ಬೆಂಗಳೂರು: ನವೆಂಬರ್ 4 ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಗಳೂರು ಪ್ರವಾಸ ಕೈಗೊಳ್ಳುತ್ತಿದ್ದು ಬಿಜೆಪಿ ವಿಶೇಷ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ನ.4 ರಂದು ಸಂಜೆ 6 ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಡಲಿರುವ ಸಿಎಂ, ಸಂಜೆ 7 ಗಂಟೆಗೆ ಬಜ್ಪೆಯಲ್ಲಿರುವ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಅಂದು ರಾತ್ರಿ ಮಂಗಳೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ.
ನ.5 ರಂದು ರಮಣ ಪೈ ಸಭಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ಬಿಜೆಪಿ ವಿಶೇಷ ಸಭೆ ಉದ್ಘಾಟನೆ ಮಾಡಲಿದ್ದು, 11.30 ಕ್ಕೆ ಖಾಸಗಿ ಹೋಟಲ್ನಲ್ಲಿ ಆಯೋಜಿಸಿರುವ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 2.30 ರಿಂದ ಮತ್ತೆ ವಿಶೇಷ ಸಭೆಯಲ್ಲಿ ಭಾಗಿಯಾಗಲಿದ್ದು, ರಾತ್ರಿ 7.35 ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು, 8.40 ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ.