ETV Bharat / city

ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಜೊತೆಗಿನ ಸಭೆ: ಕೈಗೊಂಡ ತೀರ್ಮಾನಗಳೇನು?

author img

By

Published : May 1, 2021, 7:57 PM IST

Updated : May 1, 2021, 10:01 PM IST

ವಿದೇಶಗಳಲ್ಲಿ ವೈದ್ಯಕೀಯ ಪದವಿ ಮುಗಿಸಿರುವ ವಿದ್ಯಾರ್ಥಿಗಳನ್ನು ಕೋವಿಡ್ ಚಿಕಿತ್ಸೆಗೆ ಬಳಸಿಕೊಳ್ಳಲು ಅನುಕೂಲವಾಗುವಂತೆ ಕರ್ನಾಟಕ ಮೆಡಿಕಲ್ ಕೌನ್ಸಿಲ್​ನಲ್ಲಿ ನೋಂದಣಿ ಮಾಡಿಸಿ ಅವರನ್ನು ಬಳಸಿಕೊಳ್ಳಲು ಕ್ರಮ

CM BSY meeting
CM BSY meeting

ಬೆಂಗಳೂರು: ಸಿಎಂ ನೇತೃತ್ವದಲ್ಲಿ ಕಾವೇರಿ ನಿವಾಸದಲ್ಲಿ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಜೊತೆ ಸಭೆ ನಡೆಸಿ ಕೆಲ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಯಿತು.

ವೈದ್ಯಕೀಯ ಮಾನವ ಸಂಪನ್ಮೂಲ ಕೊರತೆ ನೀಗಿಸಲು ಅಂತಿಮ ವರ್ಷದ ವೈದ್ಯಕೀಯ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಿ ಕೋವಿಡ್ ಚಿಕಿತ್ಸೆಗೆ ಬಳಸಿಕೊಳ್ಳಲು ಕ್ರಮ ಕೈಗೊಳ್ಳಲು ನಿರ್ಧರಿಸಲಾಯಿತು. ನರ್ಸಿಂಗ್ ಕೋರ್ಸ್​ಗಳು, ಫಾರ್ಮಸಿ ಕೋರ್ಸ್‌ಗಳು, ಫಿಜಿಯೋಥೆರಪಿ ಕೋರ್ಸ್‌ಗಳು, ಆಯುಷ್ ವೈದ್ಯ ಕೋರ್ಸ್‌ಗಳು, ದಂತ ವೈದ್ಯಕೀಯ ಕೋರ್ಸ್‌ಗಳು ಹಾಗೂ ಹಾಸ್ಪಿಟಲ್ ಮ್ಯಾನೇಜ್ಮೆಂಟ್ ಕೋರ್ಸ್‌ಗಳ ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಕೋವಿಡ್ ಚಿಕಿತ್ಸೆಗೆ ಬಳಸಿಕೊಳ್ಳಲು ನಿರ್ಧರಿಸಲಾಗಿದೆ.

ಇನ್ನು ವಿದೇಶಗಳಲ್ಲಿ ವೈದ್ಯಕೀಯ ಪದವಿ ಮುಗಿಸಿರುವ ವಿದ್ಯಾರ್ಥಿಗಳನ್ನು ಕೋವಿಡ್ ಚಿಕಿತ್ಸೆಗೆ ಬಳಸಿಕೊಳ್ಳಲು ಅನುಕೂಲವಾಗುವಂತೆ ಕರ್ನಾಟಕ ಮೆಡಿಕಲ್ ಕೌನ್ಸಿಲ್​ನಲ್ಲಿ ನೋಂದಣಿ ಮಾಡಿಸಿ ಅವರನ್ನು ಬಳಸಿಕೊಳ್ಳಲು ಕ್ರಮ ಕೈಗೊಳ್ಳಲು ಪರಿಶೀಲಿಸುವಂತೆ ಸಲಹೆ ನೀಡಿದರು.

ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಜೊತೆಗಿನ ಸಭೆ

ಇತರ ಪ್ರಮುಖ ನಿರ್ಣಯಗಳೇನು?:

