ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯದೆಲ್ಲೆಡೆ ತೀವ್ರ ಪ್ರತಿಭಟನೆ ನಡೆಯುತ್ತಿದ್ದು, ಕಾನೂನು ಸುವ್ಯವಸ್ಥೆ ಸಂಬಂಧ ಗುಪ್ತಚರ ಇಲಾಖೆ ಅಧಿಕಾರಿಗಳನ್ನು ಕರೆಸಿಕೊಂಡು ಸಿಎಂ ಮಾಹಿತಿ ಪಡೆದುಕೊಂಡರು.
ರಾಜ್ಯದೆಲ್ಲೆಡೆ ನಡೆಯುತ್ತಿರುವ ಪ್ರತಿಭಟನೆ ಸಂಬಂಧ ಕ್ಷಣಕ್ಷಣದ ಮಾಹಿತಿ ಪಡೆಯುತ್ತಿರುವ ಸಿಎಂ ಯಡಿಯೂರಪ್ಪ, ಡಿಜಿಪಿ ನೀಲಮಣಿ ರಾಜುರಿಂದ ದೂರವಾಣಿಯಲ್ಲಿ ಮಾಹಿತಿ ಪಡೆದಿದ್ದಾರೆ.
ಸಿಎಂ ಸೂಚನೆ ಮೇರೆಗೆ ಗುಪ್ತಚರ ಇಲಾಖೆ ಎಡಿಜಿಪಿ ಕಮಲ್ ಪಂಥ್, ಗೃಹ ಕಚೇರಿ ಕೃಷ್ಣಾಗೆ ಭೇಟಿ ನೀಡಿದರು. ಖುದ್ದು ಸಿಎಂ ಬಿಎಸ್ವೈ ಭೇಟಿಯಾಗಿ ಗುಪ್ತಚರ ಇಲಾಖೆ ಕಲೆಹಾಕಿರುವ ಮಾಹಿತಿಯನ್ನು ಸಿಎಂಗೆ ವಿವರಿಸಿದರು. ಮಾಧ್ಯಮಗಳ ಜೊತೆ ಸಿಎಂ ಮಾತನಾಡುವ ಮುನ್ನ ಕಮಲ್ ಪಂಥ್ರಿಂದ ಸಿಎಂ ಸಮಗ್ರ ಮಾಹಿತಿ ಪಡೆದುಕೊಂಡರು.