ETV Bharat / city

ಕಿಂಗ್‌ ಮೇಕರ್ ಆಗುವ ಆಸೆ ಇಲ್ಲ, ಯಾವುದೇ ಷರತ್ತಿನೊಂದಿಗೆ ಜೆಡಿಎಸ್​ ಸೇರುತ್ತಿಲ್ಲ: ಸಿ.ಎಂ. ಇಬ್ರಾಹಿಂ - ಎಚ್​.ಡಿ. ದೇವೇಗೌಡ ಭೇಟಿಯಾದ ಸಿ.ಎಂ ಇಬ್ರಾಹಿಂ

ವಿಧಾನಪರಿಷತ್​ ಸದಸ್ಯ ಸಿ.ಎಂ. ಇಬ್ರಾಹಿಂ ಅವರು ಕಾಂಗ್ರೆಸ್​ಗೆ ಗುಡ್​ಬೈ ಹೇಳಿದ್ದು, ಇದೀಗ ಜೆಡಿಎಸ್​ ಸೇರ್ಪಡೆಗೆ ಸಜ್ಜಾಗಿದ್ದಾರೆ. ಈ ನಿಟ್ಟಿನಲ್ಲಿ ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡರನ್ನು ಭೇಟಿ ಮಾಡಿ ಮಾತುಕತೆ ಸಹ ನಡೆಸಿದ್ದಾರೆ. ಮಾರ್ಚ್​ 20 ರಂದು ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗ್ತಿದೆ.

ibrahim
ಇಬ್ರಾಹಿಂ
author img

By

Published : Mar 12, 2022, 10:24 PM IST

ಬೆಂಗಳೂರು: ಹಿರಿಯ ನಾಯಕ ಸಿ.ಎಂ. ಇಬ್ರಾಹಿಂ ಶನಿವಾರ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಬೆನ್ನಲ್ಲೇ ಮಾಜಿ ಪ್ರಧಾನಿ, ಜೆಡಿಎಸ್‍ ವರಿಷ್ಠ ಹೆಚ್.ಡಿ. ದೇವೇಗೌಡರನ್ನು ಭೇಟಿ ಮಾಡಿ ಜೆಡಿಎಸ್‍ ಸೇರುವ ಸಂಬಂಧ ಮಾತುಕತೆ ನಡೆಸಿದ್ದಾರೆ.

ಪದ್ಮನಾಭ ನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಶನಿವಾರ ರಾತ್ರಿ ಭೇಟಿ ನೀಡಿದ ಸಿ.ಎಂ. ಇಬ್ರಾಹಿಂ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ದೊಡ್ಡಗೌಡರ ಜೊತೆ ಸಮಾಲೋಚನೆ ನಡೆಸಿದರು.

ದೇವೇಗೌಡರನ್ನು ಭೇಟಿಯಾದ ಬಳಿಕ ಮಾತನಾಡಿದ ಸಿ.ಎಂ. ಇಬ್ರಾಹಿಂ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಜೊತೆ ಮಾತುಕತೆ ನಡೆಸಿದ್ದೇನೆ. ಬಿಜೆಪಿ ಜೊತೆ ಜೆಡಿಎಸ್ ಹೋಗುವುದಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಖುದ್ದು ನಾನೇ ಮಾತನಾಡಿದ್ದು, ಇದನ್ನು ಸ್ಪಷ್ಟಪಡಿಸಿಕೊಂಡು ಬಂದಿದ್ದೇನೆ. ಬಿಜೆಪಿ ಜೊತೆ ಸಮಾನ ಅಂತರ ಕಾಯ್ದುಕೊಂಡು ಹೋಗುತ್ತೇವೆ ಎಂದು ದೇವೇಗೌಡರು ಹೇಳಿದ್ದಾರೆ. ನನಗೆ ಕಿಂಗ್ ಆಗುವ ಆಸೆ ಇದ್ದು, ಕಿಂಗ್ ಮೇಕರ್ ಆಗುವ ಆಸೆ ಇಲ್ಲ ಎಂದರು.

ನಾನು ನನ್ನ ಮನೆಯನ್ನು ಕಟ್ಟಿಕೊಳ್ಳಲು ಹೊರಟಿದ್ದೇನೆ. ನಾನು ಯಾವುದೇ ಷರತ್ತಿನೊಂದಿಗೆ ಸೇರ್ಪಡೆಯಾಗುತ್ತಿಲ್ಲ. ಪಕ್ಷಕ್ಕೆ ದುಡಿಮೆಯಷ್ಟೇ ನನ್ನ ಆದ್ಯತೆ. ನನಗೆ ಯಾವುದೇ ಸ್ಥಾನಮಾನ ನೀಡಿದರೂ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಆದಷ್ಟು ಬೇಗ ಜೆಡಿಎಸ್​ಗೆ ಸೇರ್ಪಡೆ: ನಾಳೆ ನಮ್ಮ ಸಮಾಜದ ಗುರುಗಳ ಜೊತೆ ಚರ್ಚೆ ನಡೆಸುತ್ತೇನೆ. ಬಳಿಕ ಜೆಡಿಎಸ್ ಪಕ್ಷ ಸೇರ್ಪಡೆ ಬಗ್ಗೆ ತೀರ್ಮಾನಿಸಲಾಗುವುದು. ಜೆಡಿಎಸ್ ಸಣ್ಣ ಪಕ್ಷವಲ್ಲ, ಪ್ರಧಾನಿ ಮತ್ತು ಮುಖ್ಯಮಂತ್ರಿ ಕೊಟ್ಟ ಪಕ್ಷ. ನನ್ನ ಸೇರ್ಪಡೆಯಿಂದ ಜೆಡಿಎಸ್​ನಲ್ಲಿ ಯಾವುದೇ ಅಸಮಾಧಾನ ಇಲ್ಲ. ನನ್ನನ್ನು ಬರಮಾಡಿಕೊಳ್ಳುತ್ತಿರುವುದೇ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಾ ಖಾನ್, ವಿಧಾನಪರಿಷತ್ ಸದಸ್ಯ ಬಿ.ಎಂ. ಫಾರೂಕ್ ಅವರು ಎಂದು ಇಬ್ರಾಹಿಂ ಹೇಳಿದರು.

ಫಸ್ಟ್ ಗೇರ್ ಕುಮಾರಸ್ವಾಮಿ ಅವರದ್ದೇ. ನನ್ನನ್ನು ಪಕ್ಷಕ್ಕೆ ಕರೆಯುತ್ತಿರುವುದೇ ಕುಮಾರಸ್ವಾಮಿ ಅವರು, ಯಾವಾಗ ಸೇರುವುದು ಎಂಬುದು ಇನ್ನೂ ತೀರ್ಮಾನ ಆಗಿಲ್ಲ ಎಂದರು.

ಕಾಂಗ್ರೆಸ್​ನವರು ಚಂದಾ ಹಣದ ಮೇಲೆ ಬದುಕುತ್ತಿದ್ದಾರೆ. ನಾನು ಯಾರ ಚಂದಾ ಹಣದಲ್ಲಿ ಬದುಕುತ್ತಿಲ್ಲ. ನನಗೆ ಕಾಂಗ್ರೆಸ್ ಏನೂ ಕೊಟ್ಟಿಲ್ಲ. ನನ್ನ ಹಣದಲ್ಲಿಯೇ ಕಾಂಗ್ರೆಸ್‌ನಲ್ಲಿ ಕೆಲಸ ಮಾಡಿದ್ದೇನೆ. ಜೆಡಿಎಸ್‌ಗೆ ಸೇರುವುದರಿಂದ ಕಾಂಗ್ರೆಸ್‌ಗೆ ಡ್ಯಾಮೇಜ್ ಆಗಲಿದೆಯೋ? ಇಲ್ಲವೋ? ಎಂಬುದು ಮುಂದೆ ಗೊತ್ತಾಗುತ್ತದೆ. ಆದಷ್ಟು ಬೇಗ ಜೆಡಿಎಸ್ ಸೇರುತ್ತೇನೆ ಎಂದು ತಿಳಿಸಿದರು.

ಮಾರ್ಚ್​ 20 ರಂದು ಜೆಡಿಎಸ್​ಗೆ ಸೇರ್ಪಡೆ?: ಈ ಹಿಂದೆಯೇ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರತ್ಯೇಕವಾಗಿ ಎರಡು ಬಾರಿ ಸಿ.ಎಂ.ಇಬ್ರಾಹಿಂ ಅವರನ್ನು ಭೇಟಿ ಮಾಡಿ ಪಕ್ಷಕ್ಕೆ ಬರುವಂತೆ ಆಹ್ವಾನಿಸಿದ್ದರು. ಇಬ್ರಾಹಿಂ ಸಹ ಜೆಡಿಎಸ್‌ಗೆ ಮರಳಲು ಆಸಕ್ತಿ ಹೊಂದಿದ್ದರು. ಕಳೆದ ಹಲವು ತಿಂಗಳಿಂದ ಕಾಂಗ್ರೆಸ್ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದಲ್ಲಿ ಗುರುತಿಸಿಕೊಂಡಿದ್ದ ಇಬ್ರಾಹಿಂ ಅವರು, ಸಿದ್ದರಾಮಯ್ಯ ಜೆಡಿಎಸ್ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಾಗಲೂ ಅವರ ಜೊತೆ ಕಾಂಗ್ರೆಸ್‌ಗೆ ಹೋದರು.

ಪ್ರತಿ ಹಂತದಲ್ಲಿಯೂ ಸಿದ್ದರಾಮಯ್ಯ ಅವರನ್ನು ಸಮರ್ಥಿಸಿಕೊಳ್ಳುವವರ ಸಾಲಿನಲ್ಲಿ ಮುಂಚೂಣಿಯಲ್ಲಿದ್ದರು. ಆದರೆ, ಕಾರಣಾಂತರಗಳಿಂದ ಇತ್ತೀಚೆಗೆ ಸಿದ್ದರಾಮಯ್ಯ ಅವರಿಂದ ಅಂತರ ಕಾಯ್ದುಕೊಂಡಿದ್ದರು. ಇದೀಗ ಇಬ್ರಾಹಿಂ ಜೆಡಿಎಸ್‌ಗೆ ಮರಳುವ ತೀರ್ಮಾನವನ್ನು ಕೈಗೊಂಡಿದ್ದಾರೆ. ಮಾರ್ಚ್ 20 ರಂದು ಬೆಂಗಳೂರಿನಲ್ಲಿ ಜೆಡಿಎಸ್ ಸಮಾವೇಶ ನಡೆಸಲು ತೀರ್ಮಾನಿಸಿದ್ದು, ಈ ಸಮಾವೇಶದಲ್ಲಿ ಇಬ್ರಾಹಿಂ ಅವರು ಅಧಿಕೃತವಾಗಿ ಜೆಡಿಎಸ್ ಸೇರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆದರೆ, ಪಕ್ಷಕ್ಕೆ ಸೇರ್ಪಡೆಯಾಗುವ ದಿನವನ್ನು ಇಬ್ರಾಹಿಂ ಅವರು ತೀರ್ಮಾನ ಮಾಡಿಲ್ಲ ಎಂದು ತಿಳಿದುಬಂದಿದೆ.

ಓದಿ: ಕಾಂಗ್ರೆಸ್ ಮುಳುಗುತ್ತಿರುವ ಹಡಗು.. ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಗ್ಗೆ ಸಿ.ಎಂ. ಇಬ್ರಾಹಿಂ ಅಧಿಕೃತ ಮಾಹಿತಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.