ETV Bharat / city

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಗೂಂಡಾಗಿರಿಗೆ ಖಂಡನೆ: ಕ್ರಮಕ್ಕೆ ಒತ್ತಾಯಿಸಿ ಕಟೀಲ್ ಆಗ್ರಹ - hooliganism in West Bengal

ಬಿಜೆಪಿ ಪಶ್ಚಿಮ ಬಂಗಾಳ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಕಾರಿನ ಮೇಲೆ ನಿನ್ನೆ ನಡೆದ ದಾಳಿಯನ್ನು ಖಂಡಿಸಿದ ಕಟೀಲ್​​, ಸೋಲಿನ ಹತಾಶೆಯಿಂದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತರು ತಮ್ಮ ಗೂಂಡಾಗಿರಿ ಪ್ರದರ್ಶಿಸುತ್ತಿದ್ದಾರೆ ಎಂದರು.

ಕಟೀಲ್ ಆಗ್ರಹ
ಕಟೀಲ್ ಆಗ್ರಹ
author img

By

Published : Apr 8, 2021, 3:07 PM IST

ಬೆಂಗಳೂರು: ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಗೂಂಡಾಗಿರಿ ಹೆಚ್ಚುತ್ತಿದ್ದು, ಇದರ ವಿರುದ್ಧ ಚುನಾವಣಾ ಆಯೋಗ ಕಠಿಣ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ.

ಬಿಜೆಪಿ ಪಶ್ಚಿಮ ಬಂಗಾಳ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಕಾರಿನ ಮೇಲೆ ನಿನ್ನೆ ನಡೆದ ದಾಳಿ ಖಂಡಿಸಿದ ಅವರು, ಸೋಲಿನ ಹತಾಶೆಯಿಂದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತರು ತಮ್ಮ ಗೂಂಡಾಗಿರಿ ಪ್ರದರ್ಶಿಸುತ್ತಿದ್ದಾರೆ. ಕೇಂದ್ರ ಸರ್ಕಾರವು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಸಿದ ಅಭಿವೃದ್ಧಿ ಕಾರ್ಯಗಳು, ಜನಪರ ಯೋಜನೆಗಳ ಅನುಷ್ಠಾನದಿಂದಾಗಿ ಟಿಎಂಸಿ ಸೋಲಿನ ಭೀತಿಯಲ್ಲಿದೆ. ಅದೇ ಕಾರಣಕ್ಕಾಗಿ ಬಾಂಬ್ ದಾಳಿ, ಕಲ್ಲೆಸೆತದಂತಹ ದುಷ್ಕೃತ್ಯಗಳಿಗೆ ಅವರು ಮುಂದಾಗುತ್ತಿದ್ದಾರೆ ಎಂದು ದೂರಿದರು.

ಈ ಮಾದರಿಯ ಟಿಎಂಸಿ ಗೂಂಡಾ ಪ್ರವೃತ್ತಿಗೆ ಪಶ್ಚಿಮ ಬಂಗಾಳದ ಮತದಾರರು ಸರಿಯಾದ ಉತ್ತರ ನೀಡಲಿದ್ದಾರೆ. ಬಿಜೆಪಿಯನ್ನು ಅಲ್ಲಿ ಅಧಿಕಾರದ ಗದ್ದುಗೆಗೆ ಏರಿಸಲಿದ್ದಾರೆ ಎಂಬ ವಿಶ್ವಾಸವನ್ನು ಕಟೀಲ್ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ.. ಸಿಡಿ ಲೇಡಿಗೆ ಬಂದೋಬಸ್ತ್​ ಕಾರ್ಯ ನಿರ್ವಹಿಸಿದ್ದ ಪೊಲೀಸರಲ್ಲಿ ಕಾಣಿಸಿಕೊಂಡ ಕೊರೊನಾ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.