ETV Bharat / city

ಸಿಎಂ ವಿರುದ್ಧ 'ಕೈ' ಕೊಟ್ಟ ದೂರು​​​​ ಸ್ವೀಕರಿಸಿದ ಚುನಾವಣಾ ಆಯೋಗ - ಬಿ.ಎಸ್. ಯಡಿಯೂರಪ್ಪ ಮತದಾರರಿಗೆ ಆಮಿಷ

ವೀರಶೈವ ಲಿಂಗಾಯತ ಸಮುದಾಯದವರು ಬಿಜೆಪಿಗೆ ಮತ ನೀಡಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಮತದಾರರಿಗೆ ಆಮಿಷ ಒಡ್ಡಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ಪಕ್ಷ ನೀಡಿದ್ದ ದೂರನ್ನು ಚುನಾವಣಾ ಆಯೋಗ ಸ್ವೀಕರಿಸಿದೆ.

KN_BNG_05_CONGRESS_ELECTION_COMMISSION_DOORU_SCRIPT_9020923
ಸಿಎಂ ವಿರುದ್ಧವೇ ಕೇಸ್ ದಾಖಲಿಸಿದ ಚುನಾವಣಾ ಆಯೋಗ: ಕಾರಣವೇನು...?
author img

By

Published : Nov 26, 2019, 5:08 PM IST

ಬೆಂಗಳೂರು: ವೀರಶೈವ ಲಿಂಗಾಯತ ಸಮುದಾಯದವರು ಬಿಜೆಪಿಗೆ ಮತ ನೀಡಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಮತದಾರರಿಗೆ ಆಮಿಷ ಒಡ್ಡಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ಪಕ್ಷ ನೀಡಿದ್ದ ದೂರನ್ನು ಚುನಾವಣಾ ಆಯೋಗ ಸ್ವೀಕರಿಸಿದೆ.

ಸಿಎಂ ವಿರುದ್ಧ ಕೇಸ್ ದಾಖಲಿಸಿದ ಚುನಾವಣಾ ಆಯೋಗ: ಕಾರಣವೇನು...?

ಗೋಕಾಕ್ ಉಪ ಚುನಾವಣಾ ಪ್ರಚಾರ ಸಂದರ್ಭ ನ. 23ರಂದು ಸಿಎಂ “ವೀರಶೈವ ಮತ್ತು ಲಿಂಗಾಯತ ಸಮುದಾಯದವರು ಬೇರೆ ಪಕ್ಷಗಳಿಗೆ ಎಂದೂ ಮತ ಚಲಾಯಿಸಬೇಡಿ". ನಾನು ಮುಖ್ಯಮಂತ್ರಿಯಾಗಿ ಮುಂದುವರಿಯಬೇಕಾದರೆ ವೀರಶೈವ ಹಾಗೂ ಲಿಂಗಾಯತ ಸಮುದಾಯದವರು ನಮ್ಮ ಅಭ್ಯರ್ಥಿಗಳಿಗೆ ಮತ ನೀಡಬೇಕು’ ಎಂದು ಹೇಳಿರುವುದಾಗಿ ಕಾಂಗ್ರೆಸ್​ ಆರೋಪಿಸಿದೆ. ಈ ವಿಚಾರವಾಗಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್ ಪಕ್ಷ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಇಂದು ಚುನಾವಣಾ ಆಯುಕ್ತರನ್ನು ಭೇಟಿ ಮಾಡಿದ ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ನೇತೃತ್ವದ ನಿಯೋಗಕ್ಕೆ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಕೇಸ್ ದಾಖಲಿಸಿರುವುದಾಗಿ ತಿಳಿಸಿದ್ದಾರೆ.

ವಿಜಯನಗರ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಮನೆಯ ಗೃಹ ಪ್ರವೇಶದ ವೇಳೆ ಬಂದವರಿಗೆ ದುಬಾರಿ ಗಿಫ್ಟ್ ಕೊಟ್ಟಿದ್ದಾರೆ. ಅಲ್ಲದೆ ಡಿ. 1ರಂದು ಮಗನ ಮದುವೆ ಇದ್ದು, 50 ಸಾವಿರ ಜನರಿಗೆ ಊಟದ ವ್ಯವಸ್ಥೆ ಮಾಡಿದ್ದಾರೆ. ಎಂಟಿಬಿ ನಾಗರಾಜ್ ಕೂಡ ಚಿನ್ನದ ರಿಂಗ್ ಗಿಫ್ಟ್ ಕೊಟ್ಟಿದ್ದಾರೆ. ಈ ಬಗ್ಗೆ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದು, ಅವರು ಕ್ರಮ ತೆಗೆದುಕೊಳ್ಳುವ ಭರವಸೆ ಕೊಟ್ಟಿದ್ದಾರೆ ಎಂದರು.

