ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ನಾಳೆ ಕರ್ನಾಟಕ ಬಂದ್ಗೆ ಕರೆ ನೀಡಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಂದ್ ಮಾಡದಂತೆ ಮನವಿ ಮಾಡಿದ್ದಾರೆ.
ಬೆಂಗಳೂರಲ್ಲಿ ಈ ಕುರಿತು ಮಾತನಾಡಿದ ಅವರು, ಬಂದ್ ಮಾಡಿ ಜನರಿಗೆ ತೊಂದರೆ ಕೊಡುವ ಕೆಲಸ ಬೇಡ. ವಾಟಾಳ್ ನಾಗರಾಜ್ ಬಂದ್ ಮಾಡುವ ಅವಶ್ಯಕತೆ ಇಲ್ಲ, ನಾಳೆ ಬಂದ್ಗೆ ಯಾವುದೇ ರೀತಿಯ ಅವಕಾಶ ಕೊಡಬೇಡಿ ಎಂದು ಮನವಿ ಮಾಡಿದರು.
ಓದಿ: ಬಿಎಸ್ವೈ ಪರಭಾಷೆ ಏಜೆಂಟ್, ಡಿ.5ಕ್ಕೆ ಸಂಪೂರ್ಣ ಬಂದ್ ಶತಃಸಿದ್ಧ : ವಾಟಾಳ್ ನಾಗರಾಜ್ ಗುಡುಗು
ಇನ್ನು ಕನ್ನಡ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ನಾವು ಹೆಚ್ಚಿನ ಆದ್ಯತೆ ನೀಡುತ್ತೇವೆ. ಹಾಗಾಗಿ ಬಂದ್ ಮಾಡಬೇಡಿ ಎಂದು ಕನ್ನಡ ಪರ ಸಂಘಟನೆಗಳಿಗೆ ಮನವಿ ಮಾಡುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ.
ಓದಿ: ನಾಳೆ ಕರ್ನಾಟಕ ಬಂದ್: ಬೆಂಗಳೂರಲ್ಲಿ ಹದ್ದಿನ ಕಣ್ಣಿಡಲು ಪೊಲೀಸರಿಗೆ ಪಂತ್ ಸೂಚನೆ