ETV Bharat / city

ಅರಬ್ಬೀ ಸಮುದ್ರದಲ್ಲಿ ಸಿಲುಕಿದ್ದ 9 ಮಂದಿಯ ರಕ್ಷಣೆ : ಕೋಸ್ಟ್ ಗಾರ್ಡ್, ನೌಕಾದಳಕ್ಕೆ ಸಿಎಂ ಕೃತಜ್ಞತೆ

ಹವಾಮಾನ ವೈಪರೀತ್ಯದಿಂದ ಕಾರ್ಯಾಚರಣೆ ವಿಳಂಬವಾದರೂ ಎಲ್ಲರನ್ನೂ ಸುರಕ್ಷಿತವಾಗಿ ದಡ ಸೇರಿಸಲಾಗಿದೆ. ಸುಮಾರು 40 ಗಂಟೆಗಳ ಸೆಣಸಾಟದ ಬಳಿಕ ಎಲ್ಲಾ 9 ಮಂದಿ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ..

CM BSY thanked coast guard
ಅರಬ್ಬೀ ಸಮುದ್ರದಲ್ಲಿ ಸಿಲುಕಿದ್ದವರ ರಕ್ಷಣ
author img

By

Published : May 17, 2021, 12:23 PM IST

ಬೆಂಗಳೂರು : ಉಡುಪಿಯ ಕಾಪು ಬಳಿ ಅರಬ್ಬೀ ಸಮುದ್ರದಲ್ಲಿ ಟಗ್ ಬೋಟ್​ನಲ್ಲಿ ಸಿಲುಕಿದ್ದ 9 ಮಂದಿ ಕಾರ್ಮಿಕರನ್ನು ಸುರಕ್ಷಿತವಾಗಿ ಕರೆ ತಂದಿರುವ ರಕ್ಷಣಾ ಸಿಬ್ಬಂದಿಗೆ ಸಿಎಂ ಬಿಎಸ್​ವೈ ಟ್ವೀಟ್ ಮೂಲಕ ಕೃತಜ್ಞತೆ ತಿಳಿಸಿದ್ದಾರೆ.

'ಅರಬ್ಬೀ ಸಮುದ್ರದಲ್ಲಿ ಟಗ್​ನಲ್ಲಿ ಸಿಲುಕಿದ್ದ 9 ಮಂದಿ ಕಾರ್ಮಿಕರನ್ನು ರಕ್ಷಿಸಲಾಗಿದ್ದು, ಕಾರ್ಯಾಚರಣೆ ನಡೆಸಿದ ಕೋಸ್ಟ್ ಗಾರ್ಡ್ ಹಾಗೂ ನೌಕಾಪಡೆಗೆ ಧನ್ಯವಾದಗಳು.

ಇಂದು ಮುಂಜಾನೆಯಿಂದ ರಕ್ಷಣಾ ಕಾರ್ಯಾಚರಣೆ ನಡೆಸಿ ಎಲ್ಲರನ್ನೂ ರಕ್ಷಿಸಲಾಗಿದೆ. ಕಾರ್ಮಿಕರ ಆರೋಗ್ಯದ ತಪಾಸಣೆ ಸೇರಿದಂತೆ ಎಲ್ಲ ಅಗತ್ಯ ನೆರವು ಒದಗಿಸಲಾಗುತ್ತಿದೆ' ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

  • ಅರಬ್ಬೀ ಸಮುದ್ರದಲ್ಲಿ ಟಗ್ ನಲ್ಲಿ ಸಿಲುಕಿದ್ದ 9 ಮಂದಿ ಕಾರ್ಮಿಕರನ್ನು ರಕ್ಷಿಸಲಾಗಿದ್ದು, ಕಾರ್ಯಾಚರಣೆ ನಡೆಸಿದ ಕೋಸ್ಟ್ ಗಾರ್ಡ್ ಹಾಗೂ ನೌಕಾಪಡೆಗೆ ಧನ್ಯವಾದಗಳು. ಇಂದು ಮುಂಜಾನೆಯಿಂದ ರಕ್ಷಣಾ ಕಾರ್ಯಾಚರಣೆ ನಡೆಸಿ ಎಲ್ಲರನ್ನೂ ರಕ್ಷಿಸಲಾಗಿದೆ. ಕಾರ್ಮಿಕರ ಆರೋಗ್ಯದ ತಪಾಸಣೆ ಸೇರಿದಂತೆ ಎಲ್ಲ ಅಗತ್ಯ ನೆರವು ಒದಗಿಸಲಾಗುತ್ತಿದೆ.

    — CM of Karnataka (@CMofKarnataka) May 17, 2021 " class="align-text-top noRightClick twitterSection" data=" ">

ಓದಿ : ಉಡುಪಿ: 40 ಗಂಟೆಯಿಂದ ಸಮುದ್ರದಲ್ಲಿ ಸಿಲುಕಿದ್ದ 9 ಮಂದಿಯ ರಕ್ಷಣೆ

ತೌಕ್ತೆ ಚಂಡಮಾರುತದಿಂದ ಅಲೆಗಳ ಹೊಡೆತಕ್ಕೆ ಸಿಲುಕಿ ಕೋರಮಂಡಲ ಟಗ್ ಬೋಟ್ ಉಡುಪಿಯ ಕಾಪು ದೀಪಸ್ತಂಭಂದ ಸಮೀಪ ಸಮುದ್ರದಲ್ಲಿ ಸಿಲುಕಿಕೊಂಡಿತ್ತು.

ಅದರಲ್ಲಿದ್ದ 9 ಮಂದಿ ಮಂಗಳೂರಿನ ಎಂಆರ್​ಪಿಎಲ್​ನ ಗುತ್ತಿಗೆ ನೌಕರರು ತಮ್ಮನ್ನು ರಕ್ಷಣೆ ಮಾಡುವಂತೆ ಕರಾವಳಿ ಕಾವಲುಪಡೆ ಸಿಬ್ಬಂದಿಗೆ ವಿಡಿಯೋ ಮೂಲಕ ಮನವಿ ಮಾಡಿಕೊಂಡಿದ್ದರು.

ಹವಾಮಾನ ವೈಪರೀತ್ಯದಿಂದ ಕಾರ್ಯಾಚರಣೆ ವಿಳಂಬವಾದರೂ ಎಲ್ಲರನ್ನೂ ಸುರಕ್ಷಿತವಾಗಿ ದಡ ಸೇರಿಸಲಾಗಿದೆ. ಸುಮಾರು 40 ಗಂಟೆಗಳ ಸೆಣಸಾಟದ ಬಳಿಕ ಎಲ್ಲಾ 9 ಮಂದಿ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.