ETV Bharat / city

ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ: ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಸಭೆ - chief minister b.s.yadiyurappa

ಪೌರತ್ವ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ, ಗಲಭೆಗಳಿಗೆ ಸಂಬಂಧಿಸಿದಂತೆ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್​​ ಇಲಾಖೆ ಕೈಗೊಂಡಿರುವ ಕ್ರಮಗಳ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾಹಿತಿ ಪಡೆದುಕೊಂಡಿದ್ದಾರೆ.

police officers
http://10.10.50.85:6060///finalout4/karnataka-nle/finalout/20-December-2019/5437023_meeting.mp4
author img

By

Published : Dec 20, 2019, 5:21 PM IST

ಬೆಂಗಳೂರು: ಪೌರತ್ವ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ, ಗಲಭೆಗಳಿಗೆ ಸಂಬಂಧಿಸಿದಂತೆ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್​​ ಇಲಾಖೆ ಕೈಗೊಂಡಿರುವ ಕ್ರಮಗಳ ಕುರಿತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಮಾಹಿತಿ ನೀಡಿದ್ದಾರೆ.

ಡಾಲರ್ಸ್ ಕಾಲೋನಿಯ ಸಿಎಂ ನಿವಾಸ ಧವಳಗಿರಿಗೆ ಗುಪ್ತಚರ ಇಲಾಖೆ ಎಡಿಜಿಪಿ ಕಮಲ್ ಪಂತ್ ಹಾಗೂ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಭೇಟಿ ನೀಡಿ ರಾಜ್ಯಾದ್ಯಂತ ಭುಗಿಲೇಳುತ್ತಿರುವ ಪ್ರತಿಭಟನೆ ಕಾವು ಕುರಿತು ವಿವರಿಸಿದರು.

ಸಿಎಂ ಜೊತೆ ಸಭೆಗೆ ಆಗಮಿಸಿದ ಹಿರಿಯ ಪೊಲೀಸ್ ಅಧಿಕಾರಿಗಳು

ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ, ಮಂಗಳೂರಿನಲ್ಲಿ ಇಬ್ಬರು ಗುಂಡೇಟಿಗೆ ಬಲಿಯಾದ ನಂತರದ ಪರಿಸ್ಥಿತಿ ಹಾಗೂ ಮಂಗಳೂರು, ಕಲಬುರಗಿ ಸೇರಿದಂತೆ ಹಲವು ಸೂಕ್ಷ್ಮ ಜಿಲ್ಲೆಗಳಲ್ಲಿನ ಸದ್ಯದ ಪರಿಸ್ಥಿತಿ ಕುರಿತ ಗುಪ್ತಚರ ಮಾಹಿತಿಯನ್ನು ಮುಖ್ಯಮಂತ್ರಿ ಬಿಎಸ್​​ವೈಗೆ ಕಮಲ್ ಪಂತ್ ನೀಡಿದರು.

ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಬೆಂಗಳೂರಿನಲ್ಲಿ ನಿನ್ನೆ ರಾತ್ರಿಯಿಂದ ಇಂದು ಮಧ್ಯಾಹ್ನದವರೆಗಿನ ನಡೆದ ಘಟನೆಗಳಿಗೆ ಸಂಬಂಧಿಸಿದ ಹಾಗೂ ರಾಜಧಾನಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಕೈಗೊಂಡಿರುವ ಕುರಿತು ಮಾಹಿತಿ ನೀಡಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ ಜೊತೆ ಮಾತುಕತೆ ನಡೆಸಿದ ನಂತರ ಕಮಲ್ ಪಂತ್ ಹಾಗೂ ಭಾಸ್ಕರ್ ರಾವ್​ ಅವರನ್ನು ನಿವಾಸಕ್ಕೆ ಕರೆಸಿಕೊಂಡು ಗೃಹ ಸಚಿವರ ಸಮ್ಮುಖದಲ್ಲೇ ಸಿಎಂ ಚರ್ಚೆ ನಡೆಸಿದರು. ನಂತರ ಡಿಜಿಪಿ ನೀಲಮಣಿ ರಾಜು ಅವರ ಜೊತೆ ದೂರವಾಣಿ ಮೂಲಕವೇ ಸಂಪರ್ಕಿಸಿ ಇಡೀ ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡರು.

