ಬೆಂಗಳೂರು: ಕೊರೊನಾದ ಎರಡನೇ ಅಲೆ ಹೊಸ ಹೊಸ ರೂಪದಲ್ಲಿ ಪ್ರಾರಂಭವಾಗುವ ಸಾಧ್ಯತೆಗಳಿದ್ದು ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರ ಸನ್ನದ್ಧವಾಗಿದೆ ಸರ್ಕಾರದೊಂದಿಗೆ ಸಾರ್ವಜನಿಕರು ಕೈಜೋಡಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಈ ಕುರಿತು ವಿಡಿಯೋ ಸಂದೇಶ ನೀಡಿರುವ ಬಿಎಸ್ವೈ 2020 ಕಳೆದು 2021ಕ್ಕೆ ಕಾಲಿಡುತ್ತಿದ್ದೇವೆ. ಹೊಸ ವರ್ಷ ಎಲ್ಲರಿಗೂ ಸುಖ, ಸಮೃದ್ಧಿ ಮತ್ತು ಸಂಭ್ರಮಗಳನ್ನು ತರಲಿ. ಕಳೆದ ಸಾಲಿನಲ್ಲಿ ಕವಿದಿದ್ದ ಸಾಂಕ್ರಾಮಿಕ ಈ ವರ್ಷದಲ್ಲಿ ಕಳೆದು ಎಲ್ಲವೂ ಸಹಜಸ್ಥಿತಿಗೆ ಬರಲಿ ಎಂದು ಆಶಿಸಿದರು.
ಇದನ್ನೂ ಓದಿ: ಹೊಸ ವರ್ಷಕ್ಕೆ ಶುಭಾಶಯ ಕೋರಿದ ಹೆಚ್ಡಿಕೆ
ಹೊಸ ವರ್ಷ ಸಂಭ್ರಮದಿಂದ ಕೂಡಿರಲಿ ಆದರೆ ಆಚರಣೆ ಸರಳವಾಗಿರಲಿ. ಕೊರೊನಾ ಸಂಕ್ರಾಮಿಕ ಹಾವಳಿಯಿಂದ ಕಂಗೆಟ್ಟಿರುವ ಈ ಸಂದರ್ಭದಲ್ಲಿ ಗುಂಪು ಸೇರುವುದು ಅಪಾಯಕಾರಿ ಆಗಬಲ್ಲದು. ಹಾಗಾಗಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಸ್ಯಾನಿಟೈಸರ್ ಮಾಡಿಕೊಂಡು ನಮ್ಮನ್ನು ನಾವು ಕಾಪಾಡಿಕೊಳ್ಳುವುದು ಅತ್ಯಗತ್ಯ ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಕೊರೊನಾದ ಎರಡನೇ ಅಲೆ ಹೊಸ ಹೊಸ ರೂಪದಲ್ಲಿ ಪ್ರಾರಂಭವಾಗುವ ಸಾಧ್ಯತೆಗಳಿದ್ದು ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರ ಸನ್ನದ್ಧವಾಗಿದೆ. ಸರ್ಕಾರದೊಂದಿಗೆ ಸಾರ್ವಜನಿಕರು ಕೈಜೋಡಿಸಿ ಕೊರೊನಾ ಸಾಂಕ್ರಾಮಿಕವನ್ನು ನಿಯಂತ್ರಿಸಲು ಸಹಕರಿಸಬೇಕೆಂದು ಮನವಿ ಮಾಡಿ ಎಲ್ಲರಿಗೂ ಮತ್ತೊಮ್ಮೆ ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ.