ಬೆಂಗಳೂರು: ಬೈಕ್ ಅಪಘಾತದಿಂದ ಚಿಂತಾಜನಕ ಸ್ಥಿತಿಯಲ್ಲಿದ್ದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಮೆದುಳು ನಿಷ್ಕ್ರಿಯವಾಗಿ ಸಾವನ್ನಪ್ಪಿರುವುದಾಗಿ ವೈದ್ಯರು ಖಚಿತಪಡಿಸಿದ್ದಾರೆ.
ವಿಜಯ್ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಂಚಾರಿ ವಿಜಯ್ ರಂಗಭೂಮಿ, ಸಿನಿಮಾ ರಂಗಗಳೆರಡರಲ್ಲೂ ತಮ್ಮ ಮನೋಜ್ಞ ಅಭಿನಯದ ಮೂಲಕ ಗಮನ ಸೆಳೆದಿದ್ದರು.
-
ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ನಿಧನಕ್ಕೆ ಮುಖ್ಯಮಂತ್ರಿ @BSYBJP ರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
— CM of Karnataka (@CMofKarnataka) June 14, 2021 " class="align-text-top noRightClick twitterSection" data="
ಸಂಚಾರಿ ವಿಜಯ್ ಅವರು ರಂಗಭೂಮಿ, ಸಿನೆಮಾ ರಂಗಗಳೆರಡರಲ್ಲೂ ತಮ್ಮ ಮನೋಜ್ಞ ಅಭಿನಯದ ಮೂಲಕ ಗಮನ ಸೆಳೆದಿದ್ದರು. ಅವರ ಅಕಾಲಿಕ ನಿಧನದಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವುಂಟಾಗಿದೆ. (1/2)
">ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ನಿಧನಕ್ಕೆ ಮುಖ್ಯಮಂತ್ರಿ @BSYBJP ರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
— CM of Karnataka (@CMofKarnataka) June 14, 2021
ಸಂಚಾರಿ ವಿಜಯ್ ಅವರು ರಂಗಭೂಮಿ, ಸಿನೆಮಾ ರಂಗಗಳೆರಡರಲ್ಲೂ ತಮ್ಮ ಮನೋಜ್ಞ ಅಭಿನಯದ ಮೂಲಕ ಗಮನ ಸೆಳೆದಿದ್ದರು. ಅವರ ಅಕಾಲಿಕ ನಿಧನದಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವುಂಟಾಗಿದೆ. (1/2)ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ನಿಧನಕ್ಕೆ ಮುಖ್ಯಮಂತ್ರಿ @BSYBJP ರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
— CM of Karnataka (@CMofKarnataka) June 14, 2021
ಸಂಚಾರಿ ವಿಜಯ್ ಅವರು ರಂಗಭೂಮಿ, ಸಿನೆಮಾ ರಂಗಗಳೆರಡರಲ್ಲೂ ತಮ್ಮ ಮನೋಜ್ಞ ಅಭಿನಯದ ಮೂಲಕ ಗಮನ ಸೆಳೆದಿದ್ದರು. ಅವರ ಅಕಾಲಿಕ ನಿಧನದಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವುಂಟಾಗಿದೆ. (1/2)
ಅವರ ಅಕಾಲಿಕ ನಿಧನದಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವುಂಟಾಗಿದೆ. ಭಗವಂತನು ಮೃತರ ಆತ್ಮಕ್ಕೆ ಶಾಂತಿಯನ್ನು ನೀಡಲಿ, ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. ಇನ್ನು ಡಿಸಿಎಂಗಳಾದ ಗೋವಿಂದ ಕಾರಜೋಳ, ಅಶ್ವತ್ಥ ನಾರಾಯಣ್, ಲಕ್ಷ್ಮಣ ಸವದಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಸಂಪುಟ ಸಹೋದ್ಯೋಗಿಗಳು, ಬಿಜೆಪಿ ನಾಯಕರು ಸಂಚಾರಿ ವಿಜಯ್ ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ.
ಇದನ್ನೂ ಓದಿ: ಸಂಚಾರಿ ವಿಜಯ್ ಇನ್ನಿಲ್ಲ... ಸಾವು ಖಚಿತ ಪಡಿಸಿದ ವೈದ್ಯರು!