ETV Bharat / city

ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ಕುರಿತು ಇಂದು ಸಿಎಂ ಘೋಷಣೆ?

author img

By

Published : Jan 6, 2020, 12:49 PM IST

ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಹೆಚ್ಚಿಸುವ ವಿಚಾರ ಕುರಿತು ಇಂದು ವಾಲ್ಮೀಕಿ ಸಮುದಾಯದ ಸ್ವಾಮೀಜಿಗಳು ಹಾಗೂ ಶಾಸಕರ ಜತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮಹತ್ವದ ಸಭೆ ನಡೆಸಲಿದ್ದಾರೆ.‌

bsy
ಬಿ.ಎಸ್ ಯಡಿಯೂರಪ್ಪ

ಬೆಂಗಳೂರು: ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಹೆಚ್ಚಿಸುವ ವಿಚಾರ ಕುರಿತು ಇಂದು ವಾಲ್ಮೀಕಿ ಸಮುದಾಯದ ಸ್ವಾಮೀಜಿಗಳು ಹಾಗೂ ಶಾಸಕರ ಜೊತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮಹತ್ವದ ಸಭೆ ನಡೆಸಲಿದ್ದಾರೆ.‌

ಇಂದು ಸಂಜೆ 4 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯಲಿರುವ ಸಭೆಯಲ್ಲಿ ಪ್ರಸನ್ನಾನಂದ ಸ್ವಾಮೀಜಿ, ಸಚಿವ ಶ್ರೀರಾಮುಲು, ರಮೇಶ್ ಜಾರಕಿಹೊಳಿ ಸೇರಿ ಸಮುದಾಯದ ಶ್ರೀಗಳು, ವಾಲ್ಮೀಕಿ ಸಮುದಾಯದ ಶಾಸಕರು, ಸಚಿವರು, ಸಂಸದರು ಹಾಗೂ ಪರಿಷತ್ ಸದಸ್ಯರು ಭಾಗಿಯಾಗಲಿದ್ದಾರೆ.

ಸಭೆಯಲ್ಲಿ ಮೀಸಲಾತಿ ಹೆಚ್ಚಿಸುವ ಬಗ್ಗೆ ಚರ್ಚೆ ನಡೆಯಲಿದೆ. ಶೇ.3%ರಷ್ಟು ಇರುವ ಮೀಸಲಾತಿಯನ್ನು ‌ಶೇ 7.5 ಕ್ಕೆ ಹೆಚ್ಚಿಸುವ ಬಗ್ಗೆ ವಾಲ್ಮೀಕಿ ಸಮುದಾಯ ಸರ್ಕಾರಕ್ಕೆ ಒತ್ತಾಯ ಮಾಡಿದೆ. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಕೊಡುವಂತೆ ಪಟ್ಟು ಹಿಡಿದಿದೆ. ಹೀಗಾಗಿ ಮೀಸಲಾತಿ ಹೆಚ್ಚಿಸುವ ಬಗ್ಗೆ ಸ್ವಾಮೀಜಿಗಳು ಹಾಗೂ ಶಾಸಕರ ಜೊತೆ ಸಿಎಂ ಚರ್ಚೆ ನಡೆಸಲಿದ್ದಾರೆ. ಚರ್ಚೆ ಬಳಿಕ ಮೀಸಲಾತಿ ಹೆಚ್ಚಿಸುವ ಸಂಬಂಧ ಸಿಎಂ ನಿರ್ಧಾರ ಪ್ರಕಟಿಸಲಿದ್ದಾರೆ ಎನ್ನಲಾಗಿದೆ.

