ಬೆಂಗಳೂರು: ನಗರ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಮುಖ್ಯಮಂತ್ರಿ ಸೂಚನೆ ನೀಡಿರುವ ಹಿನ್ನೆಲೆ, ವಲಯವಾರು ಕರ್ತವ್ಯ ನಿರ್ವಹಿಸುತ್ತಿರುವ ವಿಶೇಷ ಆಯುಕ್ತರು, ಜಂಟಿ ಆಯುಕ್ತರು, ಮುಖ್ಯ ಅಭಿಯಂತರರು ಮುಂಜಾನೆ 6 ಗಂಟೆಯಿಂದಲೇ ಸ್ಥಳ ಪರಿಶೀಲನೆ ನಡೆಸಬೇಕು ಎಂದು ಆಯುಕ್ತ ಬಿ.ಹೆಚ್.ಅನಿಲ್ ಕುಮಾರ್ ಆದೇಶಿಸಿದ್ದಾರೆ.
ಘನತ್ಯಾಜ್ಯ ನಿರ್ವಹಣೆ , ರಸ್ತೆಗುಂಡಿ ಪರಿಶೀಲನೆ, ಉದ್ಯಾನಗಳ ನಿರ್ವಹಣೆ ಸೇರಿದಂತೆ ಪಾಲಿಕೆ ವ್ಯಾಪ್ತಿಗೆ ಬರುವ ಎಲ್ಲವನ್ನೂ ಕಡ್ಡಾಯವಾಗಿ ಬೆಳಗ್ಗೆ 6 ರಿಂದ 9ರವರೆಗೆ ಪರಿಶೀಲಿಸಿ ವರದಿ ನೀಡಬೇಕು ಎಂದು ಸೂಚಿಸಿದ್ದಾರೆ.
ಕಸ ನಿರ್ವಹಣೆ, ರಸ್ತೆ ಸಮಸ್ಯೆಗಳ ದೂರು ಹೆಚ್ಚಾಗಿರುವ ಹಿನ್ನೆಲೆ ಸಿಎಂ ಸಭೆಯಲ್ಲಿ ಈ ಆದೇಶ ಹೊರಡಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ತಕ್ಷಣವೇ ಜಾರಿಗೆ ಬರುವಂತೆ ಪ್ರತಿ ವಲಯದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ವರದಿ ನೀಡುವಂತೆ ಸುತ್ತೋಲೆ ಹೊರಡಿಸಿದ್ದಾರೆ.