ETV Bharat / city

ಲಾಕ್​​ಡೌನ್ ಬಗ್ಗೆ ನಿರ್ಧಾರ ಕೈಗೊಳ್ಳಲು ಟಾಸ್ಕ್ ಫೋರ್ಸ್ ತಂಡದ ಜೊತೆ ಸಿಎಂ ಸಭೆ

ಕೊರೊನಾ ನಿಯಂತ್ರಣಕ್ಕೆ ಅಗತ್ಯ ಕ್ರಮ ಹಾಗೂ ಕೆಲ ಜಿಲ್ಲೆಗಳಲ್ಲಿ ಲಾಕ್​​ಡೌನ್ ಬಗ್ಗೆ ನಿರ್ಧಾರ ಕೈಗೊಳ್ಳಲು ಟಾಸ್ಕ್ ಫೋರ್ಸ್ ತಂಡದ ಜೊತೆ ಸಿಎಂ ಬಿ.ಎಸ್.ಯಡಿಯೂರಪ್ಪ ಸಭೆ ನಡೆಸಿದ್ದಾರೆ.

cm-bs-yadiyurappa-meeting-with-task-force
ಟಾಸ್ಕ್ ಫೋರ್ಸ್ ತಂಡದ ಜೊತೆ ಸಿಎಂ ಸಭೆ
author img

By

Published : Jul 13, 2020, 3:06 PM IST

ಬೆಂಗಳೂರು: ಜಿಲ್ಲಾಧಿಕಾರಿಗಳ ಜೊತೆಗಿನ ಸಿಎಂ ವಿಡಿಯೋ ಕಾನ್ಫರೆನ್ಸ್ ಮುಕ್ತಾಯವಾದ ಬಳಿಕ ಕೊರೊನಾ ನಿಯಂತ್ರಣಕ್ಕೆ ಅಗತ್ಯ ಕ್ರಮ ಹಾಗೂ ಕೆಲ ಜಿಲ್ಲೆಗಳಲ್ಲಿ ಲಾಕ್​​ಡೌನ್ ಬಗ್ಗೆ ನಿರ್ಧಾರ ಕೈಗೊಳ್ಳಲು ಟಾಸ್ಕ್ ಫೋರ್ಸ್ ತಂಡದ ಜೊತೆ ಸಿಎಂ ಬಿ.ಎಸ್.ಯಡಿಯೂರಪ್ಪ ಸಭೆ ನಡೆಸುತ್ತಿದ್ದಾರೆ.

ಅಧಿಕೃತ ಸಿಎಂ ನಿವಾಸ ಕಾವೇರಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಟಾಸ್ಕ್ ಫೋರ್ಸ್ ಅಧ್ಯಕ್ಷ, ಆರೋಗ್ಯ ಸಚಿವ ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್, ಡಿಸಿಎಂ ಡಾ. ಅಶ್ವತ್ಥ್​​ ನಾರಾಯಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದಾರೆ.

ಟಾಸ್ಕ್ ಫೋರ್ಸ್ ತಂಡದ ಜೊತೆ ಸಿಎಂ ಸಭೆ

ವಿಡಿಯೋ ಸಂವಾದದಲ್ಲಿ ಜಿಲ್ಲಾಧಿಕಾರಿಗಳು ಕೊಟ್ಟ ಮಾಹಿತಿ ಆಧಾರದ ಮೇಲೆ ಸಿಎಂ ಚರ್ಚಿಸುತ್ತಿದ್ದಾರೆ. ವಿಡಿಯೋ ಕಾನ್ಫರೆನ್ಸ್​ನಲ್ಲಿ ಕೆಲ ಜಿಲ್ಲಾಧಿಕಾರಿಗಳು ಲಾಕ್​​ಡೌನ್​​ಗೆ ಮನವಿ ಮಾಡಿದ್ದಾರೆ. ಧಾರವಾಡ, ಕಲಬುರಗಿ, ಬೀದರ್, ದಕ್ಷಿಣ ಕನ್ನಡ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಲಾಕ್​​ಡೌನ್ ಬಗ್ಗೆ ಮನವಿ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಈ ಹಿನ್ನೆಲೆ ಈ ಜಿಲ್ಲೆಗಳಲ್ಲಿ ಅಧಿಕೃತವಾಗಿ ಲಾಕ್​​ಡೌನ್ ಜಾರಿ ಮಾಡುವ ಬಗ್ಗೆ ಹಾಗೂ ಲಾಕ್​​ಡೌನ್ ಬೇಡ ಎಂಬ ಜಿಲ್ಲೆಗಳಲ್ಲಿ ಕಠಿಣ ಕ್ರಮ ಜಾರಿ ಕುರಿತು ಟಾಸ್ಕ್ ಫೋರ್ಸ್ ತಂಡದ ಜೊತೆ ಸಮಾಲೋಚನೆ ನಡೆಸುತ್ತಿದ್ದಾರೆ.

ಲಾಕ್​​ಡೌನ್​ಗೆ ಪರ, ವಿರೋಧ

ಇದಕ್ಕೂ ಮುನ್ನ ನಡೆದ ವಿಡಿಯೋ ಸಂವಾದದಲ್ಲಿ ಹನ್ನೊಂದು ಜಿಲ್ಲೆಗಳ ಜಿಲ್ಲಾಧಿಕಾರಿಗಳಲ್ಲಿ ಕೆಲವರು ಲಾಕ್​ಡೌನ್​​ ಬೇಕು, ಇನ್ನೂ ಕೆಲವರು ಲಾಕ್​​ಡೌನ್ ಬೇಡ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.