ETV Bharat / city

ಸರೋಜಿನಿ ಮಹಿಷಿ ವರದಿ ಜಾರಿ ಸಂಬಂಧ ಚರ್ಚಿಸಿ ಮುಂದಿನ ಕ್ರಮ: ಸಿಎಂ - ಬೆಂಗಳೂರು ಸುದ್ದಿ

ರಾಜ್ಯದ ಎಲ್ಲ ಜಿಲ್ಲೆಗಳಿಂದ ಬಂದ ರೈತರೊಂದಿಗೆ ಕೃಷಿ, ನೀರಾವರಿ ಸೇರಿದಂತೆ ಹಲವು ವಿಷಯಗಳ ಕುರಿತು ಮಾತುಕತೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದ್ದೇನೆ. ಬಜೆಟ್​ನಲ್ಲಿ ಇದನ್ನು ಕಾರ್ಯರೂಪಕ್ಕೆ ತರುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

Cm bs yadiyurappa reaction about budget and farmers problems
ರೈತರ ಸಮಸ್ಯೆಯನ್ನು ಆಲಿಸಿದ್ದೇನೆ,ಸರೋಜಿನಿ ಮಹಿಷಿ ವರದಿ ಜಾರಿ ಸಂಬಂಧ ಚರ್ಚಿಸುವೆ..ಸಿಎಂ ಭರವಸೆ
author img

By

Published : Feb 13, 2020, 4:59 PM IST

ಬೆಂಗಳೂರು: ರಾಜ್ಯದ ಎಲ್ಲ ಜಿಲ್ಲೆಗಳಿಂದ ಬಂದ ರೈತರೊಂದಿಗೆ ಕೃಷಿ, ನೀರಾವರಿ ಸೇರಿದಂತೆ ಹಲವು ವಿಷಯಗಳ ಕುರಿತು ಮಾತುಕತೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದ್ದೇನೆ. ಬಜೆಟ್​ನಲ್ಲಿ ಇದನ್ನು ಕಾರ್ಯರೂಪಕ್ಕೆ ತರುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ರೈತರ ಸಮಸ್ಯೆಯನ್ನು ಆಲಿಸಿದ್ದೇನೆ,ಸರೋಜಿನಿ ಮಹಿಷಿ ವರದಿ ಜಾರಿ ಸಂಬಂಧ ಚರ್ಚಿಸುವೆ..ಸಿಎಂ ಭರವಸೆ

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಕರೆದಿದ್ದ ಬಜೆಟ್ ಪೂರ್ವಭಾವಿ ಸಭೆ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರೈತರು‌ ನೀಡಿದ ಸಲಹೆಗಳ ಬಗ್ಗೆ ಚರ್ಚೆ ನಡೆಸಿ, ಅವುಗಳನ್ನು ಜಾರಿ ಮಾಡಲು ಕ್ರಮ ಕೈಗೊಳ್ಳುತ್ತೇವೆ ಎಂದರು.

'ಸರೋಜಿನಿ ಮಹಿಷಿ ವರದಿ ಜಾರಿ ಬಗ್ಗೆ ಚರ್ಚಿಸಿ ಕ್ರಮ'

ಸರೋಜಿನಿ ಮಹಿಷಿ ವರದಿ ಜಾರಿ ಸಂಬಂಧ ಚರ್ಚೆ ಮಾಡುತ್ತೇವೆ. ನಮ್ಮ ಇತಿಮಿತಿಯಲ್ಲಿ ಏನೇನು ಬದಲಾವಣೆ ತರಬೇಕೆಂಬುದನ್ನ ವಿಪಕ್ಷಗಳ ಜೊತೆಗೂ ಚರ್ಚಿಸಿ, ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು. ಅಲ್ಲದೆ, ಪ್ರತಿಭಟನೆ ನಡೆಯುತ್ತಿರುವ ಸ್ಥಳಕ್ಕೆ ನಮ್ಮ ಸಚಿವರನ್ನು ಕಳುಹಿಸುತ್ತೇನೆ. ಅವರು ಪ್ರತಿಭಟನಾಕಾರರ ಜತೆ ಚರ್ಚೆ ನಡೆಸುತ್ತಾರೆ. ಉದ್ಯೋಗದಲ್ಲಿ ಕನ್ನಡಿಗರಿಗೆ ಅವಕಾಶ ಸಿಗಬೇಕೆಂಬುದು ಒಳ್ಳೆಯ ವಿಚಾರ ಎಂದರು.

ಸಭೆಯ ಆರಂಭದಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ, ರಾಜ್ಯದಲ್ಲಿ ಈ ಭಾರಿ ಭೀಕರ ಪ್ರವಾಹ ಮತ್ತೊಂದು ಕಡೆ ಬರಗಾಲ ಉಂಟಾಗಿ ರೈತರು ಬೆಳೆದ ಬೆಳೆಗಳು ಸಂಪೂರ್ಣವಾಗಿ ಹಾಳಾಗಿವೆ. ರಾಜ್ಯ ಸರ್ಕಾರ ನೀರಾವರಿ ಯೋಜನೆಗಳನ್ನ ಅನುಷ್ಠಾನ ಮಾಡುವಲ್ಲಿ ವಿಫಲವಾಗಿವೆ. ಹೀಗಾಗಿ ಈ ಬಾರಿಯ ಬಜೆಟ್‍ನಲ್ಲಿ ಸಹಕಾರಿ ಮತ್ತು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ರೈತರು ಪಡೆದಿರುವ ಸಾಲವನ್ನು ರದ್ದು ಮಾಡಬೇಕೆಂದು ಮನವಿ ಮಾಡಿದರು. ಅಲ್ಲದೆ, ಕೆಲವು ಬ್ಯಾಂಕುಗಳಲ್ಲಿ ರೈತರಿಗೆ ಹಳೆ ಸಾಲಚುಕ್ತ ಮಾಡದ ಕಾರಣ ಹೊಸದಾಗಿ ಸಾಲ ನೀಡುತ್ತಿಲ್ಲ. ತಕ್ಷಣವೇ ಬ್ಯಾಂಕ್ ಅಧಿಕಾರಿಗಳಿಗೆ ಸಾಲ ವಿತರಿಸಲು ಸೂಚನೆ ನೀಡಬೇಕೆಂದು ಮನವಿ ಮಾಡಿದರು.

