ETV Bharat / city

ಜುಲೈ 5ರ ಬಳಿಕ ಪ್ರತಿ ಭಾನುವಾರ ರಾಜ್ಯಾದ್ಯಂತ ಸಂಪೂರ್ಣ ಲಾಕ್‌ಡೌನ್​​! - Karnataka lockdown news

ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆ ಇಂದು ಸಿಎಂ ನಡೆಸಿದ ಸಭೆಯಲ್ಲಿ ನಿರ್ಧರಿಸಲಾಗಿದೆ. ಅದರಂತೆ ಎಸ್ಎಸ್ಎಲ್​ಸಿ ಪರೀಕ್ಷೆ ಬಳಿಕ ಜುಲೈ 5ರಿಂದ ಪ್ರತಿ ಭಾನುವಾರ ರಾಜ್ಯಾದ್ಯಂತ ಸಂಪೂರ್ಣ ಲಾಕ್‌ಡೌನ್ ಮಾಡಲು ನಿರ್ಧರಿಸಲಾಗಿದೆ.

lockdown
ಸಿಎಂ ಸಭೆ
author img

By

Published : Jun 27, 2020, 8:01 PM IST

ಬೆಂಗಳೂರು: ಜುಲೈ 5ರಿಂದ ಪ್ರತಿ ಭಾನುವಾರ ರಾಜ್ಯಾದ್ಯಂತ ಸಂಪೂರ್ಣ ಲಾಕ್​ಡೌನ್ ಮಾಡಲು ನಿರ್ಧರಿಸಲಾಗಿದೆ.

ಇಂದು ಕಾವೇರಿ ನಿವಾಸದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಈ ಬಗ್ಗೆ ನಿರ್ಧಾರ ಕೈಗೊಂಡಿದ್ದಾರೆ. ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆ ಸಭೆಯಲ್ಲಿ ನಿರ್ಧರಿಸಲಾಗಿದೆ. ಅದರಂತೆ ಎಸ್ಎಸ್ಎಲ್​ಸಿ ಪರೀಕ್ಷೆ ಬಳಿಕ ಜುಲೈ 5ರಿಂದ ಪ್ರತಿ ಭಾನುವಾರ ಸಂಪೂರ್ಣ ಲಾಕ್‌ಡೌನ್ ಮಾಡಲು ನಿರ್ಧರಿಸಲಾಗಿದೆ.

ಇದರ ಜೊತೆಗೆ ಸರ್ಕಾರಿ ನೌಕರರು ವಾರದಲ್ಲಿ 5 ದಿನ ಮಾತ್ರ ಕರ್ತವ್ಯಕ್ಕೆ ಹಾಜರಾಗಬೇಕು. ವಾರದಲ್ಲಿ ಐದು ದಿನ ಮಾತ್ರ ಕಚೇರಿ ಇರಲಿದ್ದು, ಪ್ರತಿ ಶನಿವಾರವೂ ರಜೆ ನೀಡಲು ತೀರ್ಮಾನಿಸಲಾಗಿದೆ.

ಕಾವೇರಿ ನಿವಾಸದಲ್ಲಿ ನಡೆದ ಸಭೆ

ಭಾನುವಾರ(ಜೂನ್ 28)ದಿಂದ ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂ ಜಾರಿಯಾಗಲಿದೆ. ಸದ್ಯ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ರಾತ್ರಿ ಕರ್ಫ್ಯೂ ಇತ್ತು. ಇದೀಗ ರಾತ್ರಿ ಕರ್ಫ್ಯೂ ಅವಧಿಯನ್ನು ಒಂದು ತಾಸು ವಿಸ್ತರಿಸಿದ್ದು, ರಾತ್ರಿ ಎಂಟು ಗಂಟೆಯಿಂದಲೇ ಜಾರಿಯಾಗಲಿದೆ. ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಮೂರು ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಇತ್ತ ತಜ್ಞರ‌ ಸಮಿತಿಯೂ ಈ ನಿಟ್ಟಿನಲ್ಲಿ ವರದಿ ನೀಡಿತ್ತು. ಈ ಬಗ್ಗೆ ಇಂದು ನಡೆದ ಸಭೆಯಲ್ಲಿ ಚರ್ಚೆ ನಡೆಸಿದ ಸಿಎಂ, ತಜ್ಞರ ವರದಿ ಆಧರಿಸಿ ಕಠಿಣ ಕ್ರಮ ಕೈಗೊಳ್ಳಲು ನಿರ್ಧರಿಸಿದ್ದಾರೆ. ಈ ಸಂಬಂಧ ಸರ್ಕಾರ ಸದ್ಯದಲ್ಲೇ ಅಧಿಕೃತ ಆದೇಶ ಹೊರಡಿಸಲಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.