ಬೆಂಗಳೂರು: ಮೇ 3ರ ವರೆಗೆ ಲಾಕ್‌ಡೌನ್ ಮುಂದುವರೆಯಲಿದ್ದು, ಇನ್ನಷ್ಟು ಬಿಗಿ ಕ್ರಮಗಳನ್ನು ತೆಗೆದುಕೊಂಡು ಲಾಕ್‌ಡೌನ್ ಮುಂದುವರೆಸುತ್ತೇವೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.
ಸಂಪುಟ ಸಭೆ ಬಳಿಕ ವಿಧಾನಸೌಧದಲ್ಲಿ ಮಾತನಾಡಿದ ಅವರು, ನಿನ್ನೆ ಪಾದರಾಯನಪುರದಲ್ಲಿ ನಡೆದ ಘಟನೆ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ತೇವೆ. ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದರೆ ಸಹಿಸಲ್ಲ. ಕೇರಳ ಮತ್ತು ಉತ್ತರ ಪ್ರದೇಶದಲ್ಲಿ ಇಂತಹ ಘಟನೆಗಳು ನಡೆದರೆ ಅದು ಶಿಕ್ಷಾರ್ಹ ಅಪರಾಧವೆಂದು ಪರಿಗಣಿಸಲಾಗುತ್ತದೆ ಎಂದರು.
ಅದೇ ರೀತಿ ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆದರೆ ಅದು ಶಿಕ್ಷಾರ್ಹ ಅಪರಾಧ ಎಂದು ಸುಗ್ರೀವಾಜ್ಞೆ ಹೊರಡಿಸುತ್ತೇವೆ. ಅವರ ಆರೋಗ್ಯದ ದೃಷ್ಟಿಯಿಂದ ನಾವು ಈ ಕ್ರಮ ತೆಗೆದುಕೊಳ್ಳುತ್ತೇವೆ. ಇವರೆಲ್ಲಾ ಕಾನೂನು ಕೈಗೆ ತೆಗೆದುಕೊಂಡವರಂತೆ ವರ್ತಿಸಿದ್ದಾರೆ. ಇದನ್ನು ಸಹಿಸಲ್ಲವೆಂದು ಸಿಎಂ ಖಡಕ್ ಸಂದೇಶ ರವಾನಿಸಿದರು.