ಬೆಂಗಳೂರು: ಶಿಕಾರಿಪುರ ತಾಲೂಕು ಕಾಳೇನಹಳ್ಳಿಯ ರೇವಣಸಿದ್ದ ಮಹಾಸ್ವಾಮಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಬಿಜಾಪುರ ಜಿಲ್ಲೆ ಬಸವನಬಾಗೇವಾಡಿಯಲ್ಲಿ ಜನಿಸಿದ ರೇವಣಸಿದ್ದ ಸ್ವಾಮೀಜಿ ಅವರು ಬಾಲ್ಯಾವಸ್ಥೆಯಲ್ಲಿಯೇ ಸನ್ಯಾಸತ್ವ ಸ್ವೀಕರಿಸಿ, ಅಧ್ಯಾತ್ಮಿಕ ಉನ್ನತಿ ಸಾಧಿಸಿದ್ದರು. ಅವರು ತಮ್ಮ ಸಮಾಜಮುಖಿ ಚಿಂತನೆಗಳ ಮೂಲಕ ಎಲ್ಲರಿಗೂ ಮಾರ್ಗದರ್ಶಕರಾಗಿದ್ದರು.
ಇದನ್ನೂ ಓದಿ: ನಕಲಿ ನೋಟು ಪ್ರಕರಣ: ಅಪರಾಧಿಗೆ ಜೈಲು ಶಿಕ್ಷೆ ಪ್ರಕಟಿಸಿದ ಸಿವಿಲ್ ಕೋರ್ಟ್!
ಎಲ್ಲ ಧರ್ಮದವರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದ ಸ್ವಾಮೀಜಿ ಅವರ ನಿಧನದಿಂದ ನಾವು ಹಿರಿಯ ಅಧ್ಯಾತ್ಮಿಕ ಚೇತನವನ್ನು ಕಳೆದುಕೊಂಡಿದ್ದೇವೆ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ ಎಂದು ಸಿಎಂ ಬಿಎಸ್ವೈ ಪ್ರಾರ್ಥಿಸಿದ್ದಾರೆ.