ETV Bharat / city

ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಮಾ.12ರಿಂದ ಸ್ಪರ್ಧಾತ್ಮಕ ಪರೀಕ್ಷೆ: ನಾಳೆಯಿಂದ ಪ್ರವೇಶ ಪತ್ರ ಲಭ್ಯ

ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಮಾರ್ಚ್ 12ರಿಂದ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ಪ್ರವೇಶ ಪತ್ರವನ್ನು ಪರೀಕ್ಷಾರ್ಥಿಗಳು ಫೆ.28ರಿಂದ http://kea.kar.nic.in ಜಾಲತಾಣದಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದು.

Exam for Assistant Professor post
ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಪರೀಕ್ಷೆ
author img

By

Published : Feb 27, 2022, 9:19 AM IST

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅಗತ್ಯವಿರುವ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಹಾಕಿರುವ ಅಭ್ಯರ್ಥಿಗಳು ಮಾರ್ಚ್ 12ರಿಂದ ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಗೆ ಅಗತ್ಯವಿರುವ ಪ್ರವೇಶ ಪತ್ರವನ್ನು ಫೆ.28ರಿಂದ http://kea.kar.nic.in ಜಾಲತಾಣದಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ತಿಳಿಸಿದ್ದಾರೆ.

ಪರೀಕ್ಷೆಯು ಮಾರ್ಚ್ 12 ರಿಂದ 16ರವರೆಗೆ ನಡೆಯಲಿದೆ. ಈ ಬಗ್ಗೆ ಶನಿವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಇತ್ತೀಚಿನ 2 ಭಾವಚಿತ್ರ, ಪ್ರವೇಶಪತ್ರ, ಗುರುತಿನ ಚೀಟಿಗಳನ್ನು ಕಡ್ಡಾಯವಾಗಿ ತರಬೇಕು ಎಂದು ತಿಳಿಸಿದ್ದಾರೆ.

ಪರೀಕ್ಷಾ ಕೊಠಡಿಗೆ ಕೆಲ ವಸ್ತುಗಳು ನಿಷಿದ್ಧ: ಪರೀಕ್ಷಾ ಕೊಠಡಿಗೆ ಅಭ್ಯರ್ಥಿಗಳು ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳು (ಮೊಬೈಲ್, ಪೆನ್ ಡ್ರೈವ್, ಇಯರ್ ಫೋನ್, ಮೈಕ್ರೋಫೋನ್, ಬ್ಲೂಟೂತ್, ಕೈ ಗಡಿಯಾರ/ವಾಚ್​), ಆಹಾರ ಪದಾರ್ಥಗಳು, ಸ್ಟೇಷನರಿ ವಸ್ತುಗಳು (ಪೆನ್ಸಿಲ್, ಕಾಗದ, ಎರೇಸರ್, ಇಂಚುಪಟ್ಟಿ, ಜಾಮಿಟ್ರಿ ಪೆಟ್ಟಿಗೆ, ಕ್ಯಾಲ್ಕುಲೇಟರ್, ಲಾಗ್ ಟೇಬಲ್) ಮತ್ತು ವೈಯಕ್ತಿಕ ವಸ್ತುಗಳನ್ನು (ವ್ಯಾಲೆಟ್, ಅಲಂಕಾರಿಕ ಕನ್ನಡಕ, ಬೆಲ್ಟ್, ಟೋಪಿ, ಕ್ಯಾಮರಾ, ಆಭರಣಗಳು) ತರುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

ನಿಗದಿತ ವಸ್ತ್ರಸಂಹಿತೆ ಕಡ್ಡಾಯ: ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಸ್ತ್ರಸಂಹಿತೆಯನ್ನೂ ನಿಗದಿಪಡಿಸಿದ್ದು, ನಿಷೇಧಿತ ವಸ್ತುಗಳ ಪಟ್ಟಿಯನ್ನೂ ತಿಳಿಸಲಾಗಿದೆ. ಪರೀಕ್ಷೆ ಬರೆಯಲಿರುವ ಪುರುಷ ಅಭ್ಯರ್ಥಿಗಳು ಕೋವಿಡ್ ಮಾರ್ಗದರ್ಶಿ ಸೂತ್ರಗಳ ಹಿನ್ನೆಲೆಯಲ್ಲಿ ಅರೆ ಪಾರದರ್ಶಕ ಸರ್ಜಿಕಲ್ ಮಾಸ್ಕ್ (ಎನ್-95 ಮತ್ತು ಇತರೆ ಬಗೆಯ ಮಾಸ್ಕ್ ನಿಷಿದ್ಧ), ಅರೆದೋಳಿನ ಅಂಗಿ ಮತ್ತು ಸಾದಾ ಪ್ಯಾಂಟ್ ಹಾಗೂ ಚಪ್ಪಲಿಗಳನ್ನು ಕಡ್ಡಾಯಗೊಳಿಸಲಾಗಿದೆ. ಹಾಗೆಯೇ, ಮಹಿಳಾ ಅಭ್ಯರ್ಥಿಗಳಿಗೆ ಸರ್ಜಿಕಲ್ ಮಾಸ್ಕ್, ಅರೆದೋಳಿನ ಉಡುಪುಗಳನ್ನು ಸೂಚಿಸಲಾಗಿದೆ.

ಇದನ್ನೂ ಓದಿ: ಉದ್ಯೋಗಿನಿ, ಆಧಾರ ಯೋಜನೆಗಳಲ್ಲಿ ನಿಗದಿಪಡಿಸಿದ ಭೌತಿಕ ಹಾಗೂ ಆರ್ಥಿಕ ಗುರಿ ಎಷ್ಟು?

ಆಲಂಕಾರಿಕ ಉಡುಪುಗಳಿಗಿಲ್ಲ ಅವಕಾಶ: ಪುರುಷರಾಗಲಿ, ಮಹಿಳೆಯರಾಗಲಿ ತುಂಬುದೋಳಿನ ಉಡುಪು, ಶೂ, ಆಭರಣ (ಪದಕ, ಮೂಗುಬೊಟ್ಟು, ಕಿವಿಯೋಲೆ, ನೆಕ್ಲೇಸ್, ಬ್ರೇಸ್ಲೆಟ್) ಮತ್ತು ಆಲಂಕಾರಿಕ ಉಡುಪುಗಳನ್ನು ಧರಿಸಿಕೊಂಡು ಬರುವುದನ್ನು ನಿಷೇಧಿಸಲಾಗಿದೆ.

ಸಾದಾ ಬಾಟಲಿಯಲ್ಲಿ ನೀರು: ಅಭ್ಯರ್ಥಿಗಳಿಗೆ ಯಾವುದೇ ಬ್ರ್ಯಾಂಡ್​ನ ಹೆಸರಿಲ್ಲದ ಸಾದಾ ಬಾಟಲಿಯಲ್ಲಿ ಕುಡಿಯುವ ನೀರನ್ನು ಪರೀಕ್ಷಾ ಕೊಠಡಿಗೆ ತೆಗೆದುಕೊಂಡು ಬರಲು ಅವಕಾಶ ಕೊಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.