ETV Bharat / city

ಬಿಟ್ ಕಾಯಿನ್ ವಿಚಾರದಲ್ಲಿ ಕಾಂಗ್ರೆಸ್​​ನಿಂದ ಆಧಾರರಹಿತ ಆರೋಪ: ಅರುಣ್ ಸಿಂಗ್ - ಬಿಜೆಪಿ ವಿರುದ್ಧ ಬಿಟ್ ಕಾಯಿನ್ ಆರೋಪ

ಕಾಂಗ್ರೆಸ್ ಮುಖಂಡರ ಬಳಿ ಯಾವುದೇ ವಿಷಯಗಳಿಲ್ಲ. ಬಿಟ್ ಕಾಯಿನ್ ಹಗರಣದ ಕುರಿತು ನಮ್ಮ ಮುಖ್ಯಮಂತ್ರಿಗಳು ತಕ್ಷಣ ಕ್ರಮ ಕೈಗೊಂಡಿದ್ದಾರೆ. ಕಾಂಗ್ರೆಸ್ ಬಳಿ ಯಾವುದೇ ವಿಷಯಗಳಿಲ್ಲದ ಕಾರಣ ಅದು ಬಿಜೆಪಿ ಬಗ್ಗೆ ಆಧಾರರಹಿತ ಟೀಕೆ ಮಾಡುತ್ತಿದೆ ಎಂದು ಅರುಣ್ ಸಿಂಗ್ ಟೀಕಿಸಿದರು.

ಅರುಣ್ ಸಿಂಗ್
ಅರುಣ್ ಸಿಂಗ್
author img

By

Published : Nov 8, 2021, 9:49 PM IST

ಬೆಂಗಳೂರು: ಕಾಂಗ್ರೆಸ್​​ಗೆ ಆರೋಪ ಮಾಡಲು ಯಾವುದೇ ವಿಷಯಗಳಿಲ್ಲ. ಹಾಗಾಗಿ ಬಿಟ್ ಕಾಯಿನ್ ಹಗರಣದಲ್ಲಿ ಬಿಜೆಪಿ ನಾಯಕರು ಶಾಮೀಲಾಗಿದ್ದಾರೆ ಎಂದು ಆಧಾರರಹಿತ ಆರೋಪ ಮಾಡುತ್ತಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ತಿರುಗೇಟು ನೀಡಿದ್ದಾರೆ.

ನಗರದ ಕೆ.ಕೆ.ಗೆಸ್ಟ್ ಹೌಸ್​​ನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮುಖಂಡರ ಬಳಿ ಯಾವುದೇ ವಿಷಯಗಳಿಲ್ಲ. ಬಿಟ್ ಕಾಯಿನ್ ಹಗರಣದ ಕುರಿತು ನಮ್ಮ ಮುಖ್ಯಮಂತ್ರಿಗಳು ತಕ್ಷಣ ಕ್ರಮ ಕೈಗೊಂಡಿದ್ದಾರೆ. ಕಾಂಗ್ರೆಸ್ ಬಳಿ ಯಾವುದೇ ವಿಷಯಗಳಿಲ್ಲದ ಕಾರಣ ಅದು ಬಿಜೆಪಿ ಬಗ್ಗೆ ಆಧಾರರಹಿತ ಟೀಕೆ ಮಾಡುತ್ತಿದೆ ಎಂದು ಟೀಕಿಸಿದರು.

ಕಾಂಗ್ರೆಸ್ ಪಕ್ಷವು ಒಡೆದ ಮನೆಯಾಗಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ನಡುವೆ ತೀವ್ರ ಭಿನ್ನಾಭಿಪ್ರಾಯವಿದೆ. ಕಾಂಗ್ರೆಸ್ ಒಳಜಗಳ ಕೇವಲ ಕರ್ನಾಟಕದಲ್ಲಷ್ಟೇ ಇಲ್ಲ. ಛತ್ತೀಸ್‌ಗಡ, ಪಂಜಾಬ್ ರಾಜ್ಯಗಳಲ್ಲೂ ಒಳಜಗಳ ಇದೆ. ಕಾಂಗ್ರೆಸ್ ನಾಯಕತ್ವದ ವೈಫಲ್ಯವೇ ಇದಕ್ಕೆ ಕಾರಣ ಎಂದರು.

ಪೆಟ್ರೋಲ್, ಡೀಸೆಲ್ ದರ ಕಡಿಮೆ ಮಾಡಿದ ಪ್ರಧಾನಿಗಳಾದ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸುತ್ತೇವೆ. ಬೂತ್‌ಗಳಲ್ಲಿ ಪಕ್ಷವನ್ನು ಬಲಪಡಿಸುವುದು, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗರಿಷ್ಠ ಸ್ಥಾನಗಳನ್ನು ಗೆಲ್ಲುವ ಬಗ್ಗೆ ಚರ್ಚಿಸುತ್ತೇವೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಅತ್ಯಧಿಕ ಬಹುಮತದಿಂದ ಗೆಲ್ಲುವ ಕಡೆ ಪಕ್ಷವು ಗಮನ ಕೇಂದ್ರೀಕರಿಸಲಿದೆ ಎಂದು ತಿಳಿಸಿದರು.

ಸಿದ್ದರಾಮಯ್ಯ ಸಿಂದಗಿಯಲ್ಲಿ ನಮ್ಮ ವಿರುದ್ಧ ದಲಿತ ವಿರೋಧಿ ಪ್ರಚಾರ ಮಾಡಿದರು, ಅಷ್ಟಾದರೂ ಕೂಡ ನಾವು ಬಹುದೊಡ್ಡ ಅಂತರದಲ್ಲಿ ಗೆದ್ದಿದ್ದೇವೆ. ಹಾನಗಲ್​​ನಲ್ಲಿ ಕಡಿಮೆ ಅಂತರದಿಂದ ಸೋತಿದ್ದೇವೆ. ಒಟ್ಟಾರೆ ಬಿಜೆಪಿ ಸಾಧನೆ ಬಗ್ಗೆ ನಮಗೆ ಸಮಾಧಾನ ಇದೆ ಎಂದು ಅರುಣ್ ಸಿಂಗ್ ಫಲಿತಾಂಶದ ಕುರಿತು ವ್ಯಾಖ್ಯಾನಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.