಮಾಡಿದ ಸಿಎಂ ಬೊಮ್ಮಾಯಿ
author img

By

Published : Jul 7, 2022, 7:44 PM IST

ಬೆಂಗಳೂರು : ಬೆಂಗಳೂರಿಗೆ ಆಗಮಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಮಾಡಿದರು. ನೂತನವಾಗಿ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಹೆಗ್ಗಡೆ ಅವರಿಗೆ ಸಿಎಂ ಬೊಮ್ಮಾಯಿ ಹೂವಿನ ಹಾರ ಹಾಕಿ, ಶಾಲು ಹೊದಿಸಿ ಅಭಿನಂದಿಸಿದರು.

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಭೇಟಿ ಮಾಡಿದ ಸಿಎಂ ಬೊಮ್ಮಾಯಿ

ವೀರೇಂದ್ರ ಹೆಗ್ಗಡೆಯವರೊಂದಿಗೆ ಮುಖ್ಯಮಂತ್ರಿ ಕೆಲಕಾಲ ಮಾತುಕತೆ ನಡೆಸಿದರು. ಧಾರ್ಮಿಕ ಕ್ಷೇತ್ರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಸ್ವಯಂ ಉದ್ಯೋಗ ಸೃಷ್ಟಿಗೆ ನೀಡುತ್ತಿರುವ ಕೊಡುಗೆಗೆ ಮೆಚ್ಚುಗೆ ಸೂಚಿಸಿ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವುದಕ್ಕೆ ಅಭಿನಂದಿಸಿದರು. ಈ ಸಂದರ್ಭದಲ್ಲಿ ಸಚಿವ ಶಿವರಾಮ್ ಹೆಬ್ಬಾರ್, ಶಾಸಕರಾದ ಎಸ್.ಆರ್. ವಿಶ್ವನಾಥ್, ಡಾ. ಶಿವರಾಜ್ ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ : ವಿದೇಶ ಪ್ರವಾಸ ಮುಗಿಸಿ ಬಂದ ಬಿಎಸ್​ವೈ: ಸಿಎಂ ಭೇಟಿ, ರಾಜಕೀಯ ವಿದ್ಯಮಾನ ಕುರಿತು ಮಾತುಕತೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.