ಬೆಂಗಳೂರು : ರಾಜ್ಯದ ಕೆಲ ಜಿಲ್ಲೆಗಳಲ್ಲಿ ಚಳಿ ಹೊಡೆತಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಇತ್ತ ಮಲೆನಾಡು, ಉತ್ತರ ಕರ್ನಾಟಕ ಭಾಗದಲ್ಲಿ ದಟ್ಟ ಮಂಜು ಕವಿದ ವಾತಾವರಣ ಉಂಟಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
Karnataka weather report : ರಾಜ್ಯದ ಉತ್ತರ ಒಳನಾಡಿನ ಬೀದರ್, ವಿಜಯಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಚಳಿಯು ಸಾಮಾನ್ಯಕ್ಕಿಂತ 5ರಿಂದ 6 ಡಿಗ್ರಿ ಸೆಲ್ಸಿಯಸ್ ಕಡಿಮೆ ದಾಖಲಾಗಿದೆ. ಕೊಡಗು, ಶಿವಮೊಗ್ಗ, ಬೆಂಗಳೂರು, ಮೈಸೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ ಜಿಲ್ಲೆಗಳಲ್ಲಿ ವಿಪರೀತ ಚಳಿ ಉಂಟಾಗಿದೆ.
ಕೆಲವೆಡೆ 15ರಿಂದ 16 ಡಿಗ್ರಿ ಸೆಲ್ಸಿಯಸ್ಗೆ ಬಂದಿದೆ. ಹೀಗಾಗಿ ಜನರು ಸ್ವೆಟರ್, ವುಲನ್ ಟೋಪಿಗಳು ಸೇರಿದಂತೆ ಬೆಚ್ಚಗಿನ ಉಡುಪುಗಳ ಮೊರೆ ಹೋಗಿದ್ದಾರೆ. ಮಳೆ ಅಬ್ಬರದ ನಂತರ ಕರ್ನಾಟಕದಲ್ಲಿ ಶೀತಗಾಳಿ ಶುರುವಾಗಿದೆ.
ಇನ್ನೂ 3 ದಿನ ಚಳಿ : ಮುಖ್ಯವಾಗಿ ಉತ್ತರ ಕರ್ನಾಟಕ ಭಾಗದ ಧಾರವಾಡ, ಹುಬ್ಬಳ್ಳಿ, ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ, ವಿಜಯಪುರ, ಬಾಗಲಕೋಟೆಯಲ್ಲಿ ಇನ್ನೂ 3 ದಿನ ಚಳಿ ಹೆಚ್ಚಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.