ETV Bharat / city

ಆಶ್ರಯ ವಸತಿ ಯೋಜನೆಯಡಿಯ ಫಲಾನುಭವಿಗಳ ಆಯ್ಕೆಗೆ ವರಮಾನ ಮಿತಿ ಹೆಚ್ಚಳಕ್ಕೆ ಸಿಎಂ ಸೂಚನೆ

ಮುಖ್ಯಮಂತ್ರಿಗಳ ನಿರ್ಧಾರದಿಂದ ಲಕ್ಷಾಂತರ ಮಂದಿ ವಸತಿ ವಂಚಿತ ಬಡವರು ಪ್ರಯೋಜನ ಪಡೆಯಲಿದ್ದಾರೆ. ಹಾಗಾಗಿ, ಸಕಾರಾತ್ಮಕವಾಗಿ ಸಮಸ್ಯೆಗೆ ಸ್ಪಂದಿಸಿದ ಮುಖ್ಯಮಂತ್ರಿಗಳಿಗೆ ಕೃತಜ್ಞತೆ ಸಲ್ಲಿಸುವುದಾಗಿ ಗೃಹ ಸಚಿವರು ತಿಳಿಸಿದ್ದಾರೆ..

CM Notice on Increase Income Limit for Beneficiaries of Shelter Housing Scheme
ಆಶ್ರಯ ವಸತಿ ಯೋಜನೆಯಡಿಯಲ್ಲಿ ಫಲಾನುಭವಿಗಳ ಆಯ್ಕೆಗೆ ವರಮಾನ ಮಿತಿ ಹೆಚ್ಚಳಕ್ಕೆ ಸಿಎಂ ಸೂಚನೆ
author img

By

Published : Jan 28, 2022, 4:54 PM IST

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಆಶ್ರಯ ವಸತಿ ಯೋಜನೆಯಡಿ ಫಲಾನುಭವಿಗಳ ಆಯ್ಕೆಗೆ ಇರುವ ವಾರ್ಷಿಕ ವರಮಾನ ಮಿತಿಯನ್ನು ರೂಪಾಯಿ 1.20 ಲಕ್ಷಕ್ಕೆ ಹೆಚ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ದೇಶಿಸಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಸರ್ಕಾರಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರಮಾನ ಮಿತಿ ಹೆಚ್ಚಿಸುವಂತೆ ವಸತಿ ವಂಚಿತ ಬಡವರು ಮನವಿ ಸಲ್ಲಿಸುತ್ತಾ ಬಂದಿದ್ದು, ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ. ಮುಖ್ಯಮಂತ್ರಿಗಳು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರವು ಬಿಪಿಎಲ್ ಕಾರ್ಡುದಾರರ ವರಮಾನ ಮಿತಿಯನ್ನು ರೂಪಾಯಿ 1.20 ಲಕ್ಷಕ್ಕೆ ಈಗಾಗಲೇ ಹೆಚ್ಚಿಸಿದೆ. ಆದರೆ, ರಾಜ್ಯದಲ್ಲಿ ಆಶ್ರಯ ವಸತಿ ಯೋಜನೆ ಫಾನುಭವಿಗಳಿಗೆ ವರಮಾನ ಮಿತಿ ರೂಪಾಯಿ 32,000 ದಷ್ಟಿದ್ದು, ಹೆಚ್ಚಿನ ಅರ್ಹರು ಯೋಜನೆಯ ಲಾಭ ಪಡೆಯುವುದರಿಂದ ವಂಚಿತರಾಗಿದ್ದಾರೆ.

ಇದನ್ನೂ ಓದಿ: ಕಗ್ಗಂಟಾದ ಹು-ಧಾ ಮೇಯರ್‌ಗಿರಿ.. ಬಿಜೆಪಿ ಪಾಳಯದಲ್ಲಿ ಪಟ್ಟಕ್ಕಾಗಿ ಘಟಾನುಘಟಿಗಳ ಪೈಪೋಟಿ..

ತನ್ನ ಮನವಿಗೆ ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿಗಳು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಹಾಗೂ ವಸತಿ ಖಾತೆಯ ಕಾರ್ಯದರ್ಶಿಗಳಿಗೆ ಸೂಕ್ತ ನಿರ್ದೇಶನ ನೀಡಿದರು ಎಂದರು.

ಮುಖ್ಯಮಂತ್ರಿಗಳ ನಿರ್ಧಾರದಿಂದ ಲಕ್ಷಾಂತರ ಮಂದಿ ವಸತಿ ವಂಚಿತ ಬಡವರು ಪ್ರಯೋಜನ ಪಡೆಯಲಿದ್ದಾರೆ. ಹಾಗಾಗಿ, ಸಕಾರಾತ್ಮಕವಾಗಿ ಸಮಸ್ಯೆಗೆ ಸ್ಪಂದಿಸಿದ ಮುಖ್ಯಮಂತ್ರಿಗಳಿಗೆ ಕೃತಜ್ಞತೆ ಸಲ್ಲಿಸುವುದಾಗಿ ಗೃಹ ಸಚಿವರು ತಿಳಿಸಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.