ಬೆಂಗಳೂರು: ವಿಧಾನ ಪರಿಷತ್ ಚುನಾವಣೆ (Karnataka Legislative Council Election) ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನೀತಿ ಸಂಹಿತೆ (Code of Conduct) ಜಾರಿಯಾಗಿದೆ. ಹೀಗಾಗಿ ನವೆಂಬರ್ 14ರಿಂದ ನಡೆಯಬೇಕಿದ್ದ 'ಸಹಕಾರ ಸಪ್ತಾಹ' (Sahakara Saptaha) ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.
ಸಹಕಾರಿ ಸಪ್ತಾಹವನ್ನು ಪ್ರತಿವರ್ಷ ನವೆಂಬರ್ 14ರಂದು ಹಮ್ಮಿಕೊಳ್ಳಲಾಗುತ್ತಿತ್ತು. ರಾಜ್ಯದ ನಾನಾ ಜಿಲ್ಲೆಗಳಲ್ಲಿ 7 ದಿನ ಸಹಕಾರ ಸಪ್ತಾಹ ಹಮ್ಮಿಕೊಳ್ಳುವುದರ ಜೊತೆಗೆ ಸಹಕಾರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಮಹನೀಯರಿಗೆ ಮುಖ್ಯಮಂತ್ರಿಗಳು 'ಸಹಕಾರ ರತ್ನ ಪ್ರಶಸ್ತಿ' ನೀಡಿ ಗೌರವಿಸುತ್ತಿದ್ದರು. ಈ ವರ್ಷ ಕೂಡ ನವೆಂಬರ್ 14 ರಂದು ಬೆಂಗಳೂರಲ್ಲಿ, ನಂತರ ನಾನಾ ಜಿಲ್ಲೆಗಳಲ್ಲಿ ಸಹಕಾರ ಸಪ್ತಾಹ ಹಮ್ಮಿಕೊಳ್ಳಲು ನಿರ್ಧರಿಸಲಾಗಿತ್ತು. ಆದರೆ ಸ್ಥಳೀಯ ಸಂಸ್ಥೆಗಳಿಂದ 25 ವಿಧಾನ ಪರಿಷತ್ ಸ್ಥಾನಗಳಿಗೆ ಡಿ.10ರಂದು ಚುನಾವಣೆ ನಡೆಯುವುದರಿಂದ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಾಗಿದೆ. ಹೀಗಾಗಿ ನವೆಂಬರ್ 14ರಿಂದ ನಡೆಯಬೇಕಿದ್ದ ಸಹಕಾರ ಸಪ್ತಾಹ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.
ಮುಂದಿನ ದಿನಾಂಕವನ್ನು ನಂತರದಲ್ಲಿ ತಿಳಿಸಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.