ಬೆಂಗಳೂರು: ಕೋವಿಡ್-19 ವೈರಸ್ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಕರೆ ನೀಡಿರುವ 'ಜನತಾ ಕರ್ಫ್ಯೂ' ಬೆಂಬಲಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, 'ನಾಳೆ ಬೆಳಗ್ಗೆ 7ರಿಂದ ರಾತ್ರಿ 9 ಗಂಟೆವರೆಗೆ ಜನತಾ ಕರ್ಫ್ಯೂ ಆಚರಣೆಗೆ ನಿಮ್ಮೆಲ್ಲರ ಬೆಂಬಲ ಅತಿ ಅಗತ್ಯ. ಈ ಸಮಯದಲ್ಲಿ ನಾವೆಲ್ಲರೂ ಮನೆಯಲ್ಲಿ ಉಳಿದು ಕರ್ಫ್ಯೂಗೆ ಬೆಂಬಲಿಸೋಣ. ಇದೆಲ್ಲದಕ್ಕೂ ರಾಜ್ಯದ 6.5 ಕೋಟಿ ಜನರ ನೈತಿಕ ಮತ್ತು ಸಾಂಘಿಕ ಬೆಂಬಲ ಮುಖ್ಯ ಎಂದು ಹೇಳಿದ್ದಾರೆ.
-
ಸಮಸ್ತ ನಾಗರಿಕ ಬಂಧುಗಳಲ್ಲಿ ಮನವಿ
— CM of Karnataka (@CMofKarnataka) March 21, 2020 " class="align-text-top noRightClick twitterSection" data="
ದೇಶದಲ್ಲಿ #ಕೋವಿಡ್_19 ವೈರಾಣು ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದೀಜಿಯವರು, ಮಾರ್ಚ್ 22ರಂದು ಬೆಳಗ್ಗೆ 7ರಿಂದ ರಾತ್ರಿ 9 ಗಂಟೆಯವರೆಗೆ #ಜನತಾ_ಕರ್ಫ್ಯೂ ಗೆ ಕರೆ ಕೊಟ್ಟಿದ್ದು, ಇದನ್ನು ಯಶಸ್ವಿಗೊಳಿಸೋಣ.#Covid_19 #coronainkarnataka #FightbackIndia @BSYBJP pic.twitter.com/1jPZPdTqei
">ಸಮಸ್ತ ನಾಗರಿಕ ಬಂಧುಗಳಲ್ಲಿ ಮನವಿ
— CM of Karnataka (@CMofKarnataka) March 21, 2020
ದೇಶದಲ್ಲಿ #ಕೋವಿಡ್_19 ವೈರಾಣು ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದೀಜಿಯವರು, ಮಾರ್ಚ್ 22ರಂದು ಬೆಳಗ್ಗೆ 7ರಿಂದ ರಾತ್ರಿ 9 ಗಂಟೆಯವರೆಗೆ #ಜನತಾ_ಕರ್ಫ್ಯೂ ಗೆ ಕರೆ ಕೊಟ್ಟಿದ್ದು, ಇದನ್ನು ಯಶಸ್ವಿಗೊಳಿಸೋಣ.#Covid_19 #coronainkarnataka #FightbackIndia @BSYBJP pic.twitter.com/1jPZPdTqeiಸಮಸ್ತ ನಾಗರಿಕ ಬಂಧುಗಳಲ್ಲಿ ಮನವಿ
— CM of Karnataka (@CMofKarnataka) March 21, 2020
ದೇಶದಲ್ಲಿ #ಕೋವಿಡ್_19 ವೈರಾಣು ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದೀಜಿಯವರು, ಮಾರ್ಚ್ 22ರಂದು ಬೆಳಗ್ಗೆ 7ರಿಂದ ರಾತ್ರಿ 9 ಗಂಟೆಯವರೆಗೆ #ಜನತಾ_ಕರ್ಫ್ಯೂ ಗೆ ಕರೆ ಕೊಟ್ಟಿದ್ದು, ಇದನ್ನು ಯಶಸ್ವಿಗೊಳಿಸೋಣ.#Covid_19 #coronainkarnataka #FightbackIndia @BSYBJP pic.twitter.com/1jPZPdTqei
ಈ ಸಮಯದಲ್ಲಿ ನನ್ನ ಕಳಕಳಿ ಏನೆಂದರೆ ರಾತ್ರಿ 9 ಗಂಟೆಯ ನಂತರ ಕರ್ಫ್ಯೂ ಅವಧಿ ಮುಗಿದಿದೆ ಎಂದು ಎಲ್ಲರೂ ಮನೆಯ ಹೊರ ಬಂದು ಸಂಭ್ರಮಿಸುವುದಾಗಲಿ ಅಥವಾ ನಿಮ್ಮ ದಿನನಿತ್ಯದ ಚಟುವಟಿಕೆಗಳಲ್ಲಿ ತೊಡಗಿಸುವುದಾಗಲಿ ಮಾಡಬೇಡಿ ಎಂದು ಸಲಹೆ ನೀಡಿದ್ದಾರೆ.
ಸಂಜೆ 5 ಗಂಟೆಗೆ ಮನೆಯ ಕಿಟಕಿಗಳಿಂದ ಮತ್ತು ಛಾವಣಿಗಳ ಮೇಲಿಂದ ಚಪ್ಪಾಳೆ ತಟ್ಟಿ ವೈದ್ಯರಿಗೆ ಮತ್ತು ಪೊಲೀಸರಿಗೆ ನೈತಿಕ ಬೆಂಬಲ ನೀಡುವುದನ್ನು ಮಾತ್ರ ಮರೆಯಬೇಡಿ ಎಂದು ಕೋರಿದ್ದಾರೆ.