Intro:newsBody:ಬಿಎಸ್ವೈ ವಿರುದ್ಧ ಚುನಾವಣಾ ಆಯೋಗ ದೂರು ದಾಖಲಿಸಿಕೊಂಡಿದೆ: ಪ್ರಕಾಶ್ ರಾಥೋಡ್

ಬೆಂಗಳೂರು: ಲಿಂಗಾಯಿತ ಸಮುದಾಯದವರು ಬಿಜೆಪಿಗೆ ಮತ ನೀಡಿ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಮತದಾರರಿಗೆ ಆಮಿಷ ಒಡ್ಡಿರುವ ಸಂಬಂಧ ಕಾಂಗ್ರೆಸ್ ಪಕ್ಷ ನೀಡಿದ್ದ ದೂರನ್ನು ಚುನಾವಣಾ ಆಯೋಗ ಸ್ವೀಕರಿಸಿದೆ.
ಗೋಕಾಕ್ನಲ್ಲಿ ಚುನಾವಣಾ ಪ್ರಚಾರ ಸಂದರ್ಭ ನ.23ರಂದು ಸಿಎಂ ಬಿಎಸ್ವೈ, “ವೀರಶೈವ ಮತ್ತು ಲಿಂಗಾಯಿತ ಸಮುದಾಯದವರು ಬೇರೆ ಪಕ್ಷಗಳಿಗೆ ಎಂದೂ ಮತ ಚಲಾಯಿಸಬೇಡಿ. ನಾನು ಮುಖ್ಯಮಂತ್ರಿಯಾಗಿ ಮುಂದುವರಿಯೇಕಾದರೆ ಎಲ್ಲಾ ವೀರಶೈವ ಹಾಗೂ ಲಿಂಗಾಯಿತ ಸಮುದಾಯದವರು ನಮ್ಮ ಅಭ್ಯರ್ಥಿಗಳಿಗೆ ಮತ ನೀಡಬೇಕು’ ಎಂದು ಹೇಳಿದ್ದರು. ಈ ವಿಚಾರ ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದವು. ಇಂದು ಚುನಾವಣಾ ಆಯುಕ್ತರನ್ನು ಭೇಟಿ ಮಾಡಿದ್ದ ಕಾಂಗ್ರೆಸ್ ನಿಯೋಗಕ್ಕೆ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಭರವಸೆ ನೀಡಿದ್ದಾರೆ.
ಹೊಸಕೋಟೆ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್, ಬಳ್ಳಾರಿಯ ವಿಜಯನಗರ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಇಂದು ಕಾಂಗ್ರೆಸ್ ನಾಯಕರು ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ನೇತೃತ್ವದಲ್ಲಿ ನಿಯೋಗ ತೆರಳಿ ದೂರು ಸಲ್ಲಿಸಿದರು. ಈ ಸಂದರ್ಭ ಅವರಿಗೆ ಈ ಭರವಸೆ ಸಿಕ್ಕಿದೆ ಎಂದು ಪ್ರಕಾಶ್ ರಾಥೋಡ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ದೂರು ನೀಡಿದ ಬಳಿಕ ಎಂಎಲ್ ಸಿ ಪ್ರಕಾಶ್ ರಾಥೋಡ್ ಮಾತನಾಡಿ, ಸಿಎಂ ವಿರುದ್ಧ ದೂರು ದಾಖಲಿಸಿಕೊಂಡಿದ್ದಾಗಿ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ಚುನಾವಣಾ ಪ್ರಚಾರ ಆರಂಭವಾದ ದಿನದಿಂದ ಸಾಕಷ್ಟು ದೂರನ್ನು ನೀಡಿದ್ದು, ಯಾವುದಕ್ಕೂ ಚುನಾವಣಾ ಆಯೋಗ ಸ್ಪಂಧಿಸಿರಲಿಲ್ಲ. ಇದೀಗ ಸಿಎಂ ವಿರುದ್ಧ ದೂರು ಸ್ವೀಕರಿಸಿರುವುದು ಸಮಾಧಾನ ತಂದಿದೆ ಎಂದು ವಿವರಿಸಿದರು.
ಆನಂದ್ ಸಿಂಗ್ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಮನೆ ಮನೆಯ ಗೃಹ ಪ್ರವೇಶದ ವೇಳೆ ಗಿಫ್ಟ್ ನೀಡಿದ್ದಾರೆ. ಗೃಹ ಪ್ರವೇಶಕ್ಕೆ ಬಂದವರಿಗೆ ದುಬಾರಿ ಗಿಫ್ಟ್ ಕೊಟ್ಟಿದ್ದಾರೆ. ಅಲ್ಲದೆ ಡಿ.1 ರಂದು ಮಗನ ಮದುವೆ ಮಾಡ್ತಿದ್ದಾರೆ. ಅದಕ್ಕೆ ನಾಲ್ಕು ಬೃಹತ್ ಪೆಂಡಾಲ್ ಹಾಕಿದ್ದಾರೆ. 50 ಸಾವಿರ ಜನರಿಗೆ ಊಟದ ವ್ಯವಸ್ಥೆ ಮಾಡಿದ್ದಾರೆ. ಇದೆಲ್ಲವೂ ನೀತಿ ಸಂಹಿತೆ ಉಲ್ಲಂಘನೆಯಾಗಲಿವೆ. ಎಂಟಿಬಿ ನಾಗರಾಜ್ ಕೂಡ ಚಿನ್ನದ ರಿಂಗ್ ಗಿಫ್ಟ್ ಕೊಟ್ಟಿದ್ದಾರೆ. ಅವರ ಕ್ಷೇತ್ರದ ಮತದಾರರಿಗೆ ಗಿಫ್ಟ್ ನೀಡಿದ್ದಾರೆ. ಇದೂ ಕೂಡ ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ಈ ಬಗ್ಗೆ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದೇವೆ. ಅವರು ಕ್ರಮ ತೆಗೆದುಕೊಳ್ಳುವ ಭರವಸೆ ಕೊಟ್ಟಿದ್ದಾರೆ. ಯಾವ ಕ್ರಮ ತೆಗೆದುಕೊಳ್ತಾರೆ ನೊಡೋಣ. ಆಮೇಲೆ ಮುಂದಿನ ನಿರ್ಧಾರ ಮಾಡುತ್ತೇವೆ ಎಂದರು.

Conclusion:news
ETV Bharat Logo

Copyright © 2025 Ushodaya Enterprises Pvt. Ltd., All Rights Reserved.