ಬೆಂಗಳೂರು: ಪ್ರಧಾನಿ ಮೋದಿ ಅವರೊಂದಿಗೆ ವಿಡಿಯೋ ಕಾನ್ಫ್ರೆನ್ಸ್ಗೂ ಮುನ್ನ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಹಾಗು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪೂರ್ವಭಾವಿ ಸಭೆ ನಡೆಸಿದರು.
ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಮೋದಿ ಅವರ ಜೊತೆಗಿನ ವಿಡಿಯೋ ಕಾನ್ಫ್ರೆನ್ಸ್ನಲ್ಲಿ ಲಾಕ್ಡೌನ್ ಸಡಿಲಿಕೆ ಅಥವಾ ಮುಂದುವರಿಕೆ ಕುರಿತು ರಾಜ್ಯ ಯಾವ ಅಭಿಪ್ರಾಯ ವ್ಯಕ್ತಪಡಿಸಬೇಕು ಎಂಬುದರ ಬಗ್ಗೆ ಚರ್ಚಿಸಲಾಯಿತು.
ಕೆಲ ರಾಜ್ಯಗಳು ಲಾಕ್ಡೌನ್ ಮುಂದುವರೆಸುವ ಕುರಿತು ನಿರ್ಧಾರ ಕೈಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದ ನಿಲುವು ಹೇಗಿರಬೇಕು ಎನ್ನುವ ಕುರಿತು ಸಮಾಲೋಚನೆ ನಡೆಸಲಾಯಿತು. ಇದೀಗ ಪ್ರಧಾನಿ ಮೋದಿ ಆರಂಭಿಸಿರುವ ವಿಡಿಯೋ ಕಾನ್ಫ್ರೆನ್ಸ್ನಲ್ಲಿ ಬಿಎಸ್ವೈ ಭಾಗಿಯಾಗಿದ್ದಾರೆ.