ಬೆಂಗಳೂರು: ವಿಸ್ಟ್ರಾನ್ ಐಫೋನ್ ಕಾರ್ಖಾನೆಯಲ್ಲಿ ಇಂತಹ ಘಟನೆ ನಡೆಯಬಾರದಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ಸಹ ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಇಂತಹ ಘಟನೆಗಳು ಮತ್ತೆ ಮರುಕಳಿಸದಂತೆ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಇಂದು ನಡೆದ ಮಿಷನ್ 2022 ಮಾಧ್ಯಮ ಸಂವಾದ ಕಾರ್ಯಕ್ರಮದ ನಂತರ ಎಸ್ಎಫ್ಐ ಸದಸ್ಯರ ಬಂಧನ ವಿಚಾರದ ಕುರಿತು ಪ್ರತಿಕ್ರಿಯಿಸಿದ ಸಿಎಂ, ಐಫೋನ್ ಕಾರ್ಖಾನೆಗೆ ನಮ್ಮ ಸರ್ಕಾರದ ಬೆಂಬಲ ಇದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ವ್ಯಕ್ತಿ ಯಾರು ಅನ್ನುವ ಬಗ್ಗೆ ಪ್ರತಿಕ್ರಿಯೆ ಕೊಡುವುದಿಲ್ಲ. ಆದರೆ, ಯಾರೇ ಘಟನೆಗೆ ಕಾರಣರಾದರೂ ಅವರ ವಿರುದ್ಧ ಕಾನೂನು ಕ್ರಮ ಕೈಗೊಳುತ್ತೇವೆ ಎಂದು ತಿಳಿಸಿದರು.
ಇನ್ನು ಮುಂದಿನ ಬಜೆಟ್ನಲ್ಲಿ ಬೆಂಗಳೂರು ಮಿಷನ್ ಯೋಜನೆಗೆ ಅನುದಾನ ಮೀಸಲಿಡುತ್ತೇವೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಇದನ್ನೂ ಓದಿ: ಕೋಲಾರದ ವಿಸ್ಟ್ರಾನ್ ಕಂಪನಿಯಲ್ಲಿ ಕಾರ್ಮಿಕರಿಂದ ದಾಂಧಲೆ ಪ್ರಕರಣ: 119 ಜನರ ಬಂಧನ