ETV Bharat / city

ರಾತ್ರಿ ವೇಳೆ ಎಚ್ಚರಿಕೆಯಿಂದ ವಾಹನ ಚಲಾಯಿಸಿ, ಸುರಕ್ಷತೆಗೆ ಆದ್ಯತೆ ನೀಡಿ: ಸಿಎಂ ಸಲಹೆ

ಬೆಂಗಳೂರಿನಲ್ಲಿ ತಡರಾತ್ರಿ ನಡೆದ ಭೀಕರ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ ಸುರಕ್ಷತೆಗೆ ಆದ್ಯತೆ ನೀಡುವಂತೆ ಜನರಿಗೆ ಮನವಿ ಮಾಡಿದ್ದಾರೆ.

cm-on-car-accident-in-bengaluru
ರಾತ್ರಿ ವೇಳೆ ಎಚ್ಚರಿಕೆಯಿಂದ ವಾಹನ ಚಲಾಯಿಸಿ, ಸುರಕ್ಷತೆಗೆ ಆದ್ಯತೆ ನೀಡಿ: ಸಿಎಂ ಸಲಹೆ
author img

By

Published : Aug 31, 2021, 11:41 AM IST

ಬೆಂಗಳೂರು: ರಾತ್ರಿ ನಡೆದ ಅಪಘಾತ ಪ್ರಕರಣ ಬಹಳ ಆಘಾತಕಾರವಾದ್ದು, 7 ಜನ ದುರ್ಮರಣ ಹೊಂದಿದ್ದಾರೆ. ಪೊಲೀಸರು ಈಗಾಗಲೇ ತನಿಖೆ ಮಾಡುತ್ತಿದ್ದಾರೆ. ಯಾವ ಕಾರಣಕ್ಕೆ ಅಪಘಾತ ನಡೆಯಿತು ಅನ್ನೋದು ತನಿಖೆಯಲ್ಲಿ ಗೊತ್ತಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಆರ್‌.ಟಿ.ನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾತ್ರಿ ಸಮಯದಲ್ಲಿ ಜಾಗರೂಕತೆಯಿಂದ ವಾಹನ ಚಲಾಯಿಸಬೇಕು. ಯಾರೇ ಆದರೂ ಸುರಕ್ಷತಾ ಕ್ರಮಗಳೊಂದಿಗೆ ವಾಹನ ಚಲಾಯಿಸಬೇಕು. ಈ ಮೂಲಕ ಇಂಥಹ ಅವಘಡ ಆಗದ ರೀತಿ ಎಚ್ಚರ ವಹಿಸಬೇಕು ಎಂದು ಸಲಹೆ ನೀಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಗಣೇಶ ಹಬ್ಬ ಆಚರಣೆಗೆ ಅವಕಾಶ ಕುರಿತು ಪ್ರತಿಕ್ರಿಯೆ..

ಸಾರ್ವಜನಿಕವಾಗಿ ಗಣೇಶ ಹಬ್ಬ ಆಚರಣೆಗೆ ಅವಕಾಶ ವಿಚಾರ ಕುರಿತು ಮಾತನಾಡಿದ ಸಿಎಂ, ಸರಿಯಾದ ನಿರ್ಧಾರವನ್ನು ಸರಿಯಾದ ಸಮಯಕ್ಕೆ ತೆಗೆದುಕೊಳ್ಳಬೇಕಾಗುತ್ತದೆ. ನಿನ್ನೆಯ ಸಭೆಯಲ್ಲಿ ಸರಿಯಾದ ಮಾಹಿತಿ ಇರಲಿಲ್ಲ. ಜಿಲ್ಲೆಯ ಡಿಸಿಗಳಿಂದ ಮಾಹಿತಿ ಕೇಳಿದ್ದೇವೆ. ಆರೋಗ್ಯ ಇಲಾಖೆಯೂ ಪರಿಶೀಲನೆ ಮಾಡಲಿದೆ ಎಂದು ತಿಳಿಸಿದರು.

ಯಾವುದೇ ನಿರ್ಣಯ ಆದರೂ ಸರಿಯಾದ ಮಾಹಿತಿಗಳ ಮೇಲೆ ಆಗಬೇಕು. ಹೀಗಾಗಿ ಯಾವ ರೀತಿ ಆಚರಣೆ ಮಾಡಿದರೆ ಒಳ್ಳೆಯದು ಎಂಬುದರ ಬಗ್ಗೆ ತಜ್ಞರಿಂದ ಸಲಹೆ ಕೇಳಿದ್ದೇವೆ. ಅವರು ನಾಲ್ಕೈದು ದಿನ ಸಮಯ ಕೇಳಿದ್ದಾರೆ. ಸೆಪ್ಟೆಂಬರ್ 5ರಂದು ಭಾನುವಾರವಾದರೂ ಸಭೆ ಕರೆದಿದ್ದೇವೆ. ಅಂದೇ ಈ ಬಗ್ಗೆ ಅಂತಿಮ ನಿರ್ಧಾರ ಮಾಡುತ್ತೇವೆ ಎಂದು ಸಿಎಂ ಹೇಳಿದ್ರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಐಷಾರಾಮಿ ಆಡಿ ಕಾರು ಭೀಕರ ಅಪಘಾತ: ಶಾಸಕರ ಪುತ್ರ, ಭಾವಿ ಸೊಸೆ ಸೇರಿ 7 ಮಂದಿ ದುರ್ಮರಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.