Intro:

ಬೆಂಗಳೂರು: ಪೌರತ್ವ ಕಾಯ್ದೆ ವಿರೋಧ ನಡೆಯುತ್ತಿರುವ ಪ್ರತಿಭಟನೆ ಸಂಬಂಧ ರಾಜ್ಯದ ಕಾನೂನು ಸುವ್ಯವಸ್ಥೆ ಸಂಬಂಧ ಗೃಹ ಸಚಿವರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಮಾಹಿತಿ ನೀಡಿದ್ದಾರೆ.

ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸ ಧವಳಗಿರಿಗೆ ಗುಪ್ತಚರ ಇಲಾಖೆ ಎಡಿಜಿಪಿ ಕಮಲ್ ಪಂತ್ ಹಾಗು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಭೇಟಿ ನೀಡಿದರು. ರಾಜ್ಯ ಹಾಗು ಬೆಂಗಳೂರಿನ ಪರಿಸ್ಥಿತಿ ಕುರಿತು ವಿವರ ನೀಡಿದರು.

ಪೌರತ್ವ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ಗಲಭೆಗೆ ತಿರುಗು ಮಂಗಳೂರಿನಲ್ಲಿ ಇಬ್ಬರು ಪೊಲೀಸರ ಗುಂಡಿನ ಬಲಿಯಾದ ನಂತರದ ಪರಿಸ್ಥಿತಿ, ಮಂಗಳೂರು,ಕಲಬುರಗಿ ಸೇರಿದಂತೆ ಹಲವು ಸೂಕ್ಷ್ಮ ಜಿಲ್ಲೆಗಳಲ್ಲಿನ ಪರಿಸ್ಥಿತಿ ಕುರಿತ ಗುಪ್ತಚರ ಮಾಹಿತಿಯನ್ನು ಮುಖ್ಯಮಂತ್ರಿಗಳಿಗೆ ಕಮಲ್ ಪಂತ್ ನೀಡಿದರು.

ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಬೆಂಗಳೂರಿನಲ್ಲಿ ನಿನ್ನೆ ರಾತ್ರಿಯಿಂದ ಇಂದು ಮಧ್ಯಾಹ್ನದವರೆಗಿನ ಪರಿಸ್ಥಿತಿ, ಕಾನೂನು ಸುವ್ಯವಸ್ಥೆ ಕಾಪಾಡಲು ಕೈಗೊಂಡಿರುವ ಮಾಹಿತಿ, ಸಣ್ಣಪುಟ್ಟ ಘಟನೆ, ಪ್ರತಿಭಟನೆಗಳಂತ ಮಾಹಿತಿ ನೀಡಿ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ ಎನ್ನುವ ಮಾಹಿತಿಯನ್ನು ಸಿಎಂ‌ಗೆ ನೀಡಿದ್ದಾರೆ.

ಗೃಹ ಸಚಿವ ಬಸವರಾಜ ಬೊಮ್ಮಾಯಿ ಜೊತೆ ಮಾತುಕತೆ ನಡೆಸಿದ ನಂತರ ಕಮಲ್ ಪಂತ್ ಹಾಗು, ಭಾಸ್ಕರ್ ರನ್ನು ನಿವಾಸಕ್ಕೆ ಕರೆಸಿಕೊಂಡು ಗೃಹ ಸಚಿವರ ಸಮ್ಮುಖದಲ್ಲೇ ಸಿಎಂ ಚರ್ಚೆ ನಡೆಸಿದರು.ನಂತರ ಡಿಜಿಪಿ ನೀಲಮಣಿ ರಾಜುಜೊತೆ ದೂರವಾಣಿ ಮೂಲಕ ಇಡೀ ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡರು.
Body:.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.