ETV Bharat / city

79ನೇ ವಸಂತಕ್ಕೆ ಕಾಲಿಟ್ಟ ಸಿಎಂ ಯಡಿಯೂರಪ್ಪ: ಗಣ್ಯರಿಂದ ಶುಭಾಶಯಗಳ ಮಹಾಪೂರ - ಬಿಎಸ್​ವೈಗೆ ಜನ್ಮದಿನ ಸಂಭ್ರಮ

78 ವಸಂತಗಳನ್ನು ಪೂರೈಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು 79ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹೀಗಾಗಿ, ಅನೇಕ ರಾಜಕೀಯ ನಾಯಕರು, ಅಭಿಮಾನಿಗಳು ಜನ್ಮದಿನದ ಶುಭಾಶಯ ಕೋರಿದ್ದಾರೆ.

CM BS Yeddyurappa Birthday
79ನೇ ವಸಂತಕ್ಕೆ ಕಾಲಿಟ್ಟ ಸಿಎಂ ಬಿ.ಎಸ್ ಯಡಿಯೂರಪ್ಪ
author img

By

Published : Feb 27, 2021, 9:53 AM IST

ಬೆಂಗಳೂರು: ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರಿಗೆ ಹುಟ್ಟುಹಬ್ಬದ ಸಂಭ್ರಮ. 79ನೇ ವಸಂತಕ್ಕೆ ಕಾಲಿಟ್ಟ ಬಿಎಸ್​ವೈ ಅವರಿಗೆ, ಪ್ರಧಾನಿ ಮೋದಿ ಸೇರಿದಂತೆ ರಾಜಕೀಯ ನಾಯಕರು, ಅಭಿಮಾನಿಗಳು ಜನ್ಮದಿನದ ಶುಭಾಶಯ ಕೋರಿದ್ದಾರೆ.

79ನೇ ವಸಂತಕ್ಕೆ ಕಾಲಿಟ್ಟ ಸಿಎಂ ಬಿ.ಎಸ್ ಯಡಿಯೂರಪ್ಪ

ಯಡಿಯೂರಪ್ಪ ಓರ್ವ ಅನುಭವಿ ನಾಯಕರಾಗಿದ್ದು, ತಮ್ಮ ಜೀವನವನ್ನು ರೈತರು ಹಾಗೂ ಬಡವರ ಹಿತರಕ್ಷಣೆಗೆ ಮುಡಿಪಾಗಿಸಿದ್ದಾರೆ. ಅವರ ಸುದೀರ್ಘ ಆರೋಗ್ಯ ಜೀವನಕ್ಕೆ ಹಾರೈಸುತ್ತೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

  • Greetings to Karnataka CM @BSYBJP Ji on his birthday. Yediyurappa Ji is one of our most experienced leaders, who has devoted his life towards the welfare of farmers and empowering the poor. Praying for his long and healthy life.

    — Narendra Modi (@narendramodi) February 27, 2021 " class="align-text-top noRightClick twitterSection" data=" ">

ಜೊತೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿ ಕೇಂದ್ರದ ಹಲವು ಸಚಿವರು ಯಡಿಯೂರಪ್ಪರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಇತ್ತ ರಾಜ್ಯ ಸಚಿವರು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿ ಬಿಜೆಪಿ ಶಾಸಕರು, ಸಚಿವರು ಟ್ವೀಟ್ ಮಾಡಿ, ಬಿಎಸ್​ವೈಗೆ ವಿಶ್​ ಮಾಡಿದ್ದಾರೆ.

ಓದಿ: ಪರಿಷತ್ ಸಚಿವಾಲಯದ ನೌಕರರಿಗೆ ಡ್ರೆಸ್ ಕೋಡ್ ಜಾರಿ!

ಮುಖ್ಯ ಕಾರ್ಯದರ್ಶಿ ರವಿಕುಮಾರ್ ಸೇರಿದಂತೆ ಹಲವು ನಾಯಕರು ಸಿಎಂ ಕಾವೇರಿ ನಿವಾಸಕ್ಕೆ ಆಗಮಿಸಿ, ಯಡಿಯೂರಪ್ಪ ಅವರಿಗೆ ಹೂ ಗುಚ್ಛ ನೀಡಿ ಶುಭ ಹಾರೈಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.