ಮೀಸಲಾತಿ ಜತೆ ಡಿಸಿಎಂ ಹುದ್ದೆ ಬಗ್ಗೆ ಘೋಷಣೆ?: ವಾಲ್ಮೀಕಿ ಸಮುದಾಯಕ್ಕೆ ಡಿಸಿಎಂ ಹುದ್ದೆ ನೀಡುವ ವಿಚಾರ ಸಂಬಂಧವೂ ಇಂದು ಚರ್ಚೆ ನಡೆಯುವ ಸಾಧ್ಯತೆ ಇದೆ. ಈಗಾಗಲೇ ವಾಲ್ಮೀಕಿ ಸಮುದಾಯಕ್ಕೆ‌ ಮೀಸಲಾತಿ ಜೊತೆಗೆ ಒಂದು ಡಿಸಿಎಂ ಹುದ್ದೆ ನೀಡಬೇಕು, ಅದು ಯಾರಿಗಾದರೂ ಆಗಲಿ, ನಮ್ಮ ಸಮುದಾಯಕ್ಕೆ ಒಂದು ಡಿಸಿಎಂ ಹುದ್ದೆ ಕೊಡಬೇಕು ಎಂದು ಸಿಎಂ ಬಳಿ ವಾಲ್ಮೀಕಿ ಸಮುದಾಯ ಪಟ್ಟು ಹಿಡಿದಿದೆ. ಸದ್ಯಕ್ಕೆ ಡಿಸಿಎಂ ರೇಸ್​ನಲ್ಲಿ ಇಬ್ಬರು ನಾಯಕರಿದ್ದಾರೆ. ವಾಲ್ಮೀಕಿ ಸಮುದಾಯದಿಂದ ಸಚಿವ ಶ್ರೀರಾಮುಲು ಹಾಗೂ ರಮೇಶ್ ಜಾರಕಿಹೊಳಿ ಇಬ್ಬರೂ ಕೂಡ ಡಿಸಿಎಂ ಸ್ಥಾನದ ಪ್ರಬಲ ಆಕಾಂಕ್ಷಿಗಳು. ಇದೀಗ ಇಬ್ಬರಲ್ಲಿ ಒಬ್ಬರಿಗೆ ಡಿಸಿಎಂ ಹುದ್ದೆ ನೀಡಲೇಬೇಕು ಎಂದು ಸರ್ಕಾರಕ್ಕೆ ವಾಲ್ಮೀಕಿ ಸಮುದಾಯ ಪಟ್ಟುಹಿಡಿದಿದೆ.

Intro:

ಬೆಂಗಳೂರು:ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಹೆಚ್ಚಿಸುವ ವಿಚಾರ ಸಂಬಂಧ ಇಂದು ವಾಲ್ಮೀಕಿ ಸಮುದಾಯದ ಸ್ವಾಮೀಜಿಗಳು ಹಾಗೂ ಶಾಸಕರು ಜೊತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಹತ್ವದ ಸಭೆ ನಡೆಸಲಿದ್ದಾರೆ‌

ಇಂದು ಸಂಜೆ 4 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯಲಿರುವ ಸಭೆಯಲ್ಲಿ ಪ್ರಸನ್ನಾನಂದ ಸ್ವಾಮೀಜಿ,ಸಚಿವ ಶ್ರೀರಾಮುಲು, ರಮೇಶ್ ಜಾರಕಿಹೊಳಿ
ಸೇರಿದಂತೆ ಸಮುದಾಯದ ಶ್ರೀಗಳು, ವಾಲ್ಮೀಕಿ ಸಮುದಾಯದ ಶಾಸಕರು, ಸಚಿವರು, ಸಂಸದರು ಹಾಗೂ ಪರಿಷತ್ ಸದಸ್ಯರು ಭಾಗಿಯಾಗಲಿದ್ದಾರೆ.

ಸಭೆಯಲ್ಲಿ ಮೀಸಲಾತಿ ಹೆಚ್ಚಿಸುವ ಬಗ್ಗೆ ಚರ್ಚೆ ನಡೆಯಲಿದೆ.
ಶೇ.3 ರಷ್ಟು ಇರುವ ಮೀಸಲಾತಿಯನ್ನು ‌ಶೇ 7.5 ಕ್ಕೆ ಹೆಚ್ಚಿಸುವ ಬಗ್ಗೆ ವಾಲ್ಮೀಕಿ ಸಮುದಾಯದಿಂದ ಸರ್ಕಾರಕ್ಕೆ ಒತ್ತಾಯ ಮಾಡಲಾಗಿದೆ. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಕೊಡುವಂತೆ ಪಟ್ಟು ಹಿಡಿದಿದೆ.ಹೀಗಾಗಿ ಮೀಸಲಾತಿ ಹೆಚ್ಚಿಸುವ ಬಗ್ಗೆ ಸ್ವಾಮೀಜಿಗಳು ಹಾಗೂ ಶಾಸಕರ ಜೊತೆ ಸಿಎಂ ಚರ್ಚೆ ನಡೆಸಲಿದ್ದು, ಚರ್ಚೆ ಬಳಿಕ ಮೀಸಲಾತಿ ಹೆಚ್ಚಿಸುವ ಸಂಬಂಧ ಸಿಎಂ ಬಿಎಸ್ವೈ ನಿರ್ಧಾರ ಪ್ರಕಟಿಸಲಿದ್ದಾರೆ ಎನ್ನಲಾಗಿದೆ.

