ETV Bharat / city

ಒಕ್ಕಲಿಗರ ಸಂಘಕ್ಕೆ ಡಿ.31ರೊಳಗೆ ಚುನಾವಣೆ ನಡೆಸಿ: ಹೈಕೋರ್ಟ್ ಆದೇಶ - dec 31 vokkaliga sangh election

2021ರ ಡಿಸೆಂಬರ್ 31ರೊಳಗೆ ರಾಜ್ಯ ಒಕ್ಕಲಿಗರ ಸಂಘಕ್ಕೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.

ಹೈಕೋರ್ಟ್
ಹೈಕೋರ್ಟ್
author img

By

Published : Sep 9, 2021, 10:01 PM IST

ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘಕ್ಕೆ 2021ರ ಡಿಸೆಂಬರ್ 31ರೊಳಗೆ ಚುನಾವಣೆ ನಡೆಸಿ, ಇಲ್ಲದಿದ್ದಲ್ಲಿ ನ್ಯಾಯಾಂಗ ನಿಂದನೆ ಅಡಿ ಕ್ರಮ ಜರುಗಿಸಲಾಗುತ್ತದೆ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಎಚ್ಚರಿಕೆ ನೀಡಿದೆ.

ಸಂಘಕ್ಕೆ ಚುನಾವಣೆ ನಡೆಸುವಂತೆ ಕೋರಿ ರಾಜಾಜಿನಗರ ನಿವಾಸಿ ಗುರುರಾಜ್ ಎಂಬುವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಪೀಠ ಸಂಘಕ್ಕೆ ಇದೇ 2021ರ ಡಿಸೆಂಬರ್ 31ರೊಳಗೆ ಚುನಾವಣೆ ನಡೆಸಿ ಎಂದು ತಾಕೀತು ಮಾಡಿದೆ.

ಸಂಘಕ್ಕೆ 2014ರ ಜನವರಿ 5 ರಂದು ಚುನಾವಣೆ ನಡೆಸಲಾಗಿತ್ತು. ಆದರೆ, ಅವಿಶ್ವಾಸ ಮಂಡನೆ ಹಿನ್ನೆಲೆಯಲ್ಲಿ ಸಂಘದ ಅಧ್ಯಕ್ಷರು ಪದಚ್ಯುತಗೊಂಡಿದ್ದರು. ಆ ಬಳಿಕ ಸರ್ಕಾರ ಸಂಘಕ್ಕೆ 6 ತಿಂಗಳ ಅವಧಿಗೆ ಆಡಳಿತಾಧಿಕಾರಿ ನೇಮಿಸಿತ್ತು. ನಂತರವೂ ಆಡಳಿತಾಧಿಕಾರಿ ಮುಂದುವರೆಸಿಕೊಂಡು ಬರುವ ಕ್ರಮ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿತ್ತು.

2021ರ ಮಾರ್ಚ್ 5ರಂದು ಸಂಘಕ್ಕೆ 3 ತಿಂಗಳ ಒಳಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ಆದೇಶಿಸಿತ್ತು. ಈ ವೇಳೆ ಕೋವಿಡ್ ಕಾರಣ ಹೇಳಿದ್ದ ಸರ್ಕಾರ ಚುನಾವಣೆ ನಡೆಸಲು ನೀಡಿದ್ದ ಗಡುವು ವಿಸ್ತರಿಸುವಂತೆ ಮನವಿ ಮಾಡಿತ್ತು. ಕೋರಿಕೆ ಪರಿಗಣಿಸಿದ್ದ ನ್ಯಾಯಾಲಯ ಪರಿಸ್ಥಿತಿ ಸುಧಾರಿಸಿದ ನಂತರ ಚುನಾವಣೆ ನಡೆಸಲು ಸೂಚಿಸಿತ್ತು. ಪ್ರಸ್ತುತ ಕೋವಿಡ್ ಸೋಂಕು ಇಳಿಮುಖವಾಗಿದ್ದು, ಚುನಾವಣೆ ನಡೆಸುವಂತೆ ಅರ್ಜಿದಾರರು 2021ರ ಆಗಸ್ಟ್ 3 ಮತ್ತು 9ರಂದು ಸಂಘದ ಚುನಾವಣಾಧಿಕಾರಿಗೆ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸಿದ್ದರು.

ಆದರೆ, ಸರ್ಕಾರ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ ಸಂಘಕ್ಕೆ ಚುನಾವಣೆ ನಡೆಸಲು ಸರ್ಕಾರ ಹಾಗೂ ಸಂಬಂಧಿತ ಪ್ರಾಧಿಕಾರಗಳಿಗೆ ನಿರ್ದೇಶಿಸಿಬೇಕು ಎಂದು ಅರ್ಜಿದಾರರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.