ಬೆಂಗಳೂರು: ಪಬ್ಜಿ ಗೇಮ್ ಅನ್ನು ಬ್ಯಾನ್ ಮಾಡುವಂತೆ ಕರ್ನಾಟಕ ಸಂಘಟನೆಗಳ ಒಕ್ಕೂಟವು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿರುವ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದೆ.
ಸೈಬರ್ ಕ್ರೈಂ ಇನ್ಸ್ಪೆಕ್ಟರ್ ಯಶವಂತ್ರನ್ನು ಭೇಟಿ ಮಾಡಿ ದೂರು ನೀಡಿದ ಒಕ್ಕೂಟವು, ಇತ್ತೀಚೆಗೆ ಯುವಕರು ಹೆಚ್ಚು ಅವಲಂಭಿತವಾಗಿರುವ ಪಬ್ಜಿ ಗೇಮ್ ಅನ್ನು ಬ್ಯಾನ್ ಮಾಡುವಂತೆ
ಮಾಧ್ಯಮದವರೊಂದಿಗೆ ಮಾತನಾಡಿದ ಒಕ್ಕೂಟದ ಅಧ್ಯಕ್ಷ ನಾಗೇಶ್, ಪಬ್ ಜಿ ಗೇಮ್ಗಾಗಿ ಇತ್ತೀಚೆಗೆ ಯುವಕನೊಬ್ಬ ತಂದೆಯನ್ನೇ ಕೊಲೆ ಮಾಡಿದ್ದಾನೆ. ಈ ಗೇಮ್ನಿಂದಾಗಿ ಮಕ್ಕಳು ದಾರಿ ತಪ್ಪುತ್ತಿದ್ದಾರೆ. ಇದನ್ನು ಬ್ಯಾನ್ ಮಾಡುವಂತೆ ಸೈಬರ್ ಕ್ರೈಂ ಪೊಲೀಸರಿಗೆ ದೂರು ಕೊಟ್ಟಿದ್ದೇನೆ. ಒಂದು ವೇಳೆ ಪೊಲೀಸರು ಕ್ರಮ ಕೈಗೊಳ್ಳದಿದ್ದರೆ ಕೋರ್ಟ್ ಮೂಲಕ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.