ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣದಲ್ಲಿ ಪಾರ್ಟಿ ಆಯೋಜಕ ವಿರೇನ್ ಖನ್ನಾಗೆ ಇಂದು ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.
ಇದನ್ನೂ ಓದಿ...ಮೂರು ತಿಂಗಳ ಬಳಿಕ ಜೈಲಿನಿಂದ ಹೊರಬಂದ ಸಂಜನಾ ಗಲ್ರಾನಿ
ಮೂರೂವರೆ ತಿಂಗಳಿಂದ ಪರಪ್ಪನ ಆಗ್ರಹಾರ ಜೈಲಿನಲ್ಲಿರುವ ಡ್ರಗ್ಸ್ ಪೆಡ್ಲರ್ ವಿರೇನ್ ಖನ್ನಾ, ಈ ಪ್ರಕರಣದಲ್ಲಿ ಜಾಮೀನು ಪಡೆದ ಮತ್ತೊಬ್ಬ ಆರೋಪಿಯಾಗಿದ್ದಾನೆ. ಕೆಲ ದಿನಗಳ ಹಿಂದೆ ನಟಿ ಸಂಜನಾ ಗಲ್ರಾನಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಜಾಮೀನು ಸಿಕ್ಕಿತ್ತು.