ETV Bharat / city

ಮಾಜಿ ಸಚಿವ ಸಿ ಎಂ ಉದಾಸಿ ನಿಧನಕ್ಕೆ ಸಿಎಂ ಸೇರಿದಂತೆ ರಾಜಕೀಯ ನಾಯಕರ ಸಂತಾಪ

ಉದಾಸಿ ಅವರು ಏಳು ಭಾಷೆಗಳನ್ನು ಬಲ್ಲ ಧೀಮಂತ ನಾಯಕ. ಅಂಥ ಮುತ್ಸದ್ದಿ ನಾಯಕನನ್ನು ಕಳೆದುಕೊಂಡು ರಾಜ್ಯ ಈಗ ಬಡವಾಗಿದೆ. ಇದರಿಂದ ಕರ್ನಾಟಕ ಮತ್ತು ರಾಜ್ಯ ರಾಜಕಾರಣಕ್ಕೆ ತುಂಬಲಾರದ ಹಾನಿಯಾಗಿದೆ ಎಂದು ಬಸವರಾಜ ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ.

cm-bs-yadiyurappa-condolences
ಸಿ.ಎಂ.ಉದಾಸಿ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ
author img

By

Published : Jun 8, 2021, 4:25 PM IST

Updated : Jun 8, 2021, 5:13 PM IST

ಬೆಂಗಳೂರು : ಹಿರಿಯ ಬಿಜೆಪಿ ಶಾಸಕ ಸಿ ಎಂ ಉದಾಸಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಓದಿ: ಹಾನಗಲ್​ ಶಾಸಕ ಸಿ.ಎಂ. ಉದಾಸಿ ವಿಧಿವಶ: ಉದಾಸಿ ನಿಧನಕ್ಕೆ ಸಿಎಂ ಸಂತಾಪ

ಸಿ ಎಂ ಉದಾಸಿಯವರು ಸಜ್ಜನ ಹಾಗೂ ಕ್ರಿಯಾಶೀಲ ರಾಜಕಾರಣಿ. ಲೋಕೋಪಯೋಗಿ ಸಚಿವರಾಗಿಯೂ ಅತ್ಯಂತ ಉತ್ತಮವಾಗಿ ಕಾರ್ಯನಿರ್ವಹಿಸಿದ್ದರು. ಅಭಿವೃದ್ಧಿ ಪರ ಚಿಂತಕರಾಗಿದ್ದ ಅವರು, ಹಾನಗಲ್ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿ, ಆ ಭಾಗದಲ್ಲಿ ಮಾತ್ರವಲ್ಲದೆ ರಾಜ್ಯದ ಅತ್ಯಂತ ಜನಪ್ರಿಯ ನಾಯಕರಾಗಿದ್ದರು. ಅವರ ನಿಧನದಿಂದ ಅಪರೂಪದ ನೇತಾರರೊಬ್ಬರನ್ನು ನಾಡು ಕಳೆದುಕೊಂಡಂತಾಗಿದೆ.

ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ. ಭಗವಂತ ಅವರ ಕುಟುಂಬದವರಿಗೆ ಹಾಗೂ ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಬೊಮ್ಮಾಯಿ ಸಂತಾಪ : ಮಾಜಿ ಸಚಿವ, ಹಾನಗಲ್ ಕ್ಷೇತ್ರದ ಶಾಸಕರಾಗಿದ್ದ ರಾಜ್ಯ ಬಿಜೆಪಿಯ ಹಿರಿಯ ಮುಖಂಡರಾದ ಸಿ ಎಂ ಉದಾಸಿ ಅವರ ನಿಧನಕ್ಕೆ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ್ ಬೊಮ್ಮಾಯಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಸಿ ಎಂ ಉದಾಸಿ ಅವರು ರಾಜ್ಯ ರಾಜಕಾರಣದ ಹಿರಿಯ ನಾಯಕರು, ಅವರಿಗೆ ಆಡಳಿತದಲ್ಲಿ ಅಪಾರ ಅನುಭವ ಇತ್ತು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಹತ್ತಿರದವರಾಗಿದ್ದರು‌. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಲೋಕೋಪಯೋಗಿ ಖಾತೆಗಳನ್ನು ಉದಾಸಿ ಅವರು ಅಚ್ಚುಕಟ್ಟಾಗಿ ನಿಭಾಯಿಸಿದ್ದರು.

