ETV Bharat / city

ಮೇ 30ರೊಳಗೆ ಆನ್​ಲೈನ್​ ಮೂಲಕ ಪದವಿ ಪಠ್ಯಕ್ರಮ ಮುಗಿಸಿ: ಸಚಿವ ಅಶ್ವತ್ಥ್​​ ನಾರಾಯಣ - syllabus of degree

ಮೇ 30ರೊಳಗೆ ಪದವಿ ತರಗತಿಗಳ ಪಠ್ಯಕ್ರಮವನ್ನು ಪೂರ್ಣಗೊಳಿಸಬೇಕೆಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್​​ ನಾರಾಯಣ ಎಲ್ಲಾ ವಿಶ್ವವಿದ್ಯಾಲಯಗಳಿಗೆ ಸೂಚಿಸಿದ್ದಾರೆ.

C. N. Ashwath Narayan
ಡಾ.ಸಿ.ಎನ್.ಅಶ್ವತ್ಥನಾರಾಯಣ
author img

By

Published : May 9, 2020, 6:33 PM IST

ಬೆಂಗಳೂರು: ಲಾಕ್‌ಡೌನ್‌ನಿಂದ ಪದವಿ ವಿದ್ಯಾರ್ಥಿಗಳ ಶಿಕ್ಷಣ ಮತ್ತಷ್ಟು ವಿಳಂಬವಾಗದಂತೆ ನೋಡಿಕೊಳ್ಳುವ ಸಲುವಾಗಿ ಪದವಿ ತರಗತಿಗಳ ಪಠ್ಯಕ್ರಮವನ್ನು ಆನ್‌ಲೈನ್‌ನಲ್ಲಿ ಮುಂದುವರೆಸಿ, ಮೇ 30ರೊಳಗೆ ಪೂರ್ಣಗೊಳಿಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್​​ ನಾರಾಯಣ ಎಲ್ಲಾ ವಿಶ್ವವಿದ್ಯಾಲಯಗಳಿಗೆ ಸೂಚಿಸಿದ್ದಾರೆ.

ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ವಿಶ್ವವಿದ್ಯಾಲಯಗಳ ಕುಲಪತಿಗಳೊಂದಿಗೆ ಶನಿವಾರ ವಿಡಿಯೋ ಕಾನ್ಫರೆನ್ಸ್‌ ನಡೆಸಿದ ಡಾ. ಅಶ್ವತ್ಥ್​ ನಾರಾಯಣ, ಪದವಿ ಪರೀಕ್ಷೆಗಳ ಕುರಿತು ಮೇ 17ರ ನಂತರ ಮತ್ತೊಮ್ಮೆ ಚರ್ಚೆ ನಡೆಸಿ, ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಡಾ. ಅಶ್ವತ್ಥ್​ ನಾರಾಯಣ, ಸಚಿವ

ಎಲ್ಲಾ ಪ್ರಾಧ್ಯಾಪಕರು ಕಾಲೇಜಿಗೆ ಬಂದು ಆನ್‌ಲೈನ್‌ ಮೂಲಕ ಪಾಠ, ಪ್ರವಚನ ಮಾಡಬೇಕು. ಸರ್ಕಾರಿ ಕಾಲೇಜಿನ ಪ್ರಾಧ್ಯಾಪಕರು ಕಾಲೇಜಿಗೆ ಬರುತ್ತಿದ್ದು, ಖಾಸಗಿ ಕಾಲೇಜಿನವರೂ ಈ ಕ್ರಮ ಪಾಲಿಸಬೇಕು. ಮೇ 30ರೊಳಗೆ ಪ್ರಥಮ, ದ್ವಿತೀಯ ಹಾಗೂ ಅಂತಿಮ ವರ್ಷದ ಪದವಿ ತರಗತಿಗಳ ಪಠ್ಯಕ್ರಮವನ್ನು ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ಲಾಕ್‌ಡೌನ್‌ನಿಂದ ಪದವಿ ಪರೀಕ್ಷೆ ಕುರಿತ ಗೊಂದಲ ನಿವಾರಣೆ ಆಗಿಲ್ಲ. ಮಹಾರಾಷ್ಟ್ರ ಮಾದರಿಯಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿ, ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೇ ಮುಂದಿನ ತರಗತಿಗೆ ತೇರ್ಗಡೆ ಮಾಡಬಹುದು ಎಂಬ ಸಲಹೆ ಕೇಳಿ ಬಂದಿದೆ. ಆದರೆ ಈ ಬಗ್ಗೆ ಮೇ 17ರ ನಂತರ ಎಲ್ಲಾ ವಿಶ್ವವಿದ್ಯಾಲಯಗಳ ಕುಲಪತಿಗಳ ಜತೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ರಾಜ್ಯದ ಎಲ್ಲಾ ವಿವಿಗಳಲ್ಲಿ ಏಕರೂಪದ ಪಠ್ಯಕ್ರಮ
ಈ ಮಧ್ಯೆ ಗುಣಮಟ್ಟದ ಶಿಕ್ಷಣ ಹಾಗೂ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ದೃಷ್ಟಿಯಿಂದ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಜಾರಿಗೊಳಿಸಲು ಉದ್ಧೇಶಿಸಿರುವ ಏಕರೂಪದ ಪಠ್ಯಕ್ರಮದ ಬಗ್ಗೆ 15 ದಿನದೊಳಗೆ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.

