ETV Bharat / city

ಆಹಾರ ಸಾಮಗ್ರಿ ಸಂಗ್ರಹಿಸಿಟ್ಟಿದ್ದ ಗೋದಾಮಿಗೆ ಡಿಕೆಶಿ, ಸಿದ್ದು ಭೇಟಿ - ಬಿಜೆಪಿಯಿಂದ ಅಕ್ರಮ ದಾಸ್ತಾನು ಸಂಗ್ರಹ

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮತ್ತು ರಾಜ್ಯ ಕಾಂಗ್ರೆಸ್ ಹಿರಿಯ ನಾಯಕರು ಬಿಜೆಪಿ ಸಂಗ್ರಹಿಸಿಟ್ಟಿದ್ದ ಆಹಾರ ಸಾಮಗ್ರಿ ಗೋದಾಮಿಗೆ ಭೇಟಿ ನೀಡಿದರು.

Collection of inventory illegally
ಡಿ.ಕೆ.ಶಿವಕುಮಾರ್
author img

By

Published : May 22, 2020, 3:01 PM IST

ಬೆಂಗಳೂರು: ಕೆ.ಆರ್.ಪುರದಲ್ಲಿ ಬಿಜೆಪಿ ನಾಯಕರು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದಾರೆ ಎನ್ನಲಾದ ಆಹಾರ ಸಾಮಗ್ರಿ ಗೋದಾಮಿನ ಮೇಲೆ ಕಾಂಗ್ರೆಸ್ ನಾಯಕರು ದಾಳಿ ನಡೆಸಿದ ಬೆನ್ನಲ್ಲೇ ಇಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಭೇಟಿ ನೀಡಿದರು.

ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ಬಡವರಿಗೆ ವಿತರಿಸಲು ಸರ್ಕಾರಕ್ಕೆ ನೀಡಲಾಗಿದ್ದ ಆಹಾರ ಸಾಮಗ್ರಿಗಳನ್ನು ಅಕ್ರಮವಾಗಿ ದಾಸ್ತಾನು ಮಾಡಿದ್ದ ಗೋದಾಮಿನ ಮೇಲೆ ನಿನ್ನೆ ರಾತ್ರಿ ಕಾಂಗ್ರೆಸ್ ನಾಯಕರು ದಾಳಿ ನಡೆಸಿದ್ದರು.

ಸಂಸ್ಥೆ ಅಂಟಿಸಿದ್ದ ಸ್ಟಿಕ್ಕರ್​​ಗಳನ್ನು ಕಿತ್ತು ಬಿಜೆಪಿಯಿಂದ ಬಡವರಿಗೆ ಹಂಚಲು ಸಿದ್ಧತೆ ನಡೆಸಲಾಗಿತ್ತು ಎನ್ನಲಾಗಿದೆ. ಅದಕ್ಕಾಗಿ ಕಾಂಗ್ರೆಸ್​ ಕಾರ್ಯಕರ್ತರು ರಾತ್ರಿಯಿಡೀ ಗೋದಾಮಿನ ಸುತ್ತಲೂ ಕಾವಲಿದ್ದರು. ಸ್ಥಳೀಯ ಬಿಜೆಪಿ ನಾಯಕರ ಕುಮ್ಮಕ್ಕಿನಿಂದ ಅನುಯಾಯಿಗಳು ಆಹಾರ ಸಾಮಗ್ರಿಗಳ ಕಿಟ್ ಮೇಲೆ ಪಕ್ಷದ ಲೇಬಲ್ ಅಂಟಿಸಲು​ ಪ್ರಯತ್ನಿಸಿದ್ದಾರೆ ಎಂದು ಕಾಂಗ್ರೆಸ್​​ ಆರೋಪಿಸಿದೆ. ಈ ಕುರಿತು ರಾಜ್ಯ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್​​​ ನಾಯಕರು ದೂರು ನೀಡಿದ್ದಾರೆ.

ಡಿ.ಕೆ.ಶಿವಕುಮಾರ್

ಡಿ.ಕೆ.ಶಿವಕುಮಾರ್ ಮಾತನಾಡಿ, ಬಿಜೆಪಿ ನಾಯಕರು ನಡೆಸುತ್ತಿರುವ ಅಕ್ರಮದಲ್ಲಿ ಭಾಗಿಯಾದವರನ್ನು ಕೂಡಲೇ ಬಂಧಿಸಬೇಕು ಹಾಗೂ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.