  • ಆಕ್ಸಿಜನ್ ಕಾನ್ಸಂಟ್ರೇಟರ್​ಗಳನ್ನು ಬಳಸಿಕೊಂಡು ಹೋಟೆಲ್​ಗಳನ್ನು ಆಕ್ಸಿಜನೇಟೆಡ್ ಬೆಡ್ ಮಾದರಿಯ ಸ್ಟೆಪ್ ಡೌನ್ ಕೋವಿಡ್ ಆಸ್ಪತ್ರೆಗಳನ್ನಾಗಿ ಪರಿವರ್ತಿಸಲು ಕ್ರಮ.
  • ಸೆಂಟ್ರಲೈಝ್​ಡ್​ ಆಕ್ಸಿಜನೇಷನ್ ವ್ಯವಸ್ಥೆ ಇರುವ ಬೆಡ್​ಗಳನ್ನು ಐ.ಸಿ.ಯು. ಬೆಡ್​ಳನ್ನಾಗಿ ಪರಿವರ್ತಿಸಲು ಕ್ರಮ.
  • ಆಸ್ಪತ್ರೆಗಳಲ್ಲಿ ಚಿಕಿತ್ಸೆ ಅಗತ್ಯವಿಲ್ಲದ ರೋಗ ಲಕ್ಷಣರಹಿತ ಸೋಂಕಿತರು ಆಸ್ಪತ್ರೆಗಳಲ್ಲಿ ದಾಖಲಾಗುತ್ತಿದ್ದು, ಇದನ್ನು ಕಡಿಮೆಗೊಳಿಸಲು ಟ್ರಯಾಜಿಂಗ್ ಮಾಡಿ ಅಗತ್ಯವಿದ್ದವರನ್ನು ಮಾತ್ರ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿ ಉಳಿದ ಲಕ್ಷಣರಹಿತ ಸೋಂಕಿತರನ್ನು ಮನೆಯಲ್ಲಿಯೇ ಐಸೋಲೇಷನ್ ಮಾಡಿ ಚಿಕಿತ್ಸೆ ಮುಂದುವರೆಸಲು ಖಾಸಗಿ ಆಸ್ಪತ್ರೆಗಳ ಸಹಭಾಗಿತ್ವದಲ್ಲಿ ಟೆಲಿ ಮೆಡಿಸಿನ್ ಸೌಲಭ್ಯವನ್ನು ಬಲಪಡಿಸುವುದು.
  • ವೈದ್ಯಕೀಯ ಕಾಲೇಜುಗಳ ಹಾಸ್ಟೆಲ್​ಗಳ ಸಾಮಾನ್ಯ ಬೆಡ್​ಗಳನ್ನು ಆಕ್ಸಿಜನೇಟೆಡ್ ಬೆಡ್ ಗಳಾಗಿ ಪರಿವರ್ತಿಸಲು ಕ್ರಮ.
  • ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಆಕ್ಸಿಜನ್ ಜನರೇಷನ್ ಪ್ಲಾಂಟ್ ಅಳವಡಿಸಲು ಸರ್ಕಾರದಿಂದ ಧನ ಸಹಾಯ - ಕಡಿಮೆ ಕಾರ್ಯಭಾರವಿರುವ ವೈದ್ಯಕೀಯ ಸಿಬ್ಬಂದಿಗಳನ್ನು ಗುರುತಿಸಿ ಅವರುಗಳನ್ನು ಪರಿಪೂರ್ಣವಾಗಿ ಉಪಯೋಗಿಸಿಕೊಳ್ಳಲು ಕ್ರಮ.
  • ರೆಮ್ಡೆಸಿವಿರ್​ ಮತ್ತು ಆಕ್ಸಿಜನ್ ಅನಗತ್ಯವಾಗಿ ಬಳಕೆಯಾಗುತ್ತಿದ್ದು, ಇದನ್ನು ತಪ್ಪಿಸಲು ಸೂಕ್ತ ಆಡಿಟ್ ವ್ಯವಸ್ಥೆ ರೂಪಿಸುವುದು.
  • ಕೋವಿಡ್ ಲಸಿಕಾ ಕಾರ್ಯಕ್ರಮದ ವೇಗ ವರ್ಧನೆಗೊಳಿಸುವುದು
  • ಕೋವಿಡ್ ಚಿಕಿತ್ಸೆಯಲ್ಲಿ ತೊಡಗಿರುವ ವೈದ್ಯರಿಗೆ ಈಗ ನೀಡುತ್ತಿರುವ ಇನ್ಸೆಂಟಿವ್ ಹೆಚ್ಚಿಸಲು ನಿರ್ಧಾರ.
  • ಕೋವಿಡ್ ಕರ್ತವ್ಯದಲ್ಲಿ ತೊಡಗಿರುವ ವೈದ್ಯರು/ವೈದ್ಯಕೀಯ ಸಿಬ್ಬಂದಿಗಳು ಸೋಂಕಿತರಾದಲ್ಲಿ ಅವರಿಗೆ ಸರ್ಕಾರಿ ವೆಚ್ಚದಲ್ಲಿ ಚಿಕಿತ್ಸೆ ನೀಡಲು ಕ್ರಮ.
  • ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳನ್ನು ಕೋವಿಡ್ ಚಿಕಿತ್ಸೆಗೆ ಬಳಸಿಕೊಂಡಲ್ಲಿ ಅವರಿಗೆ ಆದ್ಯತೆಯ ಮೇಲೆ ಕೋವಿಡ್ ಲಸಿಕೆ ನೀಡಲು ಕ್ರಮ.

Last Updated : May 1, 2021, 10:01 PM IST

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.