ಏಕರೂಪ ಪಠ್ಯಕ್ರಮದ ಸಂಬಂಧ ಈಗಾಗಲೇ ಐದು ಸಮಿತಿಗಳನ್ನು ರಚಿಸಲಾಗಿದೆ. ಈ ಸಮಿತಿಯು ಉನ್ನತ ಶಿಕ್ಷಣದ ವಿಷನ್ ‌ಗ್ರೂಪ್ ಅಡಿ ರಚಿಸಿರುವ ಟಾಸ್ಕ್‌ ಫೋರ್ಸ್‌ ಜತೆ ಚರ್ಚಿಸಿ ಅಂತಿಮ ವರದಿ ಸಲ್ಲಿಸಬೇಕು. ಅದನ್ನು ಆಧರಿಸಿ ವಿಶ್ವವಿದ್ಯಾಲಯಗಳ ಕುಲಪತಿಗಳು, ಡೀನ್‌ಗಳು, ಸಿಂಡಿಕೇಟ್‌ ಸದಸ್ಯರು, ವಿಷಯ ತಜ್ಞರು, ಕೈಗಾರಿಕೋದ್ಯಮಿಗಳು, ಅಗತ್ಯ ಬಿದ್ದಲ್ಲಿ ವಿದೇಶಿ ತಜ್ಞರೊಡನೆ ಚರ್ಚಿಸಿ 'ಏಕರೂಪ ಪಠ್ಯಕ್ರಮ'ದ ರೂಪುರೇಷೆ ಸಿದ್ಧವಾಗಲಿದೆ. ಈ ಪ್ರಕ್ರಿಯೆ ತ್ವರಿತವಾದರೆ ಮುಂದಿನ ವರ್ಷದಿಂದಲೇ ಏಕರೂಪದ ಪಠ್ಯಕ್ರಮ ಜಾರಿಗೊಳಿಸಲು ಅನುಕೂಲವಾಗುತ್ತದೆ ಎಂದು ಅವರು ಹೇಳಿದರು.

ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ವೈ.ಎಸ್‌.ಸಿದ್ದೇಗೌಡ, ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಜಿ.ಹೇಮಂತ್‌ ಕುಮಾರ್‌, ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ರಾಮಚಂದ್ರಗೌಡ, ವಿಟಿಯು ಕುಲಪತಿ ಪ್ರೊ. ಕರಿಸಿದ್ದಪ್ಪ ಹಾಗೂ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಸ್‌.ವಿದ್ಯಾಶಂಕರ್‌ ಅವರನ್ನೊಳಗೊಂಡ ಸಮಿತಿಯು ಈ ಬಗ್ಗೆ ಸಮಗ್ರವಾಗಿ ಅಧ್ಯಯನ ನಡೆಸಲಿದೆ.

ಮೌಲ್ಯಮಾಪನ ವ್ಯವಸ್ಥೆ ಸುಧಾರಣೆ
ಇದರ ಜತೆಗೆ "ಪದವಿ ಶಿಕ್ಷಣದ ಮೌಲ್ಯಮಾಪನ ವ್ಯವಸ್ಥೆಯಲ್ಲಿ ಸುಧಾರಣೆ ತರುವ ಸಂಬಂಧ ಸೋಮವಾರದೊಳಗೆ ಸಮಿತಿ ರಚಿಸಿ, ಆ ಸಮಿತಿ ಮುಂದಿನ 15 ದಿನದೊಳಗೆ ತನ್ನ ವರದಿ ಸಲ್ಲಿಸಬೇಕು ಎಂದು ಸಚಿವರು ಸೂಚಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.