ಬೆಂಗಳೂರು: ಬಜೆಟ್ ಮಂಡನೆ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಳೆ ದೆಹಲಿಗೆ ತೆರಳಲಿದ್ದು,ವರಿಷ್ಠರನ್ನು ಭೇಟಿ ಮಾಡಿ ಹಿಂದಿರುಗಲಿದ್ದಾರೆ.
ನಾಳೆ ಬೆಳಗ್ಗೆ 10.30ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳುತ್ತಿರುವ ಸಿಎಂ ಬಿಎಸ್ವೈ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮಗಳ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಮದುವೆ ಕಾರ್ಯಕ್ರಮದ ನಂತರ ಕೇಂದ್ರದ ಕೆಲ ಸಚಿವರನ್ನ ಭೇಟಿ ಮಾಡಿ, ಜಿಎಸ್ಟಿ ಬಾಕಿ ಹಣ ಬಿಡುಗಡೆ ಸೇರಿದಂತೆ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ನೀಡುವಂತೆ ಮನವಿ ಮಾಡಲಿದ್ದಾರೆ.
ಸಾಧ್ಯವಾದರೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನೂ ಭೇಟಿ ಮಾಡಲಿದ್ದು,ಮಾತುಕತೆಗೆ ಸಮಯ ಸಿಕ್ಕಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಮಾತುಕತೆ ನಡೆಸಿ, ನಾಳೆ ರಾತ್ರಿಯೇ ಬೆಂಗಳೂರಿಗೆ ವಾಪಸಾಗಲಿದ್ದಾರೆ.