ಬೆಂಗಳೂರು: ಲಾಕ್ಡೌನ್ 4.0 ಕುರಿತು ಕೇಂದ್ರ ಸರ್ಕಾರದ ಮಾರ್ಗಸೂಚಿಗಳು ಪ್ರಕಟವಾಗಿರುವ ಹಿನ್ನೆಲೆ ಮೇ 18 ರಂದು ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದಾರೆ.
ಈ ಸಭೆಯಲ್ಲಿ ಮುಂದಿನ ಹಂತದ ಲಾಕ್ಡೌನ್ ಅವಧಿಯಲ್ಲಿ ರಾಜ್ಯದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಈಗಾಗಲೇ ಮುಂದಿನ ಎರಡು ದಿನಕ್ಕೆ ಪ್ರಸ್ತುತ ಇರುವ ಲಾಕ್ ಡೌನ್ ಮಾರ್ಗಸೂಚಿಯನ್ನೇ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದ್ದು, ಮಂಗಳವಾರ ಮಧ್ಯರಾತ್ರಿಯಿಂದ ಹೊಸ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಪ್ರಕಟಿಸಲಿದೆ. ಅದಕ್ಕೆ ಸಂಬಂಧಪಟ್ಟಂತೆ ನಾಳೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗುತ್ತದೆ.