ಉದಾಸಿ ಅವರು ಏಳು ಭಾಷೆಗಳನ್ನು ಬಲ್ಲ ಧೀಮಂತ ನಾಯಕ. ಅಂಥ ಮುತ್ಸದ್ದಿ ನಾಯಕನನ್ನು ಕಳೆದುಕೊಂಡು ರಾಜ್ಯ ಈಗ ಬಡವಾಗಿದೆ. ಇದರಿಂದ ಕರ್ನಾಟಕ ಮತ್ತು ರಾಜ್ಯ ರಾಜಕಾರಣಕ್ಕೆ ತುಂಬಲಾರದ ಹಾನಿಯಾಗಿದೆ ಎಂದು ಬಸವರಾಜ ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ.

ವೈಯಕ್ತಿಕವಾಗಿ ಸಿಎಂ ಉದಾಸಿ ಅವರು ನನಗೆ ಗುರುಗಳು ಹಾಗೂ ಮಾರ್ಗದರ್ಶಕರು. ಅಂಥವರನ್ನು ಕಳೆದುಕೊಂಡಿರುವುದಕ್ಕೆ ನನಗೆ ಬಹಳ ದುಃಖವಾಗಿದೆ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಹೆಚ್​​​ಡಿಕೆ-ಹೆಚ್​​ಡಿಡಿ ಸಂತಾಪ:

ಮಾಜಿ ಸಚಿವರು ಹಾಗೂ ಶಾಸಕರಾದ ಸಿ.ಎಂ. ಉದಾಸಿ ಅವರ ಅಗಲಿಕೆಯ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ನೋವುಂಟಾಯಿತು. ಅವರ ಆತ್ಮಕ್ಕೆ ಶಾಂತಿ ದೊರಕಲಿ. ಅವರ ಕುಟುಂಬ, ಹಿತೈಷಿಗಳು ಹಾಗೂ ಅಪಾರ ಬೆಂಬಲಿಗರಿಗೆ ಈ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಹೆಚ್​​ಡಿಡಿ ಪ್ರಾರ್ಥಿಸಿದ್ದಾರೆ.

ಮಾಜಿ ಸಚಿವರು, ಹಾನಗಲ್ ಹಾಲಿ ಶಾಸಕರು ಹಾಗೂ ಜನತಾಪರಿವಾರ ಮೂಲದ ಸಿ. ಎಮ್. ಉದಾಸಿಯವರು ಇಂದು ನಮ್ಮನ್ನೆಲ್ಲ ಅಗಲಿದ ಸುದ್ದಿ ತೀವ್ರ ನೋವುಂಟು ಮಾಡಿದೆ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಕುಟುಂಬ, ಹಾಗೂ ಅಭಿಮಾನಿ ವರ್ಗಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಹೆಚ್​​​ಡಿಕೆ ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ.

ಡಿಸಿಎಂ ಕಾರಜೋಳ ಸಂತಾಪ:

condolences
ರಾಜಕೀಯ ನಾಯಕರ ಸಂತಾಪ

ಸಿ.ಎಂ. ಉದಾಸಿಯವರು ಸರಳ ಸಜ್ಜನಿಕೆಯ ವ್ಯಕ್ತಿತ್ವಉಳ್ಳ ಕ್ರಿಯಾಶೀಲ ರಾಜಕಾರಣಿ. ಈ ಹಿಂದೆ ಲೋಕೋಪಯೋಗಿ ಸಚಿವರಾಗಿಯೂ ಅತ್ಯಂತ ಉತ್ತಮವಾದ ಕಾರ್ಯನಿರ್ವಹಿಸಿದ್ದಾರೆ. ರಾಜ್ಯದ ಅಭಿವೃದ್ಧಿ ಪರ ಚಿಂತಕರಾಗಿದ್ದ ಅವರು ಜನಪ್ರಿಯ ನಾಯಕರಾಗಿದ್ದರು. ಅವರ ನಿಧನದಿಂದ ಅಪರೂಪದ ಸಜ್ಜನಿಕೆಯ ನೇತಾರರೊಬ್ಬರನ್ನು ರಾಜ್ಯ ಕಳೆದುಕೊಂಡಂತಾಗಿದೆ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಿ, ಅವರ ಕುಟುಂಬದವರಿಗೆ ಅಭಿಮಾನಿ ಬಳಗಕ್ಕೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಡಿಸಿಎಂ ಗೋವಿಂದ ಕಾರಜೋಳ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಕೆ.ಎಸ್ ಈಶ್ವರಪ್ಪ ಕಂಬನಿ:

condolences
ರಾಜಕೀಯ ನಾಯಕರ ಸಂತಾಪ

ಮಾಜಿ ಸಚಿವರೂ ಹಾನಗಲ್ ಹಾಲಿ ಶಾಸಕರು ರಾಜಕೀಯ ಮುತ್ಸದ್ದಿಯಾಗಿದ್ದ ಸಿ.ಎಂ ಉದಾಸಿಯವರು, ಇಂದು ನಮ್ಮನ್ನೆಲ್ಲ ಅಗಲಿದ ಸುದ್ದಿ ತಿಳಿದು ತೀವ್ರ ದುಃಖವಾಯ್ತು. ಅವರ ಅಗಲಿಕೆಯಿಂದ ನಾಡಿಗೆ ತುಂಬಲಾರದ ನಷ್ಟವಾಗಿದೆ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಕುಟುಂಬ, ಹಾಗೂ ಅಭಿಮಾನಿ ವರ್ಗಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ತೀವ್ರ, ಸಂತಾಪ ವ್ಯಕ್ತಪಡಿಸಿದ್ದಾರೆ.

ಕಟೀಲ್ ಸಂತಾಪ:

condolences
ರಾಜಕೀಯ ನಾಯಕರ ಸಂತಾಪ

ಬಿಜೆಪಿಯ ಹಿರಿಯ ಮುಖಂಡರು, ಹಾನಗಲ್ ಶಾಸಕರಾದ ಶ್ರೀ ಸಿ.ಎಂ. ಉದಾಸಿ ಅವರ ನಿಧನದ ವಿಚಾರ ತಿಳಿದು ಅತೀವ ದುಃಖವಾಗಿದೆ. ಅವರ ಅಗಲಿಕೆ ರಾಜ್ಯ ಬಿಜೆಪಿಗೆ ತುಂಬಲಾರದ ನಷ್ಟವಾಗಿದೆ. ಭಗವಂತ ಅವರ ಆತ್ಮಕ್ಕೆ ಸದ್ಗತಿ ನೀಡಲಿ ಮತ್ತು ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ದಯ ಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಸಂತಾಪ ಸೂಚಿಸಿದ್ದಾರೆ.

ಕಂಬನಿ ಮಿಡಿದ ಡಿ.ಕೆ. ಶಿವಕುಮಾರ್:

condolences
ಡಿಕೆಶಿ

ಮಾಜಿ ಸಚಿವ, ಬಿಜೆಪಿ ಹಿರಿಯ ಶಾಸಕ ಸಿ.ಎಂ. ಉದಾಸಿ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. ಉದಾಸಿ ಅವರ ನಿಧನದ ಸುದ್ದಿ ಕೇಳಿ ಬೇಸರವಾಗಿದೆ. ಅವರೊಬ್ಬ ಸಜ್ಜನ ಹಾಗೂ ಕ್ರಿಯಾಶೀಲ ರಾಜಕಾರಣಿ. ಮಿತಭಾಷಿ ಹಾಗೂ ಸಾತ್ವಿಕ ಮನೋಭಾವದವರು.

1983 ರಲ್ಲಿ ಶಾಸನಸಭೆ ಪ್ರವೇಶಿಸಿದ ಅವರು ಆರು ಬಾರಿ ಶಾಸಕರಾಗಿದ್ದರು. ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಜನಸೇವೆಗೆ ಸದಾ ತುಡಿಯುತ್ತಿದ್ದ ಅವರು ಕಿರಿಯರಿಗೆ ಮಾರ್ಗದರ್ಶಕರು, ಮಾದರಿಯೂ ಆಗಿದ್ದರು. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ. ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರು, ಬಂಧು-ಬಳಗವರು, ಅಭಿಮಾನಿಗಳಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಟ್ವೀಟ್ ಮಾಡಿ ಸಂತಾಪ ಸೂಚಿಸಿದ ಹೆಚ್.ಸಿ. ಮಹದೇವಪ್ಪ:

condolences
ರಾಜಕೀಯ ನಾಯಕರ ಸಂತಾಪ

ಮಾಜಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಟ್ವೀಟ್ ಮಾಡಿದ್ದು, ಅನಾರೋಗ್ಯದಿಂದಾಗಿ ರಾಜ್ಯ ಬಿಜೆಪಿ ಹಿರಿಯ ನಾಯಕರು ಉತ್ತಮ ಸ್ನೇಹಿತರೂ ಆಗಿದ್ದ ಸಿ.ಎಂ. ಉದಾಸಿಯವರು ನಿಧನರಾದ ಸುದ್ದಿ ತಿಳಿದು ತೀವ್ರ ಬೇಸರವಾಗಿದೆ. ಸಜ್ಜನ ವ್ಯಕ್ತಿತ್ವದ ಇವರ ಅಗಲಿಕೆಯ ನೋವು ಭರಿಸುವ ಶಕ್ತಿ ಅವರ ಕುಟುಂಬ ವರ್ಗದವರಿಗೆ ದೊರೆಯಲಿ ಎಂದು ಈ ವೇಳೆ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

Last Updated : Jun 8, 2021, 5:13 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.