ಪ್ರವಾಹಕ್ಕೆ ಸಿಲುಕಿ ಬೆಳೆನಷ್ಟವಾದ ಪರಿಣಾಮ ರೈತರಿಗೆ ಸಮರ್ಪಕವಾಗಿ ಬೆಳೆ ಪರಿಹಾರ ಸಿಕ್ಕಿಲ್ಲ. ಕೆಲವು ಕಡೆ ಪರಿಹಾರದ ಚೆಕ್ಕುಗಳೇ ಬೌನ್ಸ್ ಆಗುತ್ತಿವೆ. ಇದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ. ಇದನ್ನು ಸರಿಪಡಿಸಬೇಕು. ಬರಗಾಲ ಆವರಿಸಿರುವ ಕಾರಣ ಪ್ರತಿ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಬೇಕು. ಆನ್‍ಲೈನ್ ಟ್ರೇಡಿಂಗ್ ವ್ಯವಸ್ಥೆಯನ್ನು ರಾಜ್ಯದ ಕೃಷಿ ಮಾರುಕಟ್ಟೆಗಳಲ್ಲಿ ಜಾರಿಗೆ ತರಬೇಕು. ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಿಗೆ ಶಾಶ್ವತ ಕುಡಿಯುವ ನೀರು ಪೂರೈಕೆ ಮಾಡುವ ಕಳಸಾ ಬಂಡೂರಿ ನಾಲಾ ಯೋಜನೆಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಈ ಯೋಜನೆ ಅನುಷ್ಠಾನಗೊಳಿಸಲು ಗೋವಾ ಸರ್ಕಾರ ಪದೇ ಪದೇ ಕ್ಯಾತೆ ತೆಗೆಯುತ್ತಿದೆ. ನ್ಯಾಯಾಲಯದಲ್ಲಿ ಸಮರ್ಪಕವಾಗಿ ಕಾನೂನು ಮಂಡಿಸಿ,ಈ ಯೋಜನೆಯನ್ನು ಅನುಷ್ಠಾನ ಮಾಡಬೇಕೆಂದು ಮನವಿ ಮಾಡಿದರು. ಅಲ್ಲದೆ, ಬರ ಪೀಡಿತ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಎತ್ತಿನಹೊಳೆ ಯೋಜನೆಯನ್ನು ಜಾರಿ ಮಾಡುವುದು ಹಾಗೂ ಈ ಬಾರಿ ನೀರಾವರಿ ಯೋಜನೆಗಳಿಗೆ ಒಂದು ಕೋಟಿ ಅನುದಾನವನ್ನು ಮೀಸಲಿಡಬೇಕು ಎಂದು ಒತ್ತಾಯಿಸಿದರು.

ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಮಾತನಾಡಿ, ರೈತರು ಹೋರಾಟ ಇಲ್ಲವೇ ಪ್ರತಿಭಟನೆಯಲ್ಲಿ ಪಾಲ್ಗೊಂಡ ವೇಳೆ ಹುತಾತ್ಮರಾದರೆ,ಅಂತಹ ಕುಟುಂಬಗಳಿಗೆ 10 ಸಾವಿರ ಮಾಸಾಶನ ಹಾಗೂ ಸರ್ಕಾರಿ ಉದ್ಯೋಗ,ಕೆರೆಗಳಿಗೆ ನೀರು ತುಂಬಿಸುವುದು ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಬೇಕೆಂದು ಮನವಿ ಮಾಡಿದರು. ಅಲ್ಲದೇ,ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಪಡಿಸಬೇಕು. ರೈತರು ಬೆಳೆದ ಬೆಳೆಗಳನ್ನು ಸಕಾಲದಲ್ಲಿ ಮಾರಾಟ ಮಾಡಲು ಅನುಕೂಲವಾಗುವಂತೆ ಅಗತ್ಯವಿರುವ ಕಡೆ ಖರೀದಿ ಕೇಂದ್ರಗಳನ್ನು ತೆರೆಯಬೇಕು. ರಾಮನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ ಜಿಲ್ಲೆಗಳಲ್ಲಿ ರೇಷ್ಮೆಯ ನೂಲಿನ ಗಿರಣಿಗಳನ್ನು ಸರ್ಕಾರವೇ ತೆರೆಯಬೇಕೆಂದು ಒತ್ತಾಯಿಸಿದರು.

ಸಭೆಯಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್, ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್, ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಸೇರಿದಂತೆ ಹಲವಾರು ರೈತ ಮುಖಂಡರು ಭಾಗವಹಿಸಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.