ಬೆಂಗಳೂರು: ಹುಟ್ಟುಹಬ್ಬದ ಹಿನ್ನೆಲೆ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಸಂಜಯನಗರದ ರಾಧಾಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಪ್ರತಿ ವರ್ಷ ಸಿಎಂ ಯಡಿಯೂರಪ್ಪ ಜನ್ಮ ದಿನದ ಪ್ರಯುಕ್ತ ಸಂಜಯನಗರದ ರಾಧಾಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸುತ್ತಾರೆ. ಇಂದೂ ಸಹ ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪುಷ್ಪಾರ್ಚನೆ ಮತ್ತು ವಿದ್ಯಾ ಗಣಪತಿ ಪೂಜೆ ನೆರವೇರಿದರು. ಈ ವೇಳೆ ಸಿಎಂಗೆ ಸಚಿವ ಬೈರತಿ ಬಸವರಾಜ್, ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್, ಮಾಜಿ ಸಚಿವಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸಾಥ್ ನೀಡಿದರು.
ಈ ವೇಳೆ ಮಾತನಾಡಿದ ಸಿಎಂ, ಪ್ರಧಾನಿ ಮೋದಿಯವರ ಸರ್ಕಾರದಲ್ಲಿ ಇನ್ನಷ್ಟು ಒಳ್ಳೆಯ ಕೆಲಸಗಳು ಆಗಲಿ. ಮೋದಿಯವರು ಮತ್ತೊಮ್ಮೆ ದೇಶದ ಪ್ರಧಾನಿ ಆಗಲಿ. ಈ ಸಲ ಜನರ ನಿರೀಕ್ಷೆಗೆ ತಕ್ಕಂತೆ ಒಳ್ಳೆಯ ಬಜೆಟ್ ಕೊಡುತ್ತೇವೆ. ಉಳಿದ ಎರಡು ವರ್ಷದ ಅವಧಿಯಲ್ಲಿ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ, ರೈತರ ಕಲ್ಯಾಣ, ಜನ ನೆಮ್ಮದಿಯಿಂದ ಬಾಳಲು ಬೇಕಾದ ಎಲ್ಲಾ ಸವಲತ್ತುಗಳನ್ನು ಒದಗಿಸುವುದು ನನ್ನ ಗುರಿ ಎಂದು ತಿಳಿಸಿದರು.