ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ ಒಂದು ವರ್ಷ ಪೂರ್ಣಗೊಳಿಸಿದ ಬೆನ್ನಲ್ಲೇ ಶಾಸಕರಿಗೆ ಭರ್ಜರಿ ಉಡುಗೊರೆ ಸಿಕ್ಕಿದೆ. 24 ಶಾಸಕರಿಗೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನವನ್ನು ನೀಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.
![CM BSY](https://etvbharatimages.akamaized.net/etvbharat/prod-images/kn-bng-02-board-corporation-chairman-list-photo-7208080_27072020133800_2707f_1595837280_72.jpg)
ಬಂಡಾಯದ ಕಹಳೆ ಊದುವ ಸಾಧ್ಯತೆ ಇರುವ ಶಾಸಕರು ಹಾಗೂ ಆಪ್ತ ಶಾಸಕರನ್ನು ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಮೂಲಕ ಸಿಎಂ ಮುನ್ನೆಚ್ಚರಿಕೆಯ ಹೆಜ್ಜೆ ಇಟ್ಟಿದ್ದಾರೆ. ಸಂಪುಟ ವಿಸ್ತರಣೆ ಮಾಡುವ ವೇಳೆ ಆಕಾಂಕ್ಷಿಗಳಾಗುವ ಅಪೇಕ್ಷೆ ವ್ಯಕ್ತಪಡಿಸದಂತೆ ಮುಂಜಾಗ್ರತೆ ವಹಿಸಿ ನಿಗಮ ಮಂಡಳಿ ಸ್ಥಾನ ನೀಡಿದ್ದಾರೆ ಎನ್ನಲಾಗಿದೆ.
![CM BSY](https://etvbharatimages.akamaized.net/etvbharat/prod-images/kn-bng-02-board-corporation-chairman-list-photo-7208080_27072020133800_2707f_1595837280_1024.jpg)
ಯಾರಿಗೆ ಯಾವ ಸ್ಥಾನ:
- ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ : ಕರ್ನಾಟಕ ಗೃಹ ಮಂಡಳಿ
- ಹೊಳಲ್ಕೆರೆ ಶಾಸಕ ಎಂ ಚಂದ್ರಪ್ಪ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ
- ಸುರಪುರ ಶಾಸಕ ರಾಜುಗೌಡ : ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ
- ಮೂಡಿಗೆರೆ ಶಾಸಕ ಎಂ ಪಿ ಕುಮಾರಸ್ವಾಮಿ : ಕರ್ನಾಟಕ ಮಾರುಕಟ್ಟೆ ಕನ್ಸಲ್ಟೆಂಟ್ ಮತ್ತು ಏಜೆನ್ಸಿಸ್ ಲಿಮಿಟೆಡ್
- ಮುದ್ದೇಬಿಹಾಳ ಶಾಸಕ ಎಎಸ್ ಪಾಟೀಲ್ : ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ
- ಸಾಗರ ಶಾಸಕ ಹರತಾಳು ಹಾಲಪ್ಪ : ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್
- ಚನ್ನಗಿರಿ ಶಾಸಕ ಮಾಡಾಳು ವಿರೂಪಾಕ್ಷಪ್ಪ : ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ
- ಚಿತ್ರದುರ್ಗ ಶಾಸಕ ಜಿ ಹೆಚ್ ತಿಪ್ಪಾರೆಡ್ಡಿ : ದೇವರಾಜ್ ಅರಸ್ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ
- ದೇವದುರ್ಗ ಶಾಸಕ ಶಿವನಗೌಡ ನಾಯಕ್ : ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ
- ರೋಣ ಶಾಸಕ ಕಳಕಪ್ಪ ಬಂಡಿ : ಕರ್ನಾಟಕ ರಾಜ್ಯ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತ
- ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ: ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ
- ತೇರದಾಳ ಶಾಸಕ ಸಿದ್ದು ಸವದಿ: ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತ
- ಹಾಸನ ಶಾಸಕ ಪ್ರೀತಮ್ ಗೌಡ : ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ
- ಸೇಡಂ ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ್: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ
- ಗುಲ್ಬರ್ಗ ದಕ್ಷಿಣ ಶಾಸಕ ದತ್ತಾತ್ರೇಯ ಪಾಟೀಲ ರೇವೂರ : ಕರ್ನಾಟಕ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ
- ನವಲಗುಂದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ: ಕರ್ನಾಟಕ ನಗರ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮ
- ತಿಪಟೂರು ಶಾಸಕ ಎಚ್ ನಾಗೇಶ್ : ಕರ್ನಾಟಕ ರಾಜ್ಯ ತೆಂಗಿನ ನಾರಿನ ಅಭಿವೃದ್ಧಿ ನಿಗಮ
- ಜಗಳೂರು ಶಾಸಕ ಎಸ್ ವಿ ರಾಮಚಂದ್ರ : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮ
- ಹಾವೇರಿ ಶಾಸಕ ನೆಹರೂ ಓಲೇಕಾರ್ : ಡಾ.ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ
- ರಾಯಭಾಗ ಶಾಸಕ ಐಹೊಳೆ ದುರ್ಯೋಧನ : ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ
- ಕಾಪು ಶಾಸಕ ಲಾಲಾಜಿ ಮೆಂಡನ್ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ
- ಕನಕಗಿರಿ ಶಾಸಕ ಬಸವರಾಜ ದಡೇಸಗೂರು: ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಮಂಡಳಿ
- ರಾಯಚೂರು ಶಾಸಕ ಶಿವರಾಜ್ ಪಾಟೀಲ್ : ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ
- ಗುಂಡ್ಲುಪೇಟೆ ಶಾಸಕ ನಿರಂಜನ್ ಕುಮಾರ್ : ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತ