ETV Bharat / city

20 ದಿನಗಳಲ್ಲಿ ನಿರ್ಮಾಣವಾದ ಯಲಹಂಕ ಕೋವಿಡ್‌ ಆಸ್ಪತ್ರೆ ಉದ್ಘಾಟಿಸಿರುವುದು ಸಂತಸ : ಸಿಎಂ ಬಿಎಸ್​​ವೈ - ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ

ಬೋಯಿಂಗ್‌ ಸಂಸ್ಥೆಯು ಸೆಲ್ಕೋ' ಮತ್ತು 'ಡಾಕ್ಟರ್ಸ್‌ ಫಾರ್‌ ಯು' ಸಹಯೋಗದೊಂದಿಗೆ ಅತ್ಯಂತ ಕಡಿಮೆ ಸಮಯದಲ್ಲಿ ಕೋವಿಡ್‌ ಕೇರ್‌ ಸ್ಪೆಷಾಲಿಟಿ ಆಸ್ಪತ್ರೆಯನ್ನು ನಿರ್ಮಿಸಿರುವುದು ಬಹಳ ಸಂತಸದ ವಿಷಯ. ಕಾರ್ಪೊರೇಟ್‌ ಕಂಪನಿಗಳು ತಮ್ಮ ಸಮುದಾಯಿಕ ಜವಾಬ್ದಾರಿ ಕಾರ್ಯಕ್ರಮದ ಭಾಗವಾಗಿ ಇಂಥ ಜನಪರ ಕಾರ್ಯಕ್ರಮಗಳನ್ನು ರೂಪಿಸುತ್ತಿರುವುದು ಅನುಕರಣೀಯ..

cm-bs-yadiyurappa
ಸಿಎಂ ಬಿಎಸ್​​ವೈ
author img

By

Published : Jun 19, 2021, 10:04 PM IST

ಬೆಂಗಳೂರು : 20 ದಿನಗಳಲ್ಲಿ ನಿರ್ಮಾಣವಾದ ಯಲಹಂಕ ಕೋವಿಡ್‌ ಆಸ್ಪತ್ರೆ ಉದ್ಘಾಟಿಸುವುದಕ್ಕೆ ಸಂತಸವಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಹೇಳಿದರು. ಕೋವಿಡ್‌ ಅಲೆಗಳನ್ನು ಸಮರ್ಥವಾಗಿ ನಿಭಾಯಿಸುವ ನಿಟ್ಟಿನಲ್ಲಿ ಬೋಯಿಂಗ್‌ ಸಂಸ್ಥೆಯು, 'ಸೆಲ್ಕೋ', 'ಡಾಕ್ಟರ್ಸ್‌ ಫಾರ್‌ ಯು' ಸಹಯೋಗದೊಂದಿಗೆ ಯಲಹಂಕದಲ್ಲಿ ನಿರ್ಮಿಸಿರುವ 100 ಹಾಸಿಗೆಗಳ ಅತ್ಯಾಧುನಿಕ ಕೋವಿಡ್‌-ಕೇರ್‌ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಡಿ ವಿ ಸದಾನಂದಗೌಡ ಶನಿವಾರ ಉದ್ಘಾಟಿಸಿದರು.

ಕೋವಿಡ್‌ ನಿಯಂತ್ರಣದಲ್ಲಿ ಎನ್‌ಜಿಒಗಳ ಪಾತ್ರ ಸ್ಮರಣೀಯ.. ಸಿಎಂ ಬಿಎಸ್​​ವೈ

ಓದಿ: ವಾಟ್ಸ್‌ಆ್ಯಪ್​​ ಸ್ಟೇಟಸ್​​, ಪ್ಲಾಟ್​​ ಹಣದ ವಿಚಾರ : ಕಲ್ಲು ಎತ್ತಾಕಿ ಕೊಲಗೈದಿದ್ದ ಹಂತಕರ ಬಂಧನ

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಕೋವಿಡ್‌ ಎರಡನೇ ಅಲೆ ನಿಯಂತ್ರಣ, ಚಿಕಿತ್ಸೆ ಹಾಗೂ ಲಸಿಕೆ ಕಾರ್ಯಕ್ರಮದಲ್ಲಿ ಸರ್ಕಾರದ ಜತೆಗೆ ಖಾಸಗಿ ಸಂಸ್ಥೆಗಳು ಹಾಗೂ ಎನ್‌ಜಿಒಗಳು ಕೈಜೋಡಿಸಿರುವುದು ಅತ್ಯಂತ ಶ್ಲಾಘನೀಯ.

ಬೋಯಿಂಗ್‌ ಸಂಸ್ಥೆಯು ಸೆಲ್ಕೋ' ಮತ್ತು 'ಡಾಕ್ಟರ್ಸ್‌ ಫಾರ್‌ ಯು' ಸಹಯೋಗದೊಂದಿಗೆ ಅತ್ಯಂತ ಕಡಿಮೆ ಸಮಯದಲ್ಲಿ ಕೋವಿಡ್‌ ಕೇರ್‌ ಸ್ಪೆಷಾಲಿಟಿ ಆಸ್ಪತ್ರೆಯನ್ನು ನಿರ್ಮಿಸಿರುವುದು ಬಹಳ ಸಂತಸದ ವಿಷಯ. ಕಾರ್ಪೊರೇಟ್‌ ಕಂಪನಿಗಳು ತಮ್ಮ ಸಮುದಾಯಿಕ ಜವಾಬ್ದಾರಿ ಕಾರ್ಯಕ್ರಮದ ಭಾಗವಾಗಿ ಇಂಥ ಜನಪರ ಕಾರ್ಯಕ್ರಮಗಳನ್ನು ರೂಪಿಸುತ್ತಿರುವುದು ಅನುಕರಣೀಯ ಎಂದರು.

ಕರ್ನಾಟಕ ವಿದ್ಯುತ್‌ ನಿಗಮದ ಯಲಹಂಕ ಕ್ಯಾಂಪಸ್‌ನಲ್ಲಿ ಅತ್ಯಂತ ಕಡಿಮೆ ಸಮಯದಲ್ಲಿ ಕೋವಿಡ್‌ ಕೇರ್‌ ಆಸ್ಪತ್ರೆ ತಲೆ ಎತ್ತಿದೆ. ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಸರ್ಕಾರದ ಪ್ರಯತ್ನಗಳಿಗೆ ಕಾರ್ಪೊರೇಟ್‌ ಸಂಸ್ಥೆಗಳು ಎನ್‌ಜಿಒಗಳು ಕೈ ಜೋಡಿಸಿರುವುದು ಸಂತಸದ ವಿಷಯ. ರಾಜ್ಯದ ಆರೋಗ್ಯ ವ್ಯವಸ್ಥೆ ಬಲಪಡಿಸುವ ನಿಟ್ಟಿನಲ್ಲಿ ಕೈಗೊಳ್ಳುವ ಎಲ್ಲ ಕಾರ್ಯಕ್ರಮಗಳಲ್ಲಿ ಸರ್ಕಾರದ ಜತೆ ಇನ್ನಿತರ ಖಾಸಗಿ ಸಂಸ್ಥೆಗಳು ಕೈ ಜೋಡಿಸಲಿ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ ಸದಾನಂದ ಗೌಡ ಹೇಳಿದರು.

ಕಾರ್ಯಕ್ರಮದಲ್ಲಿ ಬಿಡಿಎ ಅಧ್ಯಕ್ಷ, ಶಾಸಕ ಎಸ್‌ ಆರ್ ವಿಶ್ವನಾಥ್‌, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ, ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ರಾಜ್‌ ಕುಮಾರ್‌ ಖತ್ರಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣಾ, ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ಹೆಚ್‌ ಎಂ ರೇವಣ್ಣಗೌಡ ಉಪಸ್ಥಿತರಿದ್ದರು.

ಆಸ್ಪತ್ರೆ ವೈಶಿಷ್ಟ್ಯ: ಅತಿ ಕಡಿಮೆ ಅವಧಿ ಅಂದರೆ ಕೇವಲ 20 ದಿನಗಳಲ್ಲಿ ಅತ್ಯಾಧುನಿಕ ಸೌಲಭ್ಯ ಹೊಂದಿರುವ ಈ ಆಸ್ಪತ್ರೆ ನಿರ್ಮಾಣವಾಗಿದ್ದು, ಸೌರ ವ್ಯವಸ್ಥೆಯನ್ನು ಒಳಗೊಂಡಿದೆ. ತಾಪಮಾನ ನಿಯಂತ್ರಿಸಬಲ್ಲ ಮಾದರಿ ವ್ಯವಸ್ಥೆ ಇದೆ. ಔಷಧಾಲಯ, ಪ್ರಯೋಗಾಲಯ, ವಿಶ್ರಾಂತಿ ಕೊಠಡಿ, ದಾದಿಯರ ಕೇಂದ್ರ, ತಾಯಿಯರ ಆರೈಕೆ ಕೇಂದ್ರ ಹಾಗೂ ಸಭಾಂಗಣವನ್ನು ಒಳಗೊಂಡಿದೆ. 10 ಐಸಿಯು ಹಾಸಿಗೆ, 20 ಹೆಚ್‌ಡಿಯು ಹಾಸಿಗೆಗಳಿವೆ. ಉಳಿದ ಹಾಸಿಗೆಗಳು ವೈದ್ಯಕೀಯ ಆಮ್ಲಜನಕದ ಸಂಪರ್ಕ ಹೊಂದಿವೆ.

ವೆಚ್ಚ, ನಿರ್ವಹಣೆ : ಆಸ್ಪತ್ರೆ ನಿರ್ಮಾಣಕ್ಕೆ ಒಟ್ಟು 5.5 ಕೋಟಿ ರೂ. ವೆಚ್ಚವಾಗಿದ್ದು, ಬೋಯಿಂಗ್‌ ಡಿಫೆನ್ಸ್‌ ಇಂಡಿಯಾ ಪ್ರೈ.ಲಿ. 3 ಕೋಟಿ ರೂ., ಸೆಲ್ಕೋ ಫೌಂಡೇಷನ್‌ 2.5 ಕೋಟಿ ರೂ. ನೀಡಿದೆ. ಕರ್ನಾಟಕ ವಿದ್ಯುತ್‌ ನಿಗಮ ಆಸ್ಪತ್ರೆ ನಿರ್ಮಾಣಕ್ಕೆ ಅಗತ್ಯ ಜಾಗ ಒದಗಿಸಿದೆ. ಡಾಕ್ಟರ್ಸ್‌ ಫಾರ್‌ ಯು ಸರ್ಕಾರೇತರ ಸಂಸ್ಥೆಯು ಆಸ್ಪತ್ರೆ ನಿರ್ವಹಣೆ ಮತ್ತು ಆರೋಗ್ಯ ಸೇವೆ ಒದಗಿಸುವ ಜವಾಬ್ದಾರಿ ವಹಿಸಿಕೊಂಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.