ಮೀಸಲಾತಿ ಜೊತೆಗೆ ಡಿಸಿಎಂ ಹುದ್ದೆ ಬಗ್ಗೆ ಘೋಷಣೆ ಆಗುತ್ತಾ:

ವಾಲ್ಮೀಕಿ ಸಮುದಾಯಕ್ಕೆ ಡಿಸಿಎಂ ಹುದ್ದೆ ನೀಡುವ ವಿಚಾರ ಸಂಬಂಧವೂ ಇಂದು ಚರ್ಚೆ ನಡೆಯುವ ಸಾಧ್ಯತೆ ಇದೆ. ವಾಲ್ಮೀಕಿ ಸಮುದಾಯದ ಸ್ವಾಮೀಜಿ ಹಾಗೂ ಶಾಸಕರು, ಸಂಸದರು, ಪರಿಷತ್ ಸದಸ್ಯರ ಜೊತೆ
ಇಂದು ಸಿಎಂ ಯಡಿಯೂರಪ್ಪ ಚರ್ಚೆ ನಡೆಸಲಿದ್ದಾರೆ.

ಈಗಾಗಲೇ ವಾಲ್ಮೀಕಿ ಸಮುದಾಯಕ್ಕೆ‌ ಮೀಸಲಾತಿ ಜೊತೆಗೆ ಒಂದು ಡಿಸಿಎಂ ಹುದ್ದೆ ನೀಡಬೇಕು ಅದು ಯಾರಿಗಾದರೂ ಆಗಲಿ, ನಮ್ಮ ಸಮುದಾಯಕ್ಕೆ ಒಂದು ಡಿಸಿಎಂ ಹುದ್ದೆ ಕೊಡಬೇಕು ಎಂದು ಸಿಎಂ ಬಳಿ ವಾಲ್ಮೀಕಿ ಸಮುದಾಯ ಪಟ್ಟು ಹಿಡಿದಿದೆ.ಸದ್ಯ ಡಿಸಿಎಂ ರೇಸ್ ನಲ್ಲಿ ಇಬ್ಬರು ನಾಯಕರಿದ್ದಾರೆ.
ವಾಲ್ಮೀಕಿ ಸಮುದಾಯದಿಂದ ಸಚಿವ ಶ್ರೀರಾಮುಲು ಹಾಗೂ ರಮೇಶ್ ಜಾರಕಿಹೊಳಿ ಇಬ್ಬರು ಕೂಡ ಡಿಸಿಎಂ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಇದೀಗ ಇಬ್ಬರಲ್ಲಿ ಒಬ್ಬರಿಗೆ ಡಿಸಿಎಂ ಹುದ್ದೆ ನೀಡಲೇಬೇಕು ಎಂದು ಸರ್ಕಾರಕ್ಕೆ ವಾಲ್ಮೀಕಿ ಸಮುದಾಯ ಪಟ್ಟುಹಿಡಿದಿದೆ. ಇದೀಗ ವಾಲ್ಮೀಕಿ ಸಮುದಾಯದ ಬೇಡಿಕೆಯನ್ನು ಸರ್ಕಾರ ಈಡೇರಿಸುತ್ತಾ?
ಮೀಸಲಾತಿ ಹೆಚ್ಚಿಸೋದರೆ ಜೊತೆ ಡಿಸಿಎಂ ಹುದ್ದೆ ನೀಡುವ ಬಗ್ಗೆ ಸಿಎಂ ನಿರ್ಧಾರ ಕೈಗೊಳ್ತಾರಾ ಎನ್ನುವುದನ್ನು ಸಂಜೆವರೆಗೂ ಕಾದು ನೋಡಬೇಕಿದೆ.Body:.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.