ETV Bharat / city

ಪ್ರಧಾನಿ ಜೊತೆಗಿನ ವಿಡಿಯೊ ಸಂವಾದದಲ್ಲಿ ನೆರವಿನ ಅಪೇಕ್ಷೆ ವ್ಯಕ್ತಪಡಿಸಿದ ಸಿಎಂ ಬಿಎಸ್‌ವೈ - ಲಾಕ್​ಡೌನ್​

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಎಲ್ಲಾ ರಾಜ್ಯಗಳ ಸಿಎಂಗಳ ಜೊತೆಗೆ ವಿಡಿಯೋ ಸಂವಾದ ನಡೆಸಿದ್ದು, ಕೊರೊನಾ, ಲಾಕ್‌ಡೌನ್‌ ಕುರಿತಾಗಿ ಸಲಹೆಗಳನ್ನು ಪಡೆದುಕೊಂಡಿದ್ದಾರೆ.

video conference
ವಿಡಿಯೋ ಸಂವಾದ
author img

By

Published : May 11, 2020, 4:19 PM IST

Updated : May 11, 2020, 4:47 PM IST

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿದ್ದು ರಾಜ್ಯದಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾಗಿಯಾದರು.

ವಿಡಿಯೊ ಸಂವಾದ

ಗೃಹ ಕಚೇರಿ ಕೃಷ್ಣಾದಿಂದ ಪ್ರಧಾನಿ ಮೋದಿ ಸಂವಾದದಲ್ಲಿ ಪಾಲ್ಗೊಂಡ ಸಿಎಂ, ರಾಜ್ಯದಲ್ಲಿ ಕೊರೊನಾ ಸ್ಥಿತಿಗತಿ ಕುರಿತು ಮಾಹಿತಿ ನೀಡಿದರು‌. ಲಾಕ್​​ಡೌನ್ ಸಡಿಲಿಕೆ ನಂತರದ ಬೆಳವಣಿಗೆಗಳ ಕುರಿತು ವಿವರ ನೀಡಿದ ಬಿಎಸ್​ವೈ, ಲಾಕ್​ಡೌನ್​ನಿಂದ ಸಂಕಷ್ಟಕ್ಕೆ ಸಿಲುಕಿದವರ ನೆರವಿಗೆ 1,610 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ ಕುರಿತು ಪ್ರಸ್ತಾಪಿಸಿ ಕೇಂದ್ರದ ನೆರವಿಗೆ ಅಪೇಕ್ಷೆ ವ್ಯಕ್ತಪಡಿಸಿದರು.

ಈ ವೇಳೆ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಸಿ.ಎನ್.ಅಶ್ವತ್ಥ ನಾರಾಯಣ್, ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್, ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಪಾಲ್ಗೊಂಡಿದ್ದರು.

Last Updated : May 11, 2020